-ಮೈಸೂರು ಮತ್ತು ಹಾಸನ ಜಿಲ್ಲೆಯನ್ನ ಭವಾನಿ ರೇವಣ್ಣ ಅವರು ಪ್ರವೇಶಿಸದಂತೆ ಷರತ್ತು
ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣದಲ್ಲಿ (Kidnap Case) ಹೈಕೋರ್ಟ್ (High Court) ಭವಾನಿ ರೇವಣ್ಣ (Bhavani Revanna) ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.
ಮೈಸೂರು ಮತ್ತು ಹಾಸನ ಜಿಲ್ಲೆಯನ್ನ ಭವಾನಿ ರೇವಣ್ಣ ಅವರು ಪ್ರವೇಶಿಸದಂತೆ ಷರತ್ತು ವಿಧಿಸಿ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಪೊಲೀಸರು ಭವಾನಿ ಅವರಿಗೆ 85 ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತೆಗೆ ಊಟ ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನು ಒಪ್ಪಲಾಗುವುದಿಲ್ಲ. ಅಕ್ಕ (ಭವಾನಿ ರೇವಣ್ಣ) ಬಟ್ಟೆ ಊಟ ಕಳುಹಿಸಿದ್ದರೆಂದು ಸಂತ್ರಸ್ತೆ ಹೇಳಿಕೆಯಿದೆ ಎಂದು ನ್ಯಾ. ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಏ ಕಸದಸ್ಯ ಪೀಠ ಹೇಳಿತು.ಇದನ್ನೂ ಓದಿ: ಮುಂದುವರಿದ ಬಾಂಬ್ ಬೆದರಿಕೆ- ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನಕ್ಕೆ ಬೆದರಿಕೆ
ಪ್ರಕರಣವೇನು?
ಪ್ರಜ್ವಲ್ ರೇವಣ್ಣ ಅವರದ್ದು ಅಂತ ಬಿಡುಗಡೆಯಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಅವರು ಈಗ ಕಣ್ಮರೆಯಾಗಿದ್ದಾರೆ ಎಂದು ಸಂತ್ರಸ್ತೆ ಪುತ್ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರಕರಣದಲ್ಲಿ ಮಾಜಿ ಶಾಸಕ ಹೆಚ್.ಡಿ. ರೇವಣ್ಣ ಮತ್ತು ಅವರ ಪತ್ನಿ ಭವಾನಿ ರೇವಣ್ಣ ಮತ್ತು ಭವಾನಿ ಅವರ ಸಂಬಂಧಿ ಬಾಬು ವಿರುದ್ಧ ದೂರು ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ಈಗಾಗಲೆ ಆರೋಪಿ ಬಾಬು ಅನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸಿದ್ದರು.ಇದನ್ನೂ ಓದಿ: ಇಂದು ಮೈಸೂರಿಗೆ ನಟ ದರ್ಶನ್; ಹೋಟೆಲ್ ಸೇರಿದಂತೆ ಹಲವೆಡೆ ಸ್ಥಳ ಮಹಜರು
ಹೆಚ್ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಸದ್ಯ ಹೆಚ್ಡಿ ರೇವಣ್ಣ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇದೇ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರೂ ಕೂಡ ಎಸ್ಐಟಿ ಅಧಿಕಾರಿಗಳ ವಿಚಾರಣೆಗೆ ಹಾಜರಾಗಬೇಕು. ಈ ಸಂಬಂಧ ಎಸ್ಐಟಿ ಭವಾನಿ ರೇವಣ್ಣ ಅವರಿಗೆ ಎರಡೆರಡು ನೋಟಿಸ್ ಕೊಟ್ಟಿತ್ತು. ನೋಟಿಸ್ ನೀಡುತ್ತಿದ್ದಂತೆ ಭವಾನಿ ರೇವಣ್ಣ ಅವರು ವಿಚಾರಣಾ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ನೀರಿಕ್ಷಣಾ ಜಾಮೀನು ಅರ್ಜಿ ತಿರಸ್ಕತಿಸಿತ್ತು.ಇದನ್ನೂ ಓದಿ: ಪ್ರಜ್ವಲ್ ರೇವಣ್ಣSIT ಕಸ್ಟಡಿ ಇಂದಿಗೆ ಅಂತ್ಯ- ಕೋರ್ಟ್ ಮುಂದೆ ಹಾಜರು
ಹೀಗಾಗಿ ಭವಾನಿ ರೇವಣ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ನ ಏಕ ಸದಸ್ಯ ಪೀಠ ಈ ಹಿಂದೆ ಭವಾನಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಕಾಯ್ದಿರಿಸಿತ್ತು. ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ.

