ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ, ಗಣೇಶ ವಿಸರ್ಜನೆಯ ಸಂದರ್ಭದಲ್ಲಿನಡೆದ ಕೋಮುಗಲಭೆ ಪ್ರಕರಣದಲ್ಲಿ ಬಂಧಿತರಾಗಿದ್ದ 55 ಆರೋಪಿಗಳಿಗೆ ಜಾಮೀನು ದೊರೆತಿದೆ.
ಮಂಡ್ಯದ 1ನೇ ಜಿಲ್ಲಾ ಮತ್ತು ಸಷೇನ್ಸ್ ನ್ಯಾಯಾಲಯ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದೆ. ನಾಳೆ ನಾಡಿದ್ದು ರಜೆ ಹಿನ್ನೆಲೆಯಲ್ಲಿ ಆರೋಪಿಗಳನ್ನು ಸೋಮವಾರ ಬಿಡುಗಡೆಯಾಗಲಿದ್ದಾರೆ.
ನ್ಯಾಯಾಂಗ ಬಂಧನದಲ್ಲಿದ್ದ ಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ತಲಾ ಒಂದು ಲಕ್ಷ ರೂ. ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ತೆರಳಿ ಸಹಿ ಹಾಕಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಅಪರಾಧಿ ಕೃತ್ಯದಲ್ಲಿ ಭಾಗಿಯಾಗದಂತೆ ಕೋರ್ಟ್ ಆರೋಪಿಗಳಿಗೆ ಷರತ್ತು ವಿಧಿಸಿದೆ.
ನಾಗಮಂಗಲದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆಯ ಮೇಲೆ ಕಲ್ಲು ಎಸೆತ ಹಾಗೂ ಚಪ್ಪಲಿ ಎಸೆತ ಪ್ರಕರಣ ನಡೆದಿತ್ತು. ಸೆಪ್ಟೆಂಬರ್ 11ರಂದು ಆರೋಪಿಗಳು ಬಂಧನ ವಾಗಿದ್ದರು.

