ಕೋಲಾರ : ಹಲವು ಬೇಡಿಕೆಗಳ ಈಡೇರಿಕೆಗಾಗಿ ಕಳೆದ 21 ದಿನಗಳಿಂದ ಬೆಮೆಲ್ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಬೆಮೆಲ್ ನೌಕರರ ಬೇಡಿಕೆಗಳ ಈಡೇರಿಕೆಗಾಗಿ ಕೋಲಾರದ ಸಂಸದರಾದ ಮಲ್ಲೇಶ್ ಬಾಬು ಅವರು ಇಂದು ಇಂದು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರನ್ನು ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದರು.
ನವದೆಹಲಿಯ ಕೇಂದ್ರ ಕಛೇರಿಯಲ್ಲಿ ರಕ್ಷಣಾ ಸಚಿವರನ್ನು ಭೇಟಿ ಮಾಡಿ ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿರುವ ಬೆಮೆಲ್ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಸಚಿವರಿಗೆ ವಿವರಿಸಿ ಸತತ 21 ದಿನಗಳಿಂದ ಬೆಮೆಲ್ ಕಾರ್ಮಿಕರು ಕೆಲಸವನ್ನು ಬಹಿಷ್ಕರಿಸಿ ಪ್ರತಿಭಟನೆ
ಮಾಡುತ್ತಿದ್ದಾರೆ, ಅವರ ಬೇಡಿಕೆಗಳನ್ನು ಪರಿಶೀಲಿಸಿ ಕಾರ್ಮಿಕರ ಬೇಡಿಕೆಗಳಿಗೆ ಸ್ಪಂದಿಸುವಂತೆ ಮನವಿ ಮಾಡಿದರು.
ಈಗಾಗಲೇ ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿಯವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ್ದು ಬೆಮೆಲ್ ರಕ್ಷಣಾ ಇಲಾಖೆಯ ವ್ಯಾಪ್ತಿಗೆ ಒಳಪಡುವುದರಿಂದ ರಕ್ಷಣಾ ಸಚಿವರ ಬಳಿ ಚರ್ಚಿಸುವ ಬಗ್ಗೆ ತಿಳಿಸಿದ್ದರು ಅದಕ್ಕಾಗಿ ರಕ್ಷಣಾ ಸಚಿವರು ತಕ್ಷಣ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು
ನಮ್ಮ ಮನವಿಯನ್ನು ಸ್ವೀಕರಿಸಿದ ರಕ್ಷಣಾ ಸಚಿವರು ಎಲ್ಲಾ ಅಧಿಕಾರಿ ವರ್ಗವರೊಂದಿಗೆ ಚರ್ಚಿಸಿ ಇನ್ನು 2-3 ದಿನಗಳಲ್ಲಿ ಬೆಮೆಲ್ ಕಾರ್ಮಿಕರ ಸಮಸ್ಯೆಗಳಿಗೆ ಸಂಪೂರ್ಣ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ವರದಿ : ಅರುಣ್ ಕುಮಾರ್ B.S