ಮಂಗಳೂರು: ರಾತ್ರಿ ಸುರಿದ ಮಳೆಗೆ ರಾಜಕಾಲುವೆಗೆ (Rajakaluve) ಆಟೋ (Auto) ಉರುಳಿ ಚಾಲಕ ಸಾವನ್ನಪ್ಪಿದ ಘಟನೆ ಮಂಗಳೂರು (Mangaluru) ನಗರದ ಕೊಟ್ಟಾರ (Kottara) ಅಬ್ಬಕ್ಕ ನಗರದಲ್ಲಿ ನಡೆದಿದೆ.
ದೀಪಕ್ (40) ಮೃತ ಆಟೋ ಚಾಲಕ. ಶುಕ್ರವಾರ ರಾತ್ರಿ ಭಾರೀ ಮಳೆ ಸುರಿದಿದೆ. ಸುರಿದ ಭಾರೀ ಮಳೆಯಿಂದಾಗಿ ಕೊಟ್ಟಾರದಲ್ಲಿ ರಾಜಕಾಲುವೆ ತುಂಬಿ ಹರಿಯುತ್ತಿತ್ತು. ಆದರೆ ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ನೀರು ರಸ್ತೆಗೆ ಬಂದಿದೆ. ರಸ್ತೆ ಹಾಗೂ ರಾಜಕಾಲುವೆಗೆ ಸಮಾನವಾಗಿ ನೀರು ಹರಿಯುತ್ತಿತ್ತು. ರಾತ್ರಿ ವೇಳೆ ಆ ರಸ್ತೆಯಲ್ಲಿ ಸಂಚರಿಸುವಾಗ ಆಟೋ ರಾಜಕಾಲುವೆಗೆ ಉರುಳಿ ಘಟನೆ ಸಂಭವಿಸಿದ್ದು, ಚಾಲಕ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಸೇಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿಗರಿಗೆ ನಿಷೇಧ
ಮಂಗಳೂರು ಮಹಾನಗರ ಪಾಲಿಕೆ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ಬಲಿಯಾಗಿದ್ದು, ಕಾಲುವೆಗೆ ತಡೆಗೋಡೆ ನಿರ್ಮಿಸದ ಕಾರಣ ಅನಾಹುತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಕಲ್ಲು ತೂರಾಟ- ಮದುವೆ ಮಾಡಿಕೊಡುವಂತೆ ಯುವತಿ ತಾಯಿಗೆ ಧಮ್ಕಿ

