By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Blog > ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ
BlogLatestMain PostTop Storiesರಾಜ್ಯ-Karnataka

ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ

Bangalore India Nano Conference

Published August 2, 2024
Share
2 Min Read
Nano Conference
SHARE

ಬೆಂಗಳೂರು : ದೇಶದ ಪ್ರತಿಷ್ಠಿತ ಹಾಗೂ ಅತಿದೊಡ್ಡ ನ್ಯಾನೋ ಸಮ್ಮೇಳನವಾದ ʻಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನʼವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ದೇಶ, ವಿದೇಶಗಳ ಖ್ಯಾತ ವಿಜ್ಞಾನಿಗಳು, ತಂತ್ರಜ್ಞಾನಿಗಳು, ತಾಂತ್ರಿಕ ಚಿಂತಕರು, ಉದ್ಯಮಗಳ ಖ್ಯಾತನಾಮರೊಂದಿಗೆ ಈ ಪ್ರತಿಷ್ಠಿತ ನ್ಯಾನೋ ಟೆಕ್ನಾಲಜಿ ಸಮಾವೇಶದಲ್ಲಿ ಭಾಗವಹಿಸಲು ನನಗೆ ಹೆಮ್ಮೆ ಎನಿಸುತ್ತಿದೆ ಎಂದರು.

ನಾನು ಮೊದಲನೆಯದಾಗಿ ಪ್ರತಿಷ್ಠಿತ ಪ್ರೊ.ಸಿ.ಎನ್.ಆರ್.‌ ರಾವ್‌ ಬೆಂಗಳೂರು ಇಂಡಿಯಾ ನ್ಯಾನೋ ಸೈನ್ಸ್‌ ಪ್ರಶಸ್ತಿಗೆ ಭಾಜನರಾಗಿರುವ ಪ್ರೊ.ಅರಿಂದಮ್‌ ಘೋಷ್‌ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ರಾಜ್ಯದಲ್ಲಿ ನಡೆಯುವ ಇಂತಹ ವಿಜ್ಞಾನ ಮತ್ತು ತಂತ್ರಜ್ಞಾನ ಸಮಾವೇಶದಲ್ಲಿ ಭಾಗವಹಿಸುವುದು ನನಗೆ ಯಾವತ್ತೂ ಸ್ಪೂರ್ತಿದಾಯಕ ಹಾಗೂ ಸಂತಸದ ವಿಚಾರ.

ಕರ್ನಾಟಕ ತನ್ನ ಶ್ರೀಮಂತ ಸಾಂಸ್ಕೃತಿಕ ಪರಂಪರೆಗಳಿಗೆ ಮಾತ್ರವಲ್ಲದೆ ಶೈಕ್ಷಣಿಕ ಮತ್ತು ಸಂಶೋಧನೆ ಚಟುವಟಿಕೆಗಳಿಗೆ ಭದ್ರ ತಳಹದಿಯನ್ನು ಕಲ್ಪಿಸುವ ಕಾರ್ಯದಲ್ಲಿ ಹೆಸರುವಾಸಿಯಾಗಿದೆ. ತಾಂತ್ರಿಕತೆ ಆಧಾರಿತ ಅನ್ವೇಷಣೆ ಕ್ಷೇತ್ರದಲ್ಲಿ ನಮ್ಮ ರಾಜ್ಯ ಎಂದಿಗೂ ಮುಂಚೂಣಿಯಲ್ಲಿದೆ.

ಐಐಎಸ್ಸಿ, ಜೆಎನ್‌ಸಿಎಎಸ್‌ಆರ್‌, ಎನ್‌ಸಿಬಿಎಸ್‌, ಸಿಇಎನ್‌ಎಸ್ ನಂತಹ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ನೆರವಿನೊಂದಿಗೆ, ಬೆಂಗಳೂರು ದೇಶದ ನ್ಯಾನೋ ಟೆಕ್‌ ಹಬ್‌ ಆಗಿ ರೂಪುಗೊಳ್ಳುವ ಪೂರ್ಣ ವಿಶ್ವಾಸ ನನಗಿದೆ. ಮುಂಬರುವ ವರ್ಷಗಳಲ್ಲಿ ಬೆಂಗಳೂರು ಈ ಆಧುನಿಕ ತಾಂತ್ರಿಕ ಕ್ಷೇತ್ರದಲ್ಲಿ ಪ್ರಮುಖ ಪಾತ್ರವನ್ನು ನಿಭಾಯಿಸಲಿದೆ.

ಆಹಾರ ಭದ್ರತೆ, ಇಂಧನ ಸುರಕ್ಷತೆ, ಶುದ್ಧ ಜಲ, ಮೂಲಸೌಕರ್ಯ, ಆರೋಗ್ಯ ಸೇವೆ, ಮೆಡಿಸಿನ್‌, ತ್ಯಾಜ್ಯವಸ್ತುಗಳ ನಿರ್ವಹಣೆ, ಪರಿಸರ ನಿರ್ವಹಣೆಯಂತಹ ಕ್ಷೇತ್ರಗಳಲ್ಲಿ ಎದುರಾಗುವ ಸವಾಲುಗಳಿಗೆ ವಿನೂತನ ನ್ಯಾನೋ ಟೆಕ್ನಾಲಜಿ ಆಧಾರಿತ ಪರಿಹಾರಗಳನ್ನು ಕಂಡುಕೊಳ್ಳಬೇಕಾಗಿದೆ. ಹೆಚ್ಚುತ್ತಿರುವ ನಗರೀಕರಣ, ಜನಸಂಖ್ಯೆ ಹೆಚ್ಚಳ ಹಾಗೂ ಬದಲಾಗುತ್ತಿರುವ ಜೀವನ ಶೈಲಿಯಿಂದ ಮುಂದಿನ ದಿನಗಳಲ್ಲಿ ಈ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆಗಳಿದ್ದು ಇವುಗಳಿಗೆ ನ್ಯಾನೋ ಟೆಕ್ನಾಲಜಿ ಆಧಾರಿತ ಪರಿಹಾರಗಳನ್ನು ಸಂಶೋಧಿಸಲು ನಾನು ವಿಜ್ಞಾನಿಗಳಿಗೆ ಮತ್ತು ಇಂಜಿನಿಯರ್‌ಗಳನ್ನು ಕೇಳಿಕೊಳ್ಳುತ್ತೇನೆ.

ಗಂಡಸಾಗಿದ್ದರೆ ದಾಖಲೆ ಕೊಡಲಿ, ನಾನು ಜೈಲಿಗೆ ಹೋಗೋಕು ರೆಡಿ : ಡಿಕೆಶಿ

ಈ ಹೊಸ ತಾಂತ್ರಿಕ ಕ್ಷೇತ್ರದ ಸಾಧ್ಯತೆಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಅಂತಾರಾಷ್ಟ್ರೀಯ ಸಂಶೋಧನಾ ಸಹಭಾಗಿತ್ವ ಅತ್ಯಗತ್ಯವಾಗಿದೆ ಎಂದು ನಾನು ಭಾವಿಸಿದ್ದೇನೆ. ಇದಕ್ಕಾಗಿ ಮಾಹಿತಿಗಳ ಹಾಗೂ ತಾಂತ್ರಿಕತೆಗಳ ಪರಸ್ಪರ ವಿನಿಮಯ, ಈ ಕ್ಷೇತ್ರದಲ್ಲಿ ಎದುರಾಗುವ ಸವಾಲುಗಳ ಮತ್ತು ಅವುಗಳ ಪರಿಹಾರ ಸಾಧ್ಯತೆಗಳ ವಿಚಾರ ವಿನಿಮಯ ಮತ್ತು ಅಂತಿಮವಾಗಿ ಸಮಾಜದ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಪ್ರತಿಭೆಗಳನ್ನು ಬೆಳೆಸುವ ಅಗತ್ಯವಿದೆ.

ಇಂತಹ ಅಂತಾರಾಷ್ಟ್ರೀಯ ಸಮಾವೇಶಗಳು ಪರಸ್ಪರ ಸಂಪರ್ಕ ಸಾಧಿಸಲು, ಜ್ಞಾನವನ್ನು ಹಂಚಿಕೊಳ್ಳಲು, ತಾಂತ್ರಿಕತೆಗಳ ವಿನಿಮಯಕ್ಕೆ, ಕೌಶಲ್ಯ ಅಭಿವೃದ್ಧಿಗೆ ಹಾಗೂ ಉದ್ಯಮ ಸಹಭಾಗಿತ್ವಕ್ಕೆ ಸಾಕಷ್ಟು ಅವಕಾಶವನ್ನು ಕಲ್ಪಿಸಲಿದೆ ಎಂದು ನಾನು ಭಾವಿಸಿದ್ದೇನೆ.

ಯುವ ಉದ್ಯಮಿಗಳು ಈ ಕ್ಷೇತ್ರದ ತಜ್ಞರ ಮತ್ತು ದಿಗ್ಗಜರ ಸಹಕಾರ ಮತ್ತು ಸಹಭಾಗಿತ್ವದ ಸದುಪಯೋಗಪಡೆದುಕೊಂಡು ನಮ್ಮ ರಾಜ್ಯದಲ್ಲಿ ಹೊಸ ಉದ್ಯಮಗಳನ್ನು ಆರಂಭಿಸಲು ನಾನು ಆಹ್ವಾನಿಸುತ್ತೇನೆ.

ಕರ್ನಾಟಕದಲ್ಲಿ ಈ ವಿನೂತನ ಉದ್ಯಮ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಸೃಷ್ಟಿಸಲು ಸಾಧ್ಯವಿರುವ ಸಂಪೂರ್ಣ ಸಹಕಾರವನ್ನು ನಮ್ಮ ಸರ್ಕಾರ ಒದಗಿಸಲಿದೆ.

ಈ ಸಮಾವೇಶವನ್ನು 2007ರಿಂದ ನಿರಂತರವಾಗಿ ಆಯೋಜಿಸಿಕೊಂಡು ಬರಲು ಮಾರ್ಗದರ್ಶನ ನೀಡುತ್ತಿರುವ ಭಾರತ ರತ್ನ ಪ್ರೊ.ಸಿ.ಎನ್.ಆರ್.‌ ರಾವ್‌ ಅವರಿಗೆ ನಾನು ಈ ಸಂದರ್ಭದಲ್ಲಿ ಧನ್ಯವಾದ ಸಲ್ಲಿಸುತ್ತೇನೆ.

ಈ ಸುಂದರ ಉದ್ಯಾನನಗರಿಯಲ್ಲಿ ತಾವಿರುವ ಸಮಯವನ್ನು ಸಂತಸದಿಂದ ಕಳೆಯಿರಿ ಎಂದು ನಾನು ಆಶಿಸುತ್ತೇನೆ. 13 ನೇ ಬೆಂಗಳೂರು ಇಂಡಿಯಾ ನ್ಯಾನೋ ಅತ್ಯಂತ ಯಶಸ್ವಿಯಾಗಿ ನೆರವೇರಲಿ ಎಂದು ನಾನು ಹಾರೈಸುತ್ತೇನೆ.

You Might Also Like

ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಕುಸಿಯುತ್ತಿದೆಯಾ ಪ್ರಧಾನಿ ಮೋದಿ ಜನಪ್ರಿಯತೆ..?

ಅನ್ನಭಾಗ್ಯ ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲಾಗಿ ಅಕ್ಕಿ ವಿತರಣೆ

ಮಳೆಗೆ ಮನೆಯ ಗೋಡೆ ಕುಸಿತ- 4 ಸಾವು

ಡಿ ಗ್ಯಾಂಗ್‌ ಕೊಲೆ ಪ್ರಕರಣ- 2 ಹಲ್ಲೆ ವೀಡಿಯೋ ಸಂಗ್ರಹಿಸಿದ ಪೊಲೀಸರು

TAGGED:NanotechnologySiddaramaiah
Share This Article
Facebook Copy Link Print
Previous Article Rau IAS, Delhi Coaching Centre ದೆಹಲಿ ಕೋಚಿಂಗ್‌ ಸೆಂಟರ್ ಪ್ರಕರಣ ಕುರಿತು ಸಿಬಿಐ ತನಿಖೆ
Next Article Guru Poornima ಗುರುಪೂರ್ಣಿಮೆಯ ಮಹತ್ವ ಮತ್ತು ಆಚರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up