ಹಾಸನ: ಕೆಆರ್ ನಗರ ಸಂತ್ರಸ್ತೆ ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ರೇವಣ್ಣ (HD.Revanna) ಅವರಿಗೆ ಕೋರ್ಟ್ ಜಾಮೀನು (Bail) ಮಂಜೂರು ಮಾಡಿದೆ. ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಹಿತಿ ಸಿಗುತ್ತಿದ್ದಂತೆ ಹಾಸನ, (Hassan) ಹೊಳೆನರಸೀಪುರದಲ್ಲಿ ಸಂಭ್ರಮ ಮನೆ ಮಾಡಿತ್ತು. ರಸ್ತೆಗಿಳಿದ ರೇವಣ್ಣ ಅಭಿಮಾನಿಗಳು ಹಾಗೂ ಬೆಂಬಲಿಗರು ಪಟಾಕಿ ಸಿಡಿಸಿ (Crackers) , ಸಿಹಿ ಹಂಚಿ ಸಂಭ್ರಮಿಸಿದರು.
ರೇವಣ್ಣ ಅವರು ಹೊಳೆನರಸೀಪುರದಲ್ಲಿ ಅಭಿವೃದ್ಧಿಯ ಹರಿಕಾರ ಎಂದೇ ಹೆಸರುವಾಸಿಯಾಗಿದ್ದವರು. ಸಚಿವ ಕೆಆರ್ ನಗರದ ಮಹಿಳೆ ಲಕಿಡ್ನಾಪ್ ಪ್ರಕರನದಲ್ಲಿ ನಬಂಧನಕ್ಕೆ ಒಳಗಾಗಿದ್ದರು. ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಿನ್ನೆ ನಡೆಸಿ ಅವರಿಗೆ ಜಾಮೀನು ನೀಡಲಾಯ್ತು. ರೇವಣ್ಣ ಅವರಿಗೆ ಜಾಮೀನು ಸಿಗಲ್ಲಿ ಎಂದು ಕಾದು ಕುಳಿತ್ತಿದ್ದ ಅವರ ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ಹೊಳೆನರಸೀಪ[ಉರದ ಮಹಾತ್ಮಾಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಮುಂಬೈನಲ್ಲಿ ಧರೆಗುರುಳಿದ ಬೃಹತ್ ಬಿಲ್ ಬೋರ್ಡ್ – ಸಾವಿನ ಸಂಖ್ಯೆ 14 ಕ್ಕೆ ಏರಿಕೆ
ಇದೇ ವೇಳೆ ಮಹಾತ್ಮಾಗಾಂಧಿ ವೃತ್ತಕ್ಕೆ ಆಗಮಿಸಿದ ಪೊಲೀಸರು ಪಟಾಕಿ ಸಿಡಿಸಿದ ಓರ್ವನನ್ನು ವಶಕ್ಕೆ ಪಡೆದ ಕಾರಣ ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡವೆ ವಾಗ್ವಾದ ನಡೆಯಿತು. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಮುಂದುವರಿದ ತರಕಾರಿ, ಹಣ್ಣುಗಳ ಬೆಲೆ ಏರಿಕೆ

ರೇವಣ್ಣ ಅವರ ಅಭಿಮಾನಿಗಳು ಪೊಲೀಸರಿಗೆ ಪ್ರಶ್ನೆ ಮಾಡಿ, ಕಾಂಗ್ರೆಸ್‌ನವರಿಗೆ ಮಾತ್ರ ಅನುಮತಿ ನೀಡಿದ್ದೀರಾ ನಮಗೂ ನೀಡಿ ಎಂದು ಪ್ರತಿಭಟನೆಗೆ ಮುಂದಾದ್ರು. ಬಳಿಕ ಪೊಲೀಸರು ಅನುಮತಿ ನೀಡುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ರೇವಣ್ಣ ಪರ ಘೋಷಣೆ ಕೂಗಿದ್ರು. ಇದನ್ನೂ ಓದಿ: ಇಂದು ಜೈಲಿನಿಂದ ರಿಲೀಸ್ ಆಗಲಿದ್ದಾರೆ ಮಾಜಿ ಸಚಿವ ರೇವಣ್ಣ
ಹೊಳೆನರಸೀಪುರ ಕ್ಷೇತ್ರದಲ್ಲಿ ಯಾರು ಮಾಡದ ಅಭಿವೃದ್ದಿಯನ್ನು ನಮ್ಮ ರೇವಣ್ಣ ಮಾಡಿದ್ದಾರೆ. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಲಿ. ಆದರೆ ರೇವಣ್ಣ ಅವರನ್ನು ಬಂಧಿಸಿದ್ದು ತಪ್ಪು. ರಾಜಕೀಯ ಷಡ್ಯಂತ್ರದಿAದ ನಮ್ಮ ರೇವಣ್ಣ ಅವರನ್ನು ಬಂಧಿಸಲಾಗಿದೆ. ರೇವಣ್ಣ ಅವರು ಹೊಳೆನರಸೀಪುರಕ್ಕೆ ಬರ್ತಿದ್ದಂತೆ ಗಾಂಧಿ ವೃತದಲ್ಲಿ ಹಾಲಿನ ಅಭಿಷೇಕ ಮಾಡುವ ಮೂಲಕ ಅವರ ಮೇಲೆ ಬಂದ ಕಳಂಕವನ್ನು ದೂರ ಮಾಡುತ್ತೇವೆ ಎಂದರು. ನಮ್ಮ ಕ್ಷೇತ್ರದಲ್ಲಿ ಅವರು ಮಾಡಿದ ಕೆಲಸವನ್ನು ಮರೆಯಲ್ಲ. ರೇವಣ್ಣಗೆ ಜಾಮೀನು ಸಿಕ್ಕಿರೋದ್ರಿಂದ ಹೊಳೆನರಸೀಪುರದಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿದೆ ಅಂತ ಅಭಿಮಾನಿಗಳು ಭಾವುಕರಾದರು. ಇದನ್ನೂ ಓದಿ: ಕರ್ನಾಟಕದಲ್ಲಿ ಆಪರೇಷನ್ ನಾಥ – ಸುಳಿವು ಕೊಟ್ಟ ಏಕನಾಥ ಶಿಂಧೆ!

