ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಮುಂದುವರೆಸಿದ್ದು, ಇಂದು ನಡೆದ ಕಾರ್ಯಾಚರಣೆಯಲ್ಲಿ ರಾಜಾಜಿನಗರ ಪೀಣ್ಯ ಇಂಡಸ್ಟ್ರಿಯಲ್ 2ನೇ ಹಂತ ಬಡಾವಣೆಯಲ್ಲಿ ರೂ. 12 ಕೋಟಿ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕು, ಯಶವಂತಪುರ ಹೋಬಳಿ, ಪೀಣ್ಯ ಗ್ರಾಮದ ಸರ್ವೆ ನಂ. 79ರ ಕೈಗಾರಿಕಾ ನಿವೇಶನ ಸಂಖ್ಯೆ 14 ಮತ್ತು 15 ರ 12000 ಚದರ ಅಡಿಯ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಾಣವಾಗಿದ್ದ ಶೆಡ್ ಅನ್ನು ತೆರವುಗೊಳಿಸಿ, ಸುಮಾರು 12 ಕೋಟಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.
ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಇವರುಗಳನ್ನು ಒಳಗೊಂಡಂತೆ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

