ಬೆಂಗಳೂರು: ಬಿಜೆಪಿ ವಿರುದ್ಧ 40% ಜಾಹೀರಾತು ಪ್ರಕರಣದಲ್ಲಿ (40 Percent Commission) ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ (Rahul Gandhi) ಶುಕ್ರವಾರ (ಜೂ.7) 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು (Court Bail) ಮಂಜೂರು ಮಾಡಿದ್ದು, ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ.
ಮಾಜಿ ಸಂಸದ ಡಿ.ಕೆ ಸುರೇಶ್ (DK Suresh), ರಾಹುಲ್ ಗಾಂಧಿ ಅವರಿಗೆ 50 ಸಾವಿರ ರೂ. ಮೌಲ್ಯದ ಪ್ರಾಪರ್ಟಿ ಶ್ಯೂರಿಟಿ ನೀಡಿದ್ದು, ಜಾಮೀನು ಮಂಜೂರು ಮಾಡಲಾಗಿದೆ. ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ವಿಚಾರಣೆ ನಡೆಸಿದ್ದ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಜಾಮೀನು ಮಂಜೂರು ಮಾಡಿತ್ತು. ಅಲ್ಲದೇ ಗೈರಾಗಿದ್ದ ರಾಹುಲ್ ಗಾಂಧಿ ಅವರಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು. ಇದನ್ನೂ ಓದಿ: ಸಂತ್ರಸ್ತೆ ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು
ಜೂನ್ 1ರಂದು ವಿಚಾರಣೆಯ ಸಂದರ್ಭದಲ್ಲಿ ರಾಹುಲ್ ಪರ ವಕೀಲರು ಐಎನ್‌ಡಿಐಎ ಮೈತ್ರಿಕೂಟದ ಸಭೆಯಲ್ಲಿ ಭಾಗಿಯಾಗಿದ್ದರಿಂದ ಹಾಜರಾತಿಯಿಂದ ವಿನಾಯಿತಿ ನೀಡುವಂತೆ ಕೋರಿದ್ದರು. ಆದರೆ ನ್ಯಾಯಾಲಯವು ಮನವಿ ನಿರಾಕರಿಸಿತ್ತು. ಮಧ್ಯಾಹ್ನದ ವಿಚಾರಣೆ ಮುಂದೂಡಿ ನಂತರ ಜೂನ್ 7 ರಂದು ಖುದ್ದು ಹಾಜರಾಗಬೇಕೆಂದು ಸೂಚಿಸಿತ್ತು.ಇದನ್ನೂ ಓದಿ: ಉತ್ತರಾಖಂಡ ಚಾರಣ: ಮೃತರಲ್ಲಿ ಕುಂದಾಪುರ ಚಾರಣಿಗ ಸಾವು
ಬಿಜೆಪಿ ವಿರುದ್ಧ 40% ಕಮಿಷನ್ ಆರೋಪ ಜಾಹೀರಾತು ಸೇರಿದಂತೆ ಸುಳ್ಳು ಜಾಹೀರಾತುಗಳನ್ನು ನೀಡಿದ ಆರೋಪ ಪ್ರಕರಣದಲ್ಲಿ ರಾಹುಲ್ ಗಾಂಧಿ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿದ್ದರು. 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿ ಕಟಕಟೆಯಲ್ಲಿ ನಿಂತಿದ್ರು. ರಾಹುಲ್ ಅರ್ಜಿಯನ್ನ ಪುರಸ್ಕರಿಸಿದ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತು. ಇದನ್ನೂ ಓದಿ: ಮಂತ್ರಿ ಸ್ಥಾನಕ್ಕೆ ಒತ್ತಡ ಹಾಕಲ್ಲ ಎಂದ ಹೆಚ್‌ಡಿಕೆ
ಎರಡು ಬಾರಿ ವಿಚಾರಣೆಗೆ ವಿನಾಯಿತಿ ಪಡೆದು ಗೈರಾಗಿದ್ದ ರಾಹುಲ್ ಗಾಂಧಿಗೆ ಜೂನ್ 7 ರಂದು ಕಡ್ಡಾಯವಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಗೆ ಖುದ್ದು ಹಾಜರಾದ ರಾಹುಲ್ ಗಾಂಧಿ ಜಾಮೀನು ಪ್ರಕ್ರಿಯೆ ಮುಗಿಸಿದ್ದಾರೆ. ಇದನ್ನೂ ಓದಿ: ಸಾಗರ್ ಖಂಡ್ರೆ ಗೆಲುವು – ಕಿರಿಯ ಸಂಸದರಾಗಿ ಸಂಸತ್ತಿಗೆ ಎಂಟ್ರಿ

