ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ವಿರುದ್ಧ ಅಸಮಾಧಾನಗೊಂಡಿರುವ ಮಹಾನಗರ ಪಾಲಿಕೆ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಜುಲೈ 7ರಂದು ರಾಜ್ಯದ ಒಟ್ಟು 10 ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ರು 70 ಸಾವಿರಕ್ಕೂ ಅಧಿಕ ಪಾಲಿಕೆ ನೌಕರರು ಸಾಮೂಹಿಕವಾಗಿ ರಜೆ ಹಾಕುವ ಮೂಲಕ ಇಲಾಖೆ ವಿರುದ್ಧ ಪ್ರತಿಭಟಿಸಲಿದ್ದಾರೆ. ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ಈ ಪ್ರತಿಭಟನೆಗೆ ಕರೆ ನೀಡಿದ್ದು, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
ಬೇಡಿಕೆಗಳೇನು?
ನಗರಾಭಿವೃದ್ಧಿ ಇಲಾಖೆಯ ಮುಂದೆ ಮಹಾನಗರ ಪಾಲಿಕೆ ನೌಕರರು ಕೆಲವು ಬೇಡಿಕೆಗಳನಿಟ್ಟಿದ್ದು, ಇಲಾಖೆ ಈವರೆಗೂ ಸ್ಪಂದಿಸಿಲ್ಲ. ಹೀಗಾಗಿ ಪ್ರತಿಭಟನೆಗೆ ಸಜ್ಜಾಗಿರುವ ಸಿಬ್ಬಂದಿಯ ಸದ್ಯದ ಬೇಡಿಕೆಗಳು ಈ ಕೆಳಗಿನಂತಿದೆ.ಸರ್ಕಾರಿ ನೌಕರರಿಗೆ ನೀಡಲಾಗಿರುವ 7ನೇ ವೇತನ ಆಯೋಗದ ಸೌಲಭ್ಯ ನೀಡಲು ಪಾಲಿಕೆಗಳ ಸಿಬ್ಬಂದಿಗೂ ಆರ್ಥಿಕ ಇಲಾಖೆಯಿಂದಲೇ ಅನುದಾನ ಬಿಡುಗಡೆ ಮಾಡಬೇಕು.
ವೇತನ ತಾರತಮ್ಯ ನಿವಾರಣೆ, ಸೇವಾ ಭದ್ರತೆ, ಖಾಲಿ ಹುದ್ದೆಗಳ ಭರ್ತಿ, ಆರೋಗ್ಯ ಸೌಲಭ್ಯಗಳು ಮತ್ತು ನಿವೃತ್ತಿ ನಂತರದ ಸೌಲಭ್ಯಗಳನ್ನು ಒದಗಿಸಬೇಕು. ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಮಾಡಿ ಕರಡು ಅಧಿಸೂಚನೆ ಪ್ರಕಟಿಸಬೇಕು ಎಂದು ಆಗ್ರಹಿಸಿದ್ದಾರೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

