By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಡಿಸಿಎಂ ಈಶ್ವರಪ್ಪಗೆ ಬಿಗ್ ರಿಲೀಫ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಡಿಸಿಎಂ ಈಶ್ವರಪ್ಪಗೆ ಬಿಗ್ ರಿಲೀಫ್

ರಾಜ್ಯ-KarnatakaLatest

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಡಿಸಿಎಂ ಈಶ್ವರಪ್ಪಗೆ ಬಿಗ್ ರಿಲೀಫ್

Big relief for former DCM Eshwarappa in disproportionate assets case

Published July 11, 2025
Share
2 Min Read
ks eshwarrapa ks eshwarrapa ks eshwarrapa
SHARE

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ K S ಈಶ್ವರಪ್ಪ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ವಕೀಲರಾದ ವಿನೋದ್ ಅವರು ಲೋಕಾಯುಕ್ತದಲ್ಲಿ ಹೂಡಿದ್ದ ಮೊಕದ್ದಮೆಗೆ ಹೈಕೋರ್ಟ್ ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ವಕೀಲ ವಿನೋದ್ ಅವರು ನನ್ನ ಹಾಗೂ ನಮ್ಮ ಕುಟುಂಬದ ಮೇಲೆ ಅಕ್ರಮ ಆಸ್ತಿ ಸಂಬಂಧಿಸಿದಂತೆ ಪದೇ ಪದೇ ನ್ಯಾಯಾಲಯದಲ್ಲಿ ದೂರು ದಾಖಲಿಸುತ್ತಿದ್ದರು. ಅವರು ಒಂದೇ ಒಂದು ಕೇಸ್ ನಲ್ಲೂ ಸಾಬೀತುಪಡಿಸಲು ಯಶಸ್ವಿಯಾಗಿಲ್ಲ.

ಈ ಸಂಬಂಧ ನಾನು ಅವರ ಮೇಲೆ ಮಾನನಷ್ಟ ಮೊಕದ್ದಮೆ ಕೂಡ ದಾಖಲು ಮಾಡಿದ್ದೆ. ಅದು ಕೂಡ ನ್ಯಾಯಾಲಯದಲ್ಲಿದೆ. ಇತ್ತೀಚೆಗೆ ಅವರು ಹೈಕೋರ್ಟ್‍ನಲ್ಲಿ ನನ್ನ ವಿರುದ್ಧ ಕೇಸ್ ದಾಖಲಿಸಿದ್ದರು. ಹೈಕೋರ್ಟ್ ಅದನ್ನು ಕೆಳಹಂತದ ನ್ಯಾಯಾಲಯದಲ್ಲಿ ಪ್ರಶ್ನಿಸುವಂತೆ ಸೂಚನೆ ನೀಡಿತ್ತು. ಅಲ್ಲಿ ಕೂಡ ಆ ಪ್ರಕರಣ ಡಿಸ್‍ಮಿಸ್ ಆಗಿತ್ತು. ಇತ್ತೀಚೆಗೆ ಮತ್ತೆ ಅವರು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೋಗಿದ್ದರು.

ಅಲ್ಲಿ ಅವರು ಲೋಕಾಯುಕ್ತಕ್ಕೆ ದೂರು ನೀಡುವಂತೆ ಸೂಚನೆ ನೀಡಿದ್ದರು. ಲೋಕಾಯುಕ್ತದಿಂದ ನನಗೆ ಇದುವರೆಗೆ ನೋಟಿಸ್ ಬಂದಿಲ್ಲ. ಎಫ್.ಐ.ಆರ್. ಕಾಪಿನೂ ನನಗೆ ಲಭ್ಯವಾಗಿಲ್ಲ. ಆದರೆ, ನಾನು ಮಾಧ್ಯಮಗಳ ಸುದ್ದಿಯನ್ನು ನೋಡಿ ಹೈಕೋರ್ಟ್‍ಗೆ ತಡೆಯಾಜ್ಞೆ ಕೋರಿದ್ದೆ. ನನ್ನ ಅರ್ಜಿ ಪರಿಶೀಲನೆ ಮಾಡಿದ ಹೈಕೋರ್ಟ್ ಈ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿದೆ. ಇದು ನನಗೆ ಸಿಕ್ಕಿದ ನೈತಿಕ ಜಯವಾಗಿದೆ. ನನ್ನ ಪರವಾಗಿ ಖ್ಯಾತ ನ್ಯಾಯವಾದಿ ಅಶೋಕ್ ಹಾರನಹಳ್ಳಿ ಅವರು ವಾದ ಮಂಡಿಸಿದ್ದರು ಎಂದರು.

5 ವರ್ಷ ಮುಖ್ಯಮಂತ್ರಿ ಎಂಬುದು ಒಬ್ಬ ವ್ಯಕ್ತಿಯ ಅಭಿಪ್ರಾಯ :
ಸಿದ್ದರಾಮಯ್ಯ ಸಿದ್ದರಾಮಯ್ಯ ಅವರು ನಾನೇ 5 ವರ್ಷ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದು, ಇದು ಒಬ್ಬ ವ್ಯಕ್ತಿಯ ಅಭಿಪ್ರಾಯ. ಕಾಂಗ್ರೆಸ್ ಪಕ್ಷದಲ್ಲಿ ಕೇಂದ್ರ ನಾಯಕರು ಹೇಳಿದ್ದರೆ ಇದನ್ನು ನಂಬಬಹುದಿತ್ತು. ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಸ್ಪಷ್ಠೀಕರಣ ನೀಡಬೇಕಾಗಿದೆ ಎಂದರು.

ನನಗೆ ಈ ಬಗ್ಗೆ ತಕಾರಾರಿಲ್ಲ. ಆದರೆ, ಅವರು ನಮ್ಮ ರಾಜ್ಯದ ಮುಖ್ಯಮಂತ್ರಿಯಾಗಿದ್ದಾರೆ. ಅವರ ಹೇಳಿಕೆಗೆ ಉಪ ಮುಖ್ಯಮಂತ್ರಿ ಕೂಡ ಪ್ರತಿಕ್ರಿಯೆ ನೀಡಿಲ್ಲ. ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುವುದು ಶಾಸಕಾಂಗ ಅಥವಾ ಪಕ್ಷದ ಹೈಕಮಾಂಡ್. ಆದರೆ, ಇವರೇ ತೀರ್ಮಾನ ಮಾಡುವುದು ಎಷ್ಟರಮಟ್ಟಿಗೆ ಸರಿ? ಒನ್ ಮ್ಯಾನ್ ಶೋ ಮಾಡುತ್ತಿದ್ದಾರೆ. ನನಗೆ ಸಿಎಂ ಹೇಳಿಕೆ ಆಶ್ಚರ್ಯ ತಂದಿದೆ. ಪಕ್ಷದಲ್ಲೂ ಗೊಂದಲ, ರಾಜ್ಯದ ಜನರಲ್ಲೂ ಗೊಂದಲ ಉಂಟು ಮಾಡುತ್ತಿದ್ದಾರೆ.

ಈ ಬಗ್ಗೆ ಕಾಂಗ್ರೆಸ್‍ನ ಕೇಂದ್ರ ನಾಯಕರು ಸ್ಪಷ್ಟನೆ ನೀಡಬೇಕಾಗಿದೆ. ಹಿಂದೆ ನಡೆದ ಮಾತುಕತೆಯನ್ನು ಬಹಿರಂಗಪಡಿಸಲಿ. ಖ.ಕೆ. ಶಿವಕುಮಾರ್ ಅವರಿಗೆ ಕೆಲವೇ ಶಾಸಕರ ಬೆಂಬಲ ಮಾತ್ರವಿದೆ ಎಂದು ಕೆಲವು ಶಾಸಕರು ಹೇಳುತ್ತಿದ್ದಾರೆ. ಈ ಮಾತನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹೇಳಬೇಕಿತ್ತು. ಕೂಡಲೇ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಲಿ. ರಾಜ್ಯದ ಜನರಲ್ಲಿರುವ ಗೊಂದಲ ಬಗೆಹರಿಸಲಿ ಎಂದರು.

You Might Also Like

ಪ್ರಧಾನಿ ಮೋದಿಗೆ ಅತ್ಯುನ್ನತ ರಾಷ್ಟ್ರೀಯ ಗೌರವ ಪ್ರಶಸ್ತಿ ಘೋಷಿಸಿದ ಡೊಮಿನಿಕಾ

ಉಗ್ರನಿಗೆ ಥ್ಯಾಂಕ್ಸ್ ಹೇಳಿದ್ದರಂತೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್..!

ಈಗಿರುವುದು ಗಾಂಧಿ ಕಾಂಗ್ರೆಸ್ ಅಲ್ಲ, ಅಲಿಬಾಬಾ ನಲವತ್ತು ಕಳ್ಳರ ಕಾಂಗ್ರೆಸ್ : ಹೆಚ್ಡಿಕೆ

ಒಂದೂವರೆ ಲಕ್ಷ ಖರ್ಚು ಮಾಡಿಕೊಂಡು ಬಂದು ಮತದಾನ ಮಾಡಿದ ಯುವತಿ

ಹುಲಿಗಳ ಸಾವು : 3 ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ ಖಂಡ್ರೆ ಶಿಫಾರಸು

TAGGED:KS Eshwarappa
Share This Article
Facebook Copy Link Print
Previous Article Devil Devil Devil ‘ಡೆವಿಲ್’ಗೆ ವೀಸಾ ನಿರಾಕರಿಸಿದ ಸ್ವಿಟ್ಜರ್‌ಲ್ಯಾಂಡ್ ಬೆನ್ನಲ್ಲೇ ಥಾಯ್ಲೆಂಡ್​ಗೆ ಹೊರಟ ದರ್ಶನ್‌
Next Article Yuva Yuva Yuva ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ನಟ ಯುವರಾಜ್ ಕುಮಾರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up