ಹಾಸನ ಜೂನ್ 28: ಹಾಸನದಲ್ಲಿ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಇತ್ತಿಚೆಗೆ ಹಾಸನದ ಮೂಲದ ಇಬ್ಬರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನಪ್ಪಿದ್ದರು, ಇದೀಗ ಆಟೋ ಚಾಲಕನೊಬ್ಬ ಹೃದಯಾಘಾತದಿಂದ ಸಾವನಪ್ಪಿದ್ದಾನೆ. ಜಿಲ್ಲೆಯಲ್ಲಿ ಕಳೆದ 35 ದಿನಗಳಲ್ಲಿ 17ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೃತರನ್ನು ಗೋವಿಂದ (37) ಎಂದು ಗುರುತಿಸಲಾಗಿದೆ. ಹಾಸನದ ಸಿದ್ದೇಶ್ವರ ನಗರದಲ್ಲಿ ಘಟನೆ ನಡೆದಿದೆ. ಇಂದು ಬೆಳಗ್ಗೆ ಏಳು ಗಂಟೆ ಸಮಯದಲ್ಲಿ ಆಟೋ ಚಲಾಯಿಸುವಾಗ ಗೋವಿಂದ ಅವರಿಗೆ ಎದೆನೋವು ಕಾಣಿಸಿಕೊಂಡಿದೆ.
ತಕ್ಷಣವೇ ಆಟೋ ಚಲಾಯಿಸಿಕೊಂಡು ಗೋವಿಂದ ಜಿಲ್ಲಾಸ್ಪತ್ರೆಗೆ ತೆರಳಿದ್ದರು. ಸರ್ಕಾರಿ ಆಸ್ಪತ್ರೆಯಲ್ಲಿ ಗೋವಿಂದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಒಂದು ತಿಂಗಳ ಅಂತರದಲ್ಲಿ ಹಾಸನ ಜಿಲ್ಲೆಯಲ್ಲಿ ಹದಿನೇಳು ಮಂದಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

