Belagavi : ತುಂಬಿ ಹರಿಯುತ್ತಿದ್ದ ಹಳ್ಳವನ್ನು ದಾಟಲು ಹೋಗಿ ಪಂಚಾಯತ್ ಸಿಬ್ಬಂದಿಯೊಬ್ಬ ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ತಾರಿಹಾಳ ಬಳಿ ನಡೆದಿದೆ.
ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಹಳ್ಳ-ಕೊಳ್ಳ, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಅಲ್ಲದೇ ಸೇತುವೆಗಳು ಕೂಡ ಜಲಾವೃತಗೊಂಡಿವೆ. ಹೀಗಿರುವಾಗ ಪಂಚಾಯತ್ ಸಿಬ್ಬಂದಿ ಸುರೇಶ್ ನಿಜಗುಣಿ ಗುಂಡನ್ನವರ್ (50) ಅವರು ಹಳ್ಳ ದಾಟಲು ಮುಂದಾಗಿದ್ದಾರೆ. ಈ ವೇಳೆ ಬೈಕ್ ಸಮೇತ ಸುರೇಶ್ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಪಂಚಾಯತ್ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಈ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಅಲ್ಲದೇ ನೀರಿನಲ್ಲಿ ಕೊಚ್ಚಿ ಹೋಗಿರುವ ಪಂಚಾಯತ್ ಸಿಬ್ಬಂದಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ದುರ್ಘಟನೆ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
- ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
- ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
- ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
- ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
- ವಾಣಿಜ್ಯ ಸಿಲಿಂಡರ್ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್ ಉದ್ಯಮಕ್ಕೆ ಕೊನೆಗೂ ರಿಲೀಫ್

