ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣ
ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಕೋರ್ಟ್
RCB,KSPA ,DNA ಸಂಸ್ಥೆಗಳಿಗೆ ನೋಟಿಸ್ ಜಾರಿ
ಕೈಗೊಂಡ ಕ್ರಮದ ವರದಿ ಹೈಕೋರ್ಟ್ಗೆ ಸಲ್ಲಿಕೆ
ಆರ್ಸಿಬಿ ಗೆಲುವನ್ನು ಸಂಭ್ರಮಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವಿಜಯೋತ್ಸವ ಕಾರ್ಯಕ್ರಮ ವೀಕ್ಷಿಸಲು ಕ್ರೀಡಾಂಗಣದ ಬಳಿ ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ದರು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಟ್ಟಿದ್ದರು.
ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಕೋರ್ಟ್, ಅರ್ಜಿ ವಿಚಾರಣೆ ನಡೆಸಿದೆ .ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ನ ವಿಭಾಗೀಯ ಪೀಠ ಆರ್‌ಸಿಬಿ (RCB), ಕೆಎಸ್‌ಸಿಎ, ಡಿಎನ್‌ಎ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿದೆ.
ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡಿದ್ದ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ವಿಭಾಗೀಯ ಪೀಠ ನಡೆಸಿತು. ರಾಜ್ಯ ಸರ್ಕಾರ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಕೈಗೊಂಡ ಕ್ರಮದ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ಗೆ ಸಲ್ಲಿಕೆ ಮಾಡಿತು.
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
- ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

