By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸೆನ್ಸರ್ ಪಾಸ್ ಮಾಡಿದ ‘ಭೀಮ’, ಆ. 9ಕ್ಕೆ ಆರ್ಭಟ ಶುರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸೆನ್ಸರ್ ಪಾಸ್ ಮಾಡಿದ ‘ಭೀಮ’, ಆ. 9ಕ್ಕೆ ಆರ್ಭಟ ಶುರು

BlogEntertainmentMain PostTop Storiesಸ್ಯಾಂಡಲ್​ವುಡ್-Sandalwood

ಸೆನ್ಸರ್ ಪಾಸ್ ಮಾಡಿದ ‘ಭೀಮ’, ಆ. 9ಕ್ಕೆ ಆರ್ಭಟ ಶುರು

Duniya Vijay

Published July 25, 2024
Share
4 Min Read
Bheema
SHARE

ದುನಿಯಾ ವಿಜಯ್ ಅಭಿನಯದ “ಭೀಮ” ಚಿತ್ರವು ಸೆನ್ಸರ್ ನಿಂದ ಎ ಸರ್ಟಿಫಿಕೇಟ್ ಪಡೆದುಕೊಂಡು , ಆಗಸ್ಟ್ 9 ಕ್ಕೆ ಚಿತ್ರವನ್ನ ಬಿಡುಗಡೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ವಿಚಾರವಾಗಿ ಮಾಧ್ಯಮದವರ ಮುಂದೆ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿಯನ್ನು ಹಂಚಿಕೊಳ್ಳಲು ಪತ್ರಿಕಾಗೋಷ್ಠಿಯನ್ನು ಆಯೋಜಿಸಿತ್ತು.

ಈ ಚಿತ್ರದ ನಿರ್ದೇಶಕ , ನಟ , ವಿಜಯ್ ಕುಮಾರ್ (ದುನಿಯಾ ವಿಜಯ್) ಮಾತನಾಡುತ್ತಾ ಈ ಚಿತ್ರದ ಮೂಲಕ ಒಂದು ಸೂಕ್ಷ್ಮ ವಿಚಾರವನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇನೆ. ಸಂದೇಶವಿರುವ ಈ ಚಿತ್ರ ಎಲ್ಲರಲ್ಲೂ ಜಾಗೃತಿ ಮೂಡಿಸುವಂತೆ ಆಗಬೇಕು. ನಾನು ಹಾಗೂ ಸಂಭಾಷಣೆ ಕಾರ ಮಾಸ್ತಿ ಸೇರಿ ಕಥೆ ಹಂತದಿಂದ ಹಿಡಿದು ಚಿತ್ರಕಥೆ , ಸಂಭಾಷಣೆಯಿಂದ ಪ್ರತಿ ಹಂತದಲ್ಲೂ ಬಹಳ ಶ್ರಮ ಪಟ್ಟು ಕೆಲಸ ಮಾಡಿದ್ದೇವೆ. ಈಗ ಚಿತ್ರ ಸೆನ್ಸರ್ನಿಂದ ಹೊರ ಬಂದಿದೆ, ನಾನು ಶಾಲಾ ದಿನಗಳಿಂದಲೂ ಬಿ ಪ್ಲಸ್ , ಸಿ ಪ್ಲಸ್ , ಪಡೆಯುತ್ತಿದೆ.

ಈಗ ನನ್ನ ಸಿನಿಮಾ ಮೂಲಕ ಸೆನ್ಸರ್ನಿಂದ ಎ ಪ್ಲಸ್ ಸಿಕ್ಕಂತಾಗಿದೆ ಎನ್ನುತ್ತಾ ಎ ಸರ್ಟಿಫಿಕೇಟ್ ಸಿಕ್ಕಿದ್ದನ್ನು ಸಮರ್ಥಿಸಿಕೊಂಡರು. ಹಾಗೆ ಚಿತ್ರದ ಸಂಭಾಷಣೆ ವಿಚಾರವಾಗಿ ಒಂದಷ್ಟು ಕಟ್ಸ್ , ಮ್ಯೂಟ್ಸ್ ಮಾಡಲು ಹೇಳಿದ್ದಾರೆ, ಅದರಂತೆ ಎಲ್ಲವನ್ನ ಮಾಡುತ್ತೇವೆ. ವಿದ್ಯಾರ್ಥಿಗಳು , ಹರಿಹರಿಯದವರ ಬದುಕಿನ ದು ಸ್ಥಿತಿಯ ವಿಚಾರವು ಸೇರಿದಂತೆ ಒಂದಷ್ಟು ನಾ ಕಂಡು ಕೇಳಿದಂತ ಸತ್ಯಗಳನ್ನು ಹೊರಹಾಕುವ ಪ್ರಯತ್ನ ಭೀಮ ಚಿತ್ರದಲ್ಲಿ ಮಾಡಿದ್ದೇನೆ.

ಹಾಗೂ ನನ್ನ ನಿರ್ಮಾಪಕರಾದ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ತುಂಬಾ ಸಾತ್ ನೀಡಿದ್ದಾರೆ. ನನ್ನ ಎಲ್ಲಾ ವಿಚಾರಕ್ಕೂ ಸೈ ಎಂದಿದ್ದಾರೆ. ಮ್ಯೂಸಿಕ್ ಡೈರೆಕ್ಟರ್ ಚರಣ್ ರಾಜ್ ಈಗಾಗಲೇ ಹಾಡುಗಳ ಮೂಲಕ ಸಕ್ಸಸ್ ತಂದು ಕೊಟ್ಟಿದ್ದಾರೆ. ರೀ-ರೆಕಾರ್ಡಿಂಗ್ ಕೂಡ ಅದ್ಭುತವಾಗಿ ಮಾಡಿದ್ದಾರೆ.

ಇನ್ನು ಛಾಯಾಗ್ರಹಕ ಶಿವಸೇನಾ, ಸಂಕಲನ ದೀಪು. ಎಸ್. ಕುಮಾರ್ , ಸಂಭಾಷಣೆ ಮಾಸ್ತಿ , ಫೈಟ್ಸ್ಗಳನ್ನ ವಿನೋದ್ , ಚೇತನ್ ಡಿಸೋಜಾ, ಟೈಗರ್ ಶಿವ, ಗೌತಮ್ ಹಾಗೂ ಡ್ಯಾನ್ಸ್ ಕೋರಿಯೋಗ್ರಾಫಿ ಬಿ. ಧನಂಜಯ , ರಾಜು ಸೇರಿದಂತೆ ಇಡೀ ನಮ್ಮ ಚಿತ್ರಕ್ಕೆ ತಾರಾಬಳಗ ಹಾಗೂ ತಾಂತ್ರಿಕ ವರ್ಗ ಬಹಳಷ್ಟು ಶ್ರಮವಿಸಿ ಕೆಲಸ ಮಾಡಿದ್ದೇವೆ. ಬುಡಕಟ್ಟು ಜನಾಂಗದವರು ಸೇರಿದಂತೆ ಒಂದಷ್ಟು ಯುವ ಪ್ರತಿಭೆಗಳಿಗೆ ಅವಕಾಶ ಮಾಡಿಕೊಟ್ಟಿದ್ದೇನೆ. ನೀವೆಲ್ಲರೂ ಆಗಸ್ಟ್ 9ಕ್ಕೆ ನಮ್ಮ ಚಿತ್ರವನ್ನು ನೋಡಿ ಎಂದು ಕೇಳಿಕೊಂಡರು.

ಇನ್ನು ಈ ಚಿತ್ರದ ನಿರ್ಮಾಪಕರಾದ ಕೃಷ್ಣ ಸಾರ್ಥಕ್ ಮಾತನಾಡುತ್ತಾ ನಮ್ಮ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ, ಸೆನ್ಸರ್ ಹಂತದಲ್ಲಿ ಹೋದಾಗ ಕೊಂಚ ಭಯ ಇತ್ತು, ಆದರೆ ನಿರ್ದೇಶಕ ವಿಜಯ್ ಸರ್ ಸೆನ್ಸರ್ ಅಧಿಕಾರಿಗಳಿಗೆ ನಮ್ಮ ಸಿನಿಮಾದ ಕಂಟೆಂಟ್ ಬಗ್ಗೆ ಕನ್ವಿನ್ಸ್ ಮಾಡಿದ ರೀತಿ ಅದ್ಭುತ.

ಈಗಾಗಲೇ ಸಿನಿಮಾದ ಹಾಡುಗಳಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಎಲ್ಲರೂ ಬಂದು ಚಿತ್ರ ನೋಡಿ ಪ್ರೋತ್ಸಾಹಿಸಿ ಎಂದರು. ಅದೇ ರೀತಿ ಮತ್ತೊಬ್ಬ ನಿರ್ಮಾಪಕ ಜಗದೀಶ್ ಗೌಡ ಮಾತನಾಡುತ್ತಾ ನಾನು ಒಬ್ಬ ವಿತರಕ , ಈ ಚಿತ್ರವನ್ನು ನಿರ್ಮಿಸಿದಾಗ ಒಂದಷ್ಟು ವಿಚಾರ ನನಗೂ ತಿಳಿಯಿತು. ಬಹಳ ಶ್ರಮವಹಿಸಿ ಒಂದು ಉತ್ತಮ ಸಂದೇಶವಿರುವ ಚಿತ್ರವನ್ನು ಬಿಡುಗಡೆ ಹಂತಕ್ಕೆ ತಂದಿದ್ದೇವೆ. ಸದ್ಯ ಚಿತ್ರಮಂದಿರಗಳ ಪರಿಸ್ಥಿತಿ ನಮಗೂ ತಿಳಿದಿದೆ. ಮುಚ್ಚು ಹೋಗುತ್ತಿರುವ 18 ಚಿತ್ರಮಂದಿರಗಳು ನಮ್ಮ ಭೀಮ ಚಿತ್ರದ ಮೂಲಕ ಮತ್ತೆ ಓಪನ್ ಆಗಲಿದೆ. ಸುಮಾರು 400ಕ್ಕೂ ಹೆಚ್ಚು ಚಿತ್ರಮಂದಿರಲ್ಲಿ ನಮ್ಮ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದೇವೆ. ಅದೇ ರೀತಿ ದೇಶದ ಬೇರೆ ಬೇರೆ ರಾಜ್ಯಗಳಲ್ಲೂ ಕೂಡ ನಮ್ಮ ಚಿತ್ರ ನೇರವಾಗಿ ರಿಲೀಸ್ ಆಗುತ್ತಿದ್ದು, ವಿದೇಶದಲ್ಲಿ ಕೂಡ ಬಿಡುಗಡೆಗೆ ಮಾತುಕತೆ ನಡೆಯುತ್ತಿದೆ. ಈಗಾಗಲೇ ಚಿತ್ರದ ಎಲ್ಲಾ ಏರಿಯ ಸೋಲ್ಡ್ ಔಟ್ ಆಗಿದ್ದು , ಬಿಕೆಟಿಯನ್ನು ನಾನೇ ಉಳಿಸಿಕೊಂಡಿದ್ದೇನೆ. ಸದ್ಯ ಸಂಕಷ್ಟದಲ್ಲಿರುವ ಚಿತ್ರೋದ್ಯಮಕ್ಕೆ ನಮ್ಮ ಚಿತ್ರದ ಮೂಲಕ ಒಂದಷ್ಟು ಚೈತನ್ಯ ಸಿಗುವಂತಾಗಲಿ, ನಮ್ಮ ಚಿತ್ರವನ್ನು ಚಿತ್ರಮಂದಿರದಲ್ಲಿ ಬಂದು ನೋಡಿ ಎಂದು ಕೇಳಿಕೊಂಡರು.

Bhima 1 Bhima 1 Bhima 1

ಇನ್ನು ಈ ಚಿತ್ರದಲ್ಲಿ ಅಭಿನಯಿಸಿದಂತ ಕಲಾವಿದರು ಹಾಗೂ ತಾಂತ್ರಿಕ ವರ್ಗದವರು ತಮ್ಮ ತಮ್ಮ ಅಭಿಪ್ರಾಯಗಳನ್ನ ಹಂಚಿಕೊಂಡರು. ಈ ಭೀಮ ಚಿತ್ರದಲ್ಲಿ ಸಮಾಜಿ ಕಳಕಳಿ ಸಂದೇಶ ಒಳಗೊಂಡಿದೆಯಂತೆ.ಈ ಚಿತ್ರ ಬಿಡುಗಡೆ ನಂತರ ಒಂದಷ್ಟು ಚರ್ಚೆಗೆ ದಾರಿ ಮಾಡಿಕೊಳ್ಳುತ್ತದೆ ಎಂಬ ಅಭಿಪ್ರಾಯ ಚಿತ್ರ ತಂಡದ್ದು, ಬಹಳ ನೈಜಕ್ಕೆ ಒತ್ತುಕೊಟ್ಟು ಸೂಕ್ಷ್ಮ ಸ್ಥಳಗಳಲ್ಲಿ ಚಿತ್ರೀಕರಣ ಮಾಡಿರುವುದು ವಿಶೇಷ. ಇನ್ನು ನಟ , ನಿರ್ದೇಶಕ ವಿಜಯ್ ಕುಮಾರ್ ಅಲಿಯಾಸ್ (ದುನಿಯಾ ವಿಜಯ್) ತಮ್ಮ ಪಾತ್ರದ ಕುರಿತು ಹೆಚ್ಚು ಮಾತನಾಡದೆ , ನನ್ನ ಈ ನಿರ್ದೇಶನದ ಚಿತ್ರ ಖಂಡಿತ ಇಷ್ಟವಾಗುತ್ತೆ ಎಂಬ ಅಭಿಪ್ರಾಯವಿದೆ. ದಯವಿಟ್ಟು ಎಲ್ಲರೂ ಆಗಸ್ಟ್ 9ಕ್ಕೆ ಬಂದು ಚಿತ್ರವನ್ನು ನೋಡಿ ಎಂದು ವಿನಂತಿಸಿದರು.

ಬುಡಕಟ್ಟು ಜನಾಂಗದವರ ಹಾಡು :
ಹಾಗೆಯೇ ಈ ಚಿತ್ರದಲ್ಲಿ ಬುಡಕಟ್ಟು ಜನಾಂಗದವರ ಹಾಡಿರುವ ಒಂದು ಹಾಡನ್ನು ಬಳಸಿಕೊಳ್ಳಲಾಗಿದ್ದು , ಆ ಹಾಡನ್ನು ಸೇರಿದಂತೆ ಮತ್ತಷ್ಟು ಜಾನಪದ ಶೈಲಿಯ ಬೇರೆ ಬೇರೆ ಹಾಡುಗಳನ್ನು ಆ ಜನಾಂಗದ ಪ್ರತಿಭೆಗಳನ್ನ ಕರೆಸಿ ವೇದಿಕೆಯ ಮೇಲೆ ಹಾಡಿಸಿದ್ದು ವಿಶೇಷವಾಗಿತ್ತು. ಪ್ರಸ್ತುತ ಚಿತ್ರೋದ್ಯಮದ ಪರಿಸ್ಥಿತಿ, ಸಕ್ಸಸ್ ಕಾಣದ ಚಿತ್ರಗಳ ನಡುವೆ ಹೊಸ ಚೈತನ್ಯ ನೀಡಲು ಬಲ ಭೀಮನಾಗಿ ಬರಲು ಸಿದ್ಧವಾಗಿರುವ ಚಿತ್ರ ಇದಾಗಿದೆ.

You Might Also Like

ಯೋಗೇಶ್ವರ್ ಹಠವ ಸಾಧಿಸಿದರೆ ಹೇಗೆ ಸಹಿಸಿಕೊಳ್ಳೋದು : ನಿಖಿಲ್ ಕುಮಾರಸ್ವಾಮಿ

Crude Oil Price : ಹಾರ್ಮುಜ್ ಜಲಸಂಧಿ ಮುಚ್ಚಲು ಮುಂದಾದ ಇರಾನ್‌, ತೈಲ ದರ ದಿಢೀರ್‌ ಭಾರೀ ಏರಿಕೆ

ಕನ್ನಡದ ಹಿರಿಯ ನಟಿ ‘ಅಭಿನಯ ಸರಸ್ವತಿ’ ಬಿ.ಸರೋಜಾದೇವಿ ವಿಧಿವಶ

ಮತದಾನ ಮಾಡಿದ ಸ್ಯಾಂಡಲ್‌ವುಡ್ ತಾರಾ ಬಳಗ

ಕೆನಡಾದಲ್ಲಿ ಪಂಜಾಬ್ ಮೂಲದ ಭಾರತೀಯ ವಿದ್ಯಾರ್ಥಿನಿಗೆ ಗುಂಡಿಕ್ಕಿ ಹತ್ಯೆ

TAGGED:BheemaDuniya VijaySandalwood
Share This Article
Facebook Copy Link Print
Previous Article Nepal Plane Crash ಟೇಕಾಫ್ ವೇಳೆ ವಿಮಾನ ಪತನ, 18 ಮಂದಿ ಸಾವು
Next Article Draupadi Murmu ಶಿಕ್ಷಕಿಯಾಗಿ ಪಾಠ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up