By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಲಕ್ಕುಂಡಿಯಲ್ಲಿ ಬಗೆದಷ್ಟೂ ಪತ್ತೆಯಾಗುತ್ತಿವೆ ಪ್ರಾಚ್ಯಾವಶೇಷಗಳು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಲಕ್ಕುಂಡಿಯಲ್ಲಿ ಬಗೆದಷ್ಟೂ ಪತ್ತೆಯಾಗುತ್ತಿವೆ ಪ್ರಾಚ್ಯಾವಶೇಷಗಳು

ರಾಜ್ಯ-KarnatakaLatest

ಲಕ್ಕುಂಡಿಯಲ್ಲಿ ಬಗೆದಷ್ಟೂ ಪತ್ತೆಯಾಗುತ್ತಿವೆ ಪ್ರಾಚ್ಯಾವಶೇಷಗಳು

Archaeological remains are being discovered in Lakkundi

Published February 2, 2026
Share
2 Min Read
Lakkundi Lakkundi Lakkundi
SHARE

ಗದಗ: ಗದಗ (Gadag) ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ (Lakkundi) ಗ್ರಾಮದಲ್ಲಿ ಕಳೆದ 15 ದಿನಗಳಿಂದ ಪುರಾತತ್ವ ಇಲಾಖೆಯ ವತಿಯಿಂದ ಉತ್ಖನನ (Excavation) ಕಾರ್ಯ ತೀವ್ರವಾಗಿ ನಡೆಯುತ್ತಿದೆ. ಗದಗ ತಾಲೂಕಿನ ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಈ ಕಾರ್ಯ ಕೈಗೊಳ್ಳಲಾಗಿದ್ದು, ಇಲಾಖೆಯ ಸುಮಾರು 35ಕ್ಕೂ ಹೆಚ್ಚು ಸಿಬ್ಬಂದಿಗಳು ಅತ್ಯಂತ ಸೂಕ್ಷ್ಮತೆಯಿಂದ ಉತ್ಖನನ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದುವರೆಗೆ ನಡೆದ ಉತ್ಖನನದಲ್ಲಿ 50ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು ಪತ್ತೆಯಾಗಿದ್ದು, ಅವು ಪುರಾತನ ಕಾಲದ ಸಂಸ್ಕೃತಿ, ವಾಸ್ತುಶಿಲ್ಪ ಹಾಗೂ ಜನಜೀವನದ ಕುರಿತು ಮಹತ್ವದ ಮಾಹಿತಿಯನ್ನು ನೀಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅವಶೇಷಗಳು ದೊರಕುವ ನಿರೀಕ್ಷೆಯಿದ್ದು, ಲಕ್ಕುಂಡಿಯ ಐತಿಹಾಸಿಕ ಮಹತ್ವ ಮತ್ತಷ್ಟು ಬೆಳಕಿಗೆ ಬರಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ. ಈ ಉತ್ಖನನ ಕಾರ್ಯವು ರಾಜ್ಯದ ಪುರಾತತ್ವ ಇತಿಹಾಸಕ್ಕೆ ಹೊಸ ಅಧ್ಯಾಯ ಸೇರಿಸಲಿದೆ ಎನ್ನಲಾಗಿದೆ.

ಉತ್ಖನನ ಸ್ಥಳದಲ್ಲೇ ಹಾವು ಪತ್ತೆ:
ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಹಿನ್ನೆಲೆಯಲ್ಲಿ ಸುತ್ತಮುತ್ತಲ ಪ್ರದೇಶದಲ್ಲಿ ಉತ್ಖನನ ಕಾರ್ಯ ಮುಂದುವರಿದಿದ್ದು, ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಉತ್ಖನನದ ವೇಳೆ ಜೀವಂತ ಹಾವು ಪತ್ತೆಯಾದ ಘಟನೆ ನಡೆದಿದೆ.

ಉತ್ಖನನ ನಡೆಯುತ್ತಿದ್ದ ಸ್ಥಳದಲ್ಲೇ ಹಾವು ಚಲಿಸುತ್ತಿರುವುದನ್ನು ಗೋಳಪ್ಪ ಕೋಳಿವಾಡ ಎಂಬ ಸ್ಥಳೀಯ ವ್ಯಕ್ತಿ ಗಮನಿಸಿ, ತಕ್ಷಣವೇ ಉತ್ಖನನ ಕಾರ್ಯದ ಮೇಲ್ವಿಚಾರಕರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿಗಳು ಯಾವುದೇ ಆತಂಕ ಉಂಟಾಗದಂತೆ ಎಚ್ಚರಿಕೆಯಿಂದ ಹಾವನ್ನು ಹಿಡಿದು, ಸುರಕ್ಷಿತವಾಗಿ ಕಾಡಿನ ಪ್ರದೇಶಕ್ಕೆ ಬಿಡಲಾಗಿದೆ.

ಈ ಘಟನೆ ಹಿನ್ನೆಲೆಯಲ್ಲಿ ಕೆಲಕಾಲ ಉತ್ಖನನ ಕಾರ್ಯವನ್ನು ಸ್ಥಗಿತಗೊಳಿಸಲಾಗಿದ್ದು, ನಂತರ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಪುನರಾರಂಭಿಸಲಾಗಿದೆ.

ಸ್ಥಳೀಯರಲ್ಲಿ ಕುತೂಹಲ:
ಕಳೆದ 13 ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಉತ್ಖನನದಲ್ಲಿ ಈಗಾಗಲೇ 45ಕ್ಕೂ ಹೆಚ್ಚು ಪ್ರಾಚ್ಯಾವಶೇಷಗಳು, ಅದರಲ್ಲೂ ಮೂರು ನಾಗರಶಿಲೆಗಳು ಪತ್ತೆಯಾಗಿವೆ. ನಿನ್ನೆ ಮೂರು ಹೆಡೆಯ ಸರ್ಪಶಿಲೆ ದೊರೆತ ಬೆನ್ನಲ್ಲೇ, ಇಂದು ಬೆಳಗ್ಗೆ ಉತ್ಖನನ ಸ್ಥಳದ ‘ಎ’ ಬ್ಲಾಕ್‌ನಲ್ಲಿ ಸುಮಾರು 2 ರಿಂದ 2.5 ಅಡಿ ಉದ್ದದ ಹಾವು ಕಾಣಿಸಿಕೊಂಡಿದೆ. ಬೆಳಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿದೆ.

ಲಕ್ಕುಂಡಿಯ ನಿಧಿಗಳನ್ನು ಸರ್ಪಗಳು ಕಾಯುತ್ತವೆ ಎಂಬ ಸ್ಥಳೀಯರ ನಂಬಿಕೆಗೆ ಈ ಘಟನೆ ಮತ್ತಷ್ಟು ಬಲ ನೀಡಿದ್ದು, ಗ್ರಾಮದಲ್ಲಿ ಕುತೂಹಲ ಮತ್ತು ಚರ್ಚೆಗಳು ಜೋರಾಗಿವೆ. ಉತ್ಖನನ ಪ್ರದೇಶದಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಪುರಾತತ್ವ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

You Might Also Like

10 ಮಂದಿ ಬಾಂಗ್ಲಾದೇಶಿ ಪ್ರಜೆಗಳಿಗೆ 2ವರ್ಷ ಕಾರಾಗೃಹ ಶಿಕ್ಷೆ ಉಡುಪಿ ನ್ಯಾಯಾಲಯ

ಜೆಡಿಎಸ್‌ ನಾಯಕರಿಗೆ ಸಾಕಾಯ್ತಾ ಬಿಜೆಪಿ ಸಹವಾಸ..? ಮೈತ್ರಿಯಲ್ಲಿ ಬಿರುಕು..?

114 ವರ್ಷದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಅಪಘಾತದಲ್ಲಿ ಸಾವು

Congress : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಸ್ಲಿಂ ಮುಖಂಡರು-ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ

ಹೆಬ್ಬಾಳ ಫ್ಲೈ ಓವರ್ ಮೇಲೆ ಬಿಎಂಟಿಸಿ ವೋಲ್ವೋ ಬಸ್‌ನಿಂದ ಸರಣಿ ಅಪಘಾತ

TAGGED:Lakkundi
Share This Article
Facebook Copy Link Print
Previous Article Hezbollah Hezbollah Hezbollah ಲೆಬನಾನ್‌ನಲ್ಲಿ ಹಿಜ್ಬೊಲ್ಲಾ ನಾಯಕ ಅಲಿ ದಾವೂದ್ ಅಮಿಚ್‌ನನ್ನು ಹತ್ಯೆ ಮಾಡಿದ ಇಸ್ರೇಲಿ ಸೇನೆ
Next Article Kite Kite Kite ರಸ್ತೆಯಲ್ಲಿ ಗಾಳಿಪಟದ ದಾರ ಸುತ್ತಿಕೊಂಡು ಯುವಕನ ಕಾಲು ಅರ್ಧ ಕಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up