By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: BIG STORY : ಬಳ್ಳಾರಿಯಲ್ಲಿ ಬ್ಯಾನರ್‌ ಕಟ್ಟುವ ಘರ್ಷಣೆ, ಕಾಂಗ್ರೆಸ್ ಕಾರ್ಯಕರ್ತ ಸಾವು, ಜಿಲ್ಲೆಯಾದ್ಯಂತ ಪೊಲೀಸರು ಅಲರ್ಟ್‌
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > BIG STORY : ಬಳ್ಳಾರಿಯಲ್ಲಿ ಬ್ಯಾನರ್‌ ಕಟ್ಟುವ ಘರ್ಷಣೆ, ಕಾಂಗ್ರೆಸ್ ಕಾರ್ಯಕರ್ತ ಸಾವು, ಜಿಲ್ಲೆಯಾದ್ಯಂತ ಪೊಲೀಸರು ಅಲರ್ಟ್‌
ರಾಜ್ಯ-KarnatakaLatest

BIG STORY : ಬಳ್ಳಾರಿಯಲ್ಲಿ ಬ್ಯಾನರ್‌ ಕಟ್ಟುವ ಘರ್ಷಣೆ, ಕಾಂಗ್ರೆಸ್ ಕಾರ್ಯಕರ್ತ ಸಾವು, ಜಿಲ್ಲೆಯಾದ್ಯಂತ ಪೊಲೀಸರು ಅಲರ್ಟ್‌

Banner clash in Bellary, Congress worker dies, police on alert across the district

Published January 2, 2026
Share
3 Min Read
SHARE

ಬಳ್ಳಾರಿ: ವಾಲ್ಮೀಕಿ ಪುತ್ಥಳಿ ಅನಾವರಣ ಹಿನ್ನೆಲೆಯಲ್ಲಿ ಶಾಸಕ ಜನಾರ್ಧನ ರೆಡ್ಡಿ ನಿವಾಸದ ಬಳಿ ಬ್ಯಾನರ್‌ ಕಟ್ಟುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿ ಘರ್ಷಣೆಗೆ ಕಾರಣವಾಗಿದೆ. ಫೈರಿಂಗ್‌ ವೇಳೆ ಕಾಂಗ್ರೆಸ್‌ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದು, ನಗರದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಘಟನೆಯ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಜಿಲ್ಲೆಯಾದ್ಯಂತ ಹೈ ಅಲರ್ಟ್‌ ಘೋಷಿಸಲಾಗಿದ್ದು, ಬಳ್ಳಾರಿ ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡು ಕಟ್ಟೆಚ್ಚರ ಕ್ರಮವಾಗಿ ವಿಜಯನಗರ, ಚಿತ್ರದುರ್ಗ ಮತ್ತು ಕೊಪ್ಪಳ ಜಿಲ್ಲೆಗಳ ಎಸ್‌ಪಿ ಮಟ್ಟದ ಅಧಿಕಾರಿಗಳು ಹಾಗೂ ಹೆಚ್ಚುವರಿ ಪೊಲೀಸ್‌ ಸಿಬ್ಬಂದಿಯನ್ನು ಬಳ್ಳಾರಿಗೆ ಕರೆಸಿಕೊಳ್ಳಲಾಗಿದೆ. ನಗರಾದ್ಯಂತ ಪೊಲೀಸ್‌ ಸರ್ಪಗಾವಲು ವ್ಯವಸ್ಥೆ ಜಾರಿಗೊಳಿಸಿ, ಸಂಚಲನ ಮತ್ತು ಸಭೆ–ಸಮಾರಂಭಗಳ ಮೇಲೆ ನಿಗಾ ವಹಿಸಲಾಗಿದೆ.

ಈ ಘಟನೆ ಕುರಿತು ಸ್ಪಷ್ಟನೆ ನೀಡಲು ಶಾಸಕ ನಾರಾ ಭರತ್‌ ರೆಡ್ಡಿ, ಶಾಸಕ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲು ಅವರು ಸುದ್ದಿಗೋಷ್ಠಿ ಕರೆದಿದ್ದಾರೆ. ಜಿಲ್ಲೆಾದ್ಯಂತ ಪರಿಸ್ಥಿತಿ ನಿಯಂತ್ರಣದಲ್ಲಿರಿಸಲು ಪೊಲೀಸ್‌ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಎಲ್ಲೆಡೆ ಕಣ್ಣಿಡಲಾಗಿದೆ.

ಸರ್ಕಾರಿ ಪ್ರಾಯೋಜಿತ ದುಷ್ಕೃತ್ಯ : ಬಿ.ವೈ. ವಿಜಯೇಂದ್ರ ಆರೋಪ

ಬಿ.ವೈ. ವಿಜಯೇಂದ್ರ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ, “ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಗಿನ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಿತ ಪೂರ್ವನಿಯೋಜಿತ ದುಷ್ಕೃತ್ಯ. ಈ ಘಟನೆಯನ್ನು ನಾನು ಅತ್ಯುಗ್ರವಾಗಿ ಖಂಡಿಸುತ್ತೇನೆ” ಎಂದು ತಿಳಿಸಿದ್ದಾರೆ.

“ಜನಾರ್ದನ ರೆಡ್ಡಿ ಹಾಗೂ ಅವರ ಕುಟುಂಬವನ್ನು ಗುರಿಯಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಉದ್ಘಾಟನಾ ಕಾರ್ಯಕ್ರಮದ ಬ್ಯಾನರ್ ಅಳವಡಿಸುವುದನ್ನು ನೆಪವಾಗಿಸಲಾಗಿದೆ. ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯೇ ಉಳಿದಿಲ್ಲ. ನಾಗರಿಕರು ನೆಮ್ಮದಿಯಾಗಿ ಬದುಕುವ ವಾತಾವರಣವನ್ನು ಹಾಳುಮಾಡಿ, ಭಯಭೀತ ನಗರವನ್ನಾಗಿ ಮಾಡಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ದುಷ್ಕೃತ್ಯ ನಡೆದಿದೆ” ಎಂದು ಆರೋಪಿಸಿದ್ದಾರೆ.

ಜನಾರ್ದನ ರೆಡ್ಡಿ ಬಿಜೆಪಿಗೆ ಮರು ಸೇರ್ಪಡೆಯಾದ ಬಳಿಕ ಪಕ್ಷಸಂಘಟನೆ ಬಲವಾಗುತ್ತಿರುವುದು ಮತ್ತು ಗಾಲಿ ಜನಾರ್ದನ ರೆಡ್ಡಿ–ಬಿ. ಶ್ರೀರಾಮುಲು ನಡುವಿನ ಬಾಂಧವ್ಯ ಪುನಃ ಗಟ್ಟಿಯಾಗಿರುವುದನ್ನು ರಾಜಕೀಯ ಶಕ್ತಿಗಳು ಸಹಿಸಲಾಗುತ್ತಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ. “ಸ್ಥಳೀಯ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿ ಮಾರ್ಪಟ್ಟಿವೆ. ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರೆ ಈ ದುರ್ಘಟನೆಯನ್ನು ತಪ್ಪಿಸಬಹುದಿತ್ತು” ಎಂದು ಅವರು ಕಿಡಿಕಾರಿದ್ದಾರೆ.

ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಬಿಜೆಪಿ ನಾಯಕರಿಗೆ ತಕ್ಷಣ ಸೂಕ್ತ ಭದ್ರತೆ ಒದಗಿಸಬೇಕು ಹಾಗೂ ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಬಳ್ಳಾರಿಯಲ್ಲಿ ನಡೆದದ್ದು ಏನು?
ಜನವರಿ 3ರಂದು ನಡೆಯಲಿರುವ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿ ನಗರಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿತ್ತು. ಈ ವೇಳೆ ಜನಾರ್ದನ ರೆಡ್ಡಿ ಅವರ ನಿವಾಸದ ಎದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ.

ಇದರಿಂದ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಸಂಘರ್ಷ ಉಂಟಾಗಿದೆ. ಗಲಾಟೆ ತೀವ್ರಗೊಂಡಾಗ ಜನಾರ್ದನ ರೆಡ್ಡಿ ಖಾಸಗಿ ಭದ್ರತಾ ಪಡೆ ಹಾಗೂ ನಾರಾ ಭರತ್ ರೆಡ್ಡಿ ಬೆಂಬಲಿಗ ಸತೀಶ್ ರೆಡ್ಡಿ ಭದ್ರತಾ ಪಡೆಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾಗಿ ಹೇಳಲಾಗಿದೆ. ಈ ವೇಳೆ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಮೃತಪಟ್ಟಿದ್ದಾನೆ. ಘಟನೆಯ ಕುರಿತು ತನಿಖೆ ಮುಂದುವರಿದಿದ್ದು, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

You Might Also Like

ಬೆಂಗಳೂರಿನಲ್ಲಿ ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ, ಪೊಲೀಸರು ಫುಲ್ ಅಲರ್ಟ್

ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ ಸಾಧ್ಯತೆ

ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಬ್ಬಂದಿಗೆ ಹೃದಯಾಘಾತ- ಶಿಕ್ಷಕ ದುರ್ಮರಣ

ಇಂದು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದುವರಿದ ಮಳೆ

ದೆಹಲಿ–ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಮಂಜಿನಿಂದ ಸರಣಿ ಅಪಘಾತ, ಹಲವು ಬಸ್‌–ಕಾರುಗಳಿಗೆ ಬೆಂಕಿ, ನಾಲ್ವರ ಸಾವು

TAGGED:BallaryJanardhana Reddy
Share This Article
Facebook Copy Link Print
Previous Article AR Rahman ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಲು ಮುಂದಾದ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್
Next Article Cricketer ಹೆಲ್ಮೆಟ್ ಮೇಲೆ ಪ್ಯಾಲೆಸ್ಟೈನ್ ಬಾವುಟ ಅಂಟಿಸಿಕೊಂಡಿದ್ದ ಕ್ರಿಕಟಿಗ : ಭಾರಿ ವಿವಾದ ಸೃಷ್ಟಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up