ಬೆಂಗಳೂರು : ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರೆಂದು ಹೇಳಿಕೊಂಡು ಸೈಬರ್ ವಂಚಕರು ಬೆಂಗಳೂರಿನ ಸಾಫ್ಟ್ವೇರ್ ಇಂಜಿನಿಯರ್ಗೆ 11 ಕೋಟಿ ರೂ. ವಂಚನೆ ಮಾಡಿದ್ದಾರೆ. ವಿಜಯ್ ಕುಮಾರ್ ವಂಚನೆ ಒಳಗಾದ ಸಾಫ್ಟ್ವೇರ್ ಇಂಜಿನಿಯರ್. ಈ ಕುರಿತು ಬೆಂಗಳೂರಿನ ಈಶಾನ್ಯ ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯ್ ಕುಮಾರ್ ಮೋಸ ಹೋಗಿದ್ದು ಹೇಗೆ..?
ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರೆಂದು ಹೇಳಿಕೊಂಡು ಸೈಬರ್ ವಂಚಕರು ವಿಜಯ್ ಕುಮಾರ್ ಅವರಿಗೆ ಕರೆ ಮಾಡಿದ್ದಾರೆ. “ಮುಂಬೈನ ಕೊಲಾಬಾದಲ್ಲಿ ನಿಮ್ಮ ಮೇಲೆ ಪ್ರಕರಣವೊಂದು ದಾಖಲಾಗಿದೆ. ನಿಮ್ಮ ಆಧಾರ್ ಕಾರ್ಡ್ ಬಳಸಿಕೊಂಡು ಹಣ ವರ್ಗಾವಣೆಯಾಗಿದೆ. 6 ಕೋಟಿ ರೂ. ವಂಚನೆಯಾಗಿದೆ.
ಈಗ ಕೇಸ್ ಸುಪ್ರೀಂಕೋರ್ಟ್ನಲ್ಲಿ ಇದೆ ಎಂದು ಹೆದರಿಸಿದ್ದಾರೆ. ಬಳಿಕ, ವಂಚಕರು ವಿಡಿಯೋ ಕಾಲ್ ಮಾಡಿ ಒಂದು ತಿಂಗಳ ಕಾಲ ವಿಜಯ್ ಕುಮಾರ್ ಅವರನ್ನು ಡಿಜಿಟಲ್ ಅರೆಸ್ಟ್ ಮಾಡಿದ್ದಾರೆ. ಒಂದು ತಿಂಗಳ ಕಾಲ ಮನೆಯಲ್ಲಿ ಇರದಂತೆ ಹೇಳಿದ್ದಾರೆ. ಹೀಗಾಗಿ ವಿಜಯ್ ಕುಮಾರ್ ಅವರು ಯಲಹಂಕದ ಲಾಡ್ಜ್ವೊಂದರಲ್ಲಿ ಇದ್ದರು.
ವಿಜಯ್ ಕುಮಾರ್ ಕಳೆದ ಹಲವು ವರ್ಷಗಳಿಂದ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದರು. ಇದನ್ನೇ ಟಾರ್ಗೆಟ್ ಮಾಡಿದ ಸೈಬರ್ ವಂಚಕರು ಟೆಕ್ಕಿ ವಿನಯ್ ಕುಮಾರ್ ಅವರಿಂದ ಷೇರುಗಳನ್ನು ಮಾರಾಟ ಮಾಡಿಸಿದ್ದಾರೆ. ಬಳಿಕ ಹಂತ ಹಂತವಾಗಿ ಒಂದು ತಿಂಗಳ ಕಾಲ ವಿನಯ್ ಕುಮಾರ್ ಅವರಿಂದ 11 ಕೋಟಿ 83 ಕೋಟಿ ರೂ. ಅನ್ನು ತಮ್ಮ ಖಾತೆಗೆ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.