By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲೋಕಾಯುಕ್ತ ಕಾನೂನು ಜಾರಿಗೆ ಒತ್ತಾಯಿಸಿ ಅಣ್ಣಾ ಹಜಾರೆ ಆಮರಣಾಂತ ಉಪವಾಸ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಲೋಕಾಯುಕ್ತ ಕಾನೂನು ಜಾರಿಗೆ ಒತ್ತಾಯಿಸಿ ಅಣ್ಣಾ ಹಜಾರೆ ಆಮರಣಾಂತ ಉಪವಾಸ

ರಾಷ್ಟ್ರೀಯ-NationalLatest

ಲೋಕಾಯುಕ್ತ ಕಾನೂನು ಜಾರಿಗೆ ಒತ್ತಾಯಿಸಿ ಅಣ್ಣಾ ಹಜಾರೆ ಆಮರಣಾಂತ ಉಪವಾಸ

Anna Hazare Announces Indefinite Hunger Strike Over Maharashtra Government’s Lokayukta Delay

Published December 13, 2025
Share
2 Min Read
Anna Hazare Anna Hazare Anna Hazare
SHARE

ರಾಲೇಗನ್ ಸಿದ್ಧಿ | ಡಿಸೆಂಬರ್ 13: ಲೋಕಾಯುಕ್ತ ಕಾನೂನು ಜಾರಿಗೆ ಒತ್ತಾಯಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಘೋಷಿಸಿದ್ದಾರೆ. ಇದು ತಮ್ಮ ಅಂತಿಮ ಹೋರಾಟ ಎಂದು ಹೇಳಿರುವ ಅವರು, ಸಾರ್ವಜನಿಕ ಕಲ್ಯಾಣಕ್ಕಾಗಿ ಬಲವಾದ ಲೋಕಾಯುಕ್ತ ಕಾನೂನು ಅತ್ಯಗತ್ಯವಾಗಿದೆ ಎಂದು ಒತ್ತಾಯಿಸಿದರು.

ಜನವರಿ 30ರಿಂದ ರಾಲೇಗನ್ ಸಿದ್ಧಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸುವುದಾಗಿ ಪ್ರಕಟಿಸಿರುವ ಅಣ್ಣಾ ಹಜಾರೆ, ಮಹಾರಾಷ್ಟ್ರ ಸರ್ಕಾರವು ಹಲವು ವರ್ಷಗಳಿಂದ ಈ ಕಾನೂನು ಜಾರಿಗೆ ನಿರ್ಲಕ್ಷ ತೋರಿಸುತ್ತಿದೆ ಎಂದು ಆರೋಪಿಸಿದರು. “ಸರ್ಕಾರ ಪ್ರದರ್ಶನಕ್ಕಾಗಿ ಅಲ್ಲ, ಸಾರ್ವಜನಿಕ ಹಿತಕ್ಕಾಗಿ ಕೆಲಸ ಮಾಡಬೇಕು” ಎಂದು ಅವರು ಕಿಡಿಕಾರಿದರು.

2011ರಲ್ಲಿ ನವದೆಹಲಿಯ ಜಂತರ್ ಮಂತರ್‌ನಲ್ಲಿ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ದೇಶದ ಗಮನ ಸೆಳೆದಿದ್ದ ಅಣ್ಣಾ ಹಜಾರೆ, 2022ರಲ್ಲಿ ಮಹಾರಾಷ್ಟ್ರದಲ್ಲಿ ಲೋಕಾಯುಕ್ತ ಕಾಯ್ದೆ ಜಾರಿಗೆ ಒತ್ತಾಯಿಸಿ ರಾಲೇಗನ್ ಸಿದ್ಧಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸಿದ್ದರು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಕೇಂದ್ರ ಕೃಷಿ ಸಚಿವರು ಮಧ್ಯಸ್ಥಿಕೆ ವಹಿಸಿ ಉಪವಾಸ ಹಿಂಪಡೆಯುವಂತೆ ಮನವೊಲಿಸಿದ್ದರು.

ಆ ನಂತರ ಲೋಕಾಯುಕ್ತ ಕಾನೂನು ಜಾರಿಗೆ ಸಂಬಂಧಿಸಿದಂತೆ ಒಂದು ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯು ಕಾಯ್ದೆಯ ಕರಡನ್ನು ಸಿದ್ಧಪಡಿಸಿತ್ತು. ಈ ಕರಡು ಮಹಾರಾಷ್ಟ್ರ ವಿಧಾನಸಭೆಯ ಎರಡೂ ಸದನಗಳಲ್ಲಿ ಮಂಡನೆಯಾಗಿ ಅಂಗೀಕಾರ ಪಡೆದು, ಅಂತಿಮ ಒಪ್ಪಿಗೆಗಾಗಿ ರಾಷ್ಟ್ರಪತಿಗಳಿಗೆ ಕಳುಹಿಸಲಾಗಿತ್ತು. ಆದರೆ ಆ ಬಳಿಕ ಕಾಯ್ದೆ ಜಾರಿಗೆ ಬಂದಿಲ್ಲ ಎಂದು ಅಣ್ಣಾ ಹಜಾರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾಯ್ದೆ ಜಾರಿಗೆ ಸಂಬಂಧಿಸಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಏಳು ಪತ್ರಗಳನ್ನು ಬರೆದಿದ್ದೇನೆ. ಆದರೆ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು. “ಈ ಕಾನೂನು ಜಾರಿಗೆ ಯಾಕೆ ವಿಳಂಬವಾಗುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ” ಎಂದು ಹೇಳಿದರು.

ಜನವರಿ 30ರಂದು ಉಪವಾಸ ಆರಂಭಿಸುವ ದಿನ ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯಾಗಿದ್ದು, ಅದೇ ದಿನದಿಂದ ಹೋರಾಟ ಆರಂಭಿಸುವುದು ಸಾಂಕೇತಿಕ ಮಹತ್ವ ಹೊಂದಿದೆ ಎಂದು ಅಣ್ಣಾ ಹಜಾರೆ ತಿಳಿಸಿದರು. “ನನ್ನ ಜೀವನವನ್ನೆಲ್ಲ ದೇಶದ ಮತ್ತು ಸಮಾಜದ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದೇನೆ. ದೇಹದಲ್ಲಿ ಜೀವ ಇರುವವರೆಗೂ ಹೋರಾಟ ಮುಂದುವರಿಸುತ್ತೇನೆ. ಕಾನೂನು ಜಾರಿಯಾಗುವವರೆಗೂ ಹೋರಾಡುತ್ತೇನೆ, ಇಲ್ಲವಾದರೆ ಅಲ್ಲಿಯೇ ಸಾಯುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದರು.

ಈ ದೇಶ ಕಾನೂನಿನ ಆಧಾರದಲ್ಲಿ ನಡೆಯುತ್ತಿದೆ. ಈವರೆಗೆ ನಾನು 10 ಕಾನೂನುಗಳ ರೂಪಿಕೆಗೆ ಸಹಕಾರ ನೀಡಿದ್ದೇನೆ. ಈಗ ರಾಜ್ಯಕ್ಕೆ ಬಲವಾದ ಲೋಕಾಯುಕ್ತ ಕಾನೂನು ಅಗತ್ಯವಾಗಿದೆ ಎಂದು ಅಣ್ಣಾ ಹಜಾರೆ ಹೇಳಿದರು.

You Might Also Like

ತಿಪ್ಪರಲಾಗ ಹಾಕಿದರೂ 2028ಕ್ಕೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ : ಪ್ರಿಯಾಂಕ್ ಖರ್ಗೆ

ವಿಶ್ವವಿಖ್ಯಾತ ಮೈಸೂರು‌ ದಸರಾಗೆ ಗಜಪಡೆಗಳ ತಾಲೀಮು

ಆ್ಯಪಲ್ ಕಂಪನಿಯ ಐಫೋನ್ 16 ಬಿಡುಗಡೆ, ವಿಶೇಷತೆಗಳೇನು..? ಬೆಲೆ ಎಷ್ಟು..?

ಮುಂದಿನ 5 ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಕೆನಾಲ್‌ಗೆ ಕಾಡಾನೆ ಬಿದ್ದು ಮೂರು ದಿನಗಳಾದ್ರೂ ಅಧಿಕಾರಿಗಳ ನಿರ್ಲಕ್ಷ್ಯ

TAGGED:Anna HazareIndefinite Hunger Strike
Share This Article
Facebook Copy Link Print
Previous Article President Draupadi Murmu President Draupadi Murmu President Draupadi Murmu ಡಿಸೆಂಬರ್‌ ಮಂಡ್ಯದ ಮಳವಳ್ಳಿಗೆ 16ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
Next Article Hit And Run Hit And Run Hit And Run ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್‌ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up