ನವದೆಹಲಿ : ಭಾರತದ ಮಾಜಿ ಕ್ರಿಕೆಟಿಗ, ಭಾರತ ತಂಡದ ಮಾಜಿ ಕೋಚ್ ಅಂಶುಮಾನ್ ಗಾಯಕ್ವಾಡ್ (71) ನಿಧನರಾಗಿದ್ದಾರೆ. ದೀರ್ಘಕಾಲದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಕಳೆದ ರಾತ್ರಿ ಇಹಲೋಕತ್ಯಜಿಸಿದ್ದಾರೆ.
ಗಾಯಕ್ವಾಡ್ ಅವರು ತಮಮ್ 22 ವರ್ಷಗಳ ವೃತ್ತಿಜೀವನದಲ್ಲಿ 205 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದಾರೆ. ನಂತರ ಅವರು ಭಾರತ ತಂಡದ ಕೋಚ್ ಆಗಿ ಅಧಿಕಾರ ವಹಿಸಿಕೊಂಡಿದ್ದರು.1998 ರಲ್ಲಿ ಶಾರ್ಜಾದಲ್ಲಿ ಮತ್ತು ದೆಹಲಿಯ ಫಿರೋಜ್‌ಶಾ ಕೋಟ್ಲಾದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಅನಿಲ್ ಕುಂಬ್ಳೆ ಅವರು 1999 ರಲ್ಲಿ ಪಾಕಿಸ್ತಾನದ ವಿರುದ್ಧ ಇನ್ನಿಂಗ್ಸ್ ನಲ್ಲಿ ಎಲ್ಲಾ 10 ವಿಕೆಟ್‌ಗಳನ್ನು ಪಡೆದದ್ದು ಅವರ ವೃತ್ತಿಜೀವನದ ಅದ್ಬುತ ಕ್ಷಣಗಳಾಗಿದ್ದವು.
1974 ಮತ್ತು 1984 ರ ನಡುವೆ, ಅವರು ಭಾರತೀಯ ತಂಡದಲ್ಲಿ ಸುನಿಲ್ ಗವಾಸ್ಕರ್ ಪಾಲುದಾರರಾಗಿ ಎರಡನೇ ಓಪನರ್ ಆಗಿದ್ದರು. ಅವರು ರಾಷ್ಟ್ರೀಯ ಕ್ರಿಕೆಟ್ ಆಟಗಾರರ ಆಯ್ಕೆಗಾರರಾಗಿ ಸೇವೆ ಸಲ್ಲಿಸಿದರು, ಬರೋಡಾ ಕ್ರಿಕೆಟ್ ಅಸೋಸಿಯೇಷನ್‌ನ ಮುಖ್ಯಸ್ಥರಾಗಿದ್ದರು.
ಗಾಯಕ್ವಾಡ್ ಅವರ ಚಿಕಿತ್ಸೆಗಾಗಿ ಬಿಸಿಸಿಐ ಒಂದು ಕೋಟಿ ರೂಪಾಯಿ ಧನಸಹಾಯ ಮಾಡಿತ್ತು. 1983 ರ ವಿಶ್ವಕಪ್ ವಿಜೇತ ತಂಡದ ಸದಸ್ಯರು ಕೂಡ ಆರ್ಥಿಕ ಸಹಾಯ ಮಾಡಿದ್ದರು.
ಅಂಶುಮಾನ್ ಗಾಯಕ್ವಾಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ಆಟಗಾರರಾದ ಕಪಿಲ್‌ದೇವ್, ಸುನೀಲ್ ಗಾವಸ್ಕರ್, ಸಚಿನ್ ತೆಂಡೂಲ್ಕರ್, ರವಿಶಾಸಿ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಸೇರಿದಂತೆ ಹಲವು ಹಾಲಿ ಮತ್ತು ಮಾಜಿ ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ.