ಬೆಂಗಳೂರು: ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆರ್ ಎಂಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನ ಆಶ್ರಯ ನಗರ ನಿವಾಸಿ ಪುಟ್ಟಸ್ವಾಮಿ ಮೃತ ವ್ಯಕ್ತಿ. ಆಂಥೋನಿ ಎಂಬುವವರ ಜೊತೆ ಪುಟ್ಟಸ್ವಾಮಿ ಮ್ಯಾನ್ ಹೋಲ್ ಗೆ ಇಳಿದು ಮ್ಯಾನ್ ಹೋಲ್ ಸ್ವಚ್ಛಗೊಳಿಸಿದ್ದರು. ಸುಮಾರು ಒಂದುಗಂಟೆ ಕಾಲ ಒಳಚರಂಡಿಗೆ ಇಳಿದು ಸ್ವಚ್ಛತಾ ಕಾರ್ಯ ನಡೆಸಿದ್ದಾರೆ.
ಈ ವೇಳೆ ಉಸಿರುಗಟ್ಟಿದಂತಾಗುತ್ತಿದೆ ಎಂದು ಇಬ್ಬರೂ ಹೊರಬಂದಿದ್ದಾರೆ. ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಮನೆಗೆ ತೆರಳಿದ್ದರು. ಮನೆಗೆ ಬಂದು ಕೆಲ ಸಮಯದ ಬಳಿಕ ಪುಟ್ಟಸ್ವಾಮಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಆರ್ ಎಂಸಿ ಯಾರ್ಡ್ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
- ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
- ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
- ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
- ವಿಜಯನಗರಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಚಿನ್ನದ ಪದಕ

