ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಎಸ್ಐಟಿ (SIT) ಅಧಿಕಾರಿಗಳು ಬಂಧಿಸುತ್ತಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G.Parameshwar) ತಿಳಿಸಿದರು.
ಪ್ರಜ್ವಲ್ ವಾಪಸ್ ಆಗುವ ಕುರಿತು ಮಾತನಾಡಿದ ಅವರು, ವಾರೆಂಟ್ ಇರುವುದರಿಂದ ಪ್ರಜ್ವಲ್ ರೇವಣ್ಣ ಅವರು ಬರುತ್ತಿದ್ದಂತೆ ಅರೆಸ್ಟ್ ಮಾಡಲೇಬೇಕಲ್ಲವೇ? ಎಸ್ಐಟಿಯವರು ಅದನ್ನ ಗಮನಿಸ್ತಾರೆ. ಅವರ ವಿರುದ್ಧ ವಾರೆಂಟ್ ಇರುವುದರಿಂದ ಅರೆಸ್ಟ್ ಮಾಡಬೇಕಲ್ಲ, ಅದನ್ನ ಮಾಡ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಬ್ರಿಜ್ ಭೂಷಣ್ ಶರಣ್ ಸಿಂಗ್ ಪುತ್ರನ ಬೆಂಗಾವಲು ವಾಹನ ಡಿಕ್ಕಿ- ಸ್ಥಳದಲ್ಲೇ ಇಬ್ಬರು ಸಾವು, ಓರ್ವ ಗಂಭೀರ
ಎಲ್ಲಾ ರೀತಿಯಲ್ಲೂ ಕ್ರಮ ತೆಗೆದುಕೊಳ್ಳಬೇಕು. ವಾರೆಂಟ್ ಜಾರಿಯಾಗಿರುವುದರಿಂದ ಅರೆಸ್ಟ್ ಮಾಡಬೇಕು, ಅರೆಸ್ಟ್ ಮಾಡ್ತಾರೆ. ಎಸ್ಐಟಿ ಅವರು ಕಾಯ್ತ ಇದ್ದಾರೆ. ಏರ್ಪೋರ್ಟ್ಗೆ ಬಂದ ಮೇಲೆ ಅರೆಸ್ಟ್ ಮಾಡ್ತಾರೆ. ನಂತರ ಅವರ ಹೇಳಿಕೆಗಳು ಮತ್ತೊಂದು ಪ್ರಕ್ರಿಯೆ ಶುರು ಆಗುತ್ತೆ ಎಂದರು. ಇದನ್ನೂ ಓದಿ: ಕೇಜ್ರಿವಾಲ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್
ಪೆನ್ಡ್ರೈವ್ ಕೇಸಲ್ಲಿ ಹಾಸನದ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಬಂಧನದಲ್ಲಿ ಬಿಜೆಪಿ, ಕಾಂಗ್ರೆಸ್, ದಳ ಅಂತಾ ಪ್ರಶ್ನೆ ಇಲ್ಲ. ಯಾರು ಈ ಪ್ರಕರಣದಲ್ಲಿ ಭಾಗಿಯಾಗಿರುತ್ತಾರೋ ಅಂಥವರನ್ನ ಅರೆಸ್ಟ್ ಮಾಡ್ತಾರೆ. ಇದೀಗ 11 ಜನರನ್ನ ಅರೆಸ್ಟ್ ಮಾಡಿದ್ದಾರೆ. ಯಾರು ಯಾರು ಇದರಲ್ಲಿ ಭಾಗಿಯಾಗಿದ್ದಾರೆ ಎನ್ನುವ ಅನುಮಾನ ಬರುತ್ತೋ, ಅವರನ್ನ ಬಂಧಿಸುತ್ತಾರೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಿಂದೂ ಯುವಕನ ಹಲ್ಲೆ ಪ್ರಕರಣ- ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್ಐ ಅಮಾನತು