ಕೊಪ್ಪಳ: ಕಾಂಗ್ರೆಸ್‌ಗೆ (Congress) ಮತ ಹಾಕಲ್ಲ, ನಾವು ಬಿಜೆಪಿಗೆ (BJP) ಮತ (Vote) ಹಾಕುತ್ತೇವೆ ಎಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ. ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ಈ ಘಟನೆ ನಡೆದಿದೆ.
ಕಳೆದ ರಾತ್ರಿ ಗ್ರಾಮದಲ್ಲಿ ಕಾಂಗ್ರೆಸ್ ಪರವಾಗಿ ಕಾರ್ಯಕರ್ತರು ಪ್ರಚಾರ ಮಾಡುತ್ತಿದ್ದರು. ದ್ಯಾಮಣ್ಣ ಮನೆಗೆ ಬಂದ ಕಾರ್ಯಕರ್ತರು ಕಾಂಗ್ರೆಸ್‌ಗೆ ವೋಟ್ ಹಾಕುವಂತೆ ಮನವಿ ಮಾಡಿದ್ದಾರೆ. ಆದರೆ ದ್ಯಾಮಣ್ಣ ಅವರು ನಾನು ಕಾಂಗ್ರೆಸ್‌ಗೆ ಮತ ಹಾಕಲ್ಲ. ನಾವು ಬಿಜೆಪಿಗೆ ಮತ ಹಾಕುತ್ತೇವೆ ಅಂತ ಹೇಳಿದ್ದಾರೆ. ಇದನ್ನೂ ಓದಿ: 40ಕ್ಕೂ ಹೆಚ್ಚು ಪೊಲೀಸರು ಬಂದು ಹೊಡೆದಿದ್ದಕ್ಕೆ ಸುಳ್ಳು ಹೇಳಿದ್ದೇವೆ
ಇದೇ ಕಾರಣಕ್ಕೆ ಗವಿಸಿದ್ದಪ್ಪ, ಗಂಗಣ್ಣ, ನೀಲಪ್ಪ, ಬಸವರಾಜ್ ಸೇರಿದಂತೆ ಎಂಟಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಜಗಳ ಮಾಡಿ ದ್ಯಾಮಣ್ಣ ಮತ್ತು ಅವರ ಕುಟುಂಬದವರ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ರೇವಣ್ಣ ಅರೆಸ್ಟ್- ಇಂದು ಸಂಜೆಯೊಳಗೆ ಜಡ್ಜ್ ಮುಂದೆ ರೇವಣ್ಣ ಹಾಜರು
ದ್ಯಾಮಣ್ಣ ಬಾಲನಗೌಡರ ಮತ್ತು ಕುಟುಂಬದವರಿಗೆ ಎಂಟಕ್ಕೂ ಹೆಚ್ಚು ಜನರಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಘಟನೆಯಿಂದ ತೀರ್ವವಾಗಿ ಗಾಯಗೊಂಡಿರುವ ದ್ಯಾಮಣ್ಣರನ್ನು ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತೀದೆ. ಇದನ್ನೂ ಓದಿ: ಸಂತ್ರಸ್ತೆ ಕಿಡ್ನಾಪ್ ಕೇಸ್: ಸಂತ್ರಸ್ತ ಮಹಿಳೆ ಸಿಕ್ಕ ತೋಟದ ಸಿಬ್ಬಂದಿ ಸ್ಫೋಟಕ ಹೇಳಿಕೆ
ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ನನ್ನಿಗೂ ಕಿಡ್ನಾಪ್‌ಗೂ ಯಾವುದೇ ಸಂಬಂಧವಿಲ್ಲ ಎಂದ ರೇವಣ್ಣ

