ಬೆಂಗಳೂರು: ರಾಜ್ಯ ಬಜೆಟ್ ವಿರುದ್ಧವಾಗಿ ಬಿಜೆಪಿ ನಾಯಕರು ವಿಧಾನಸೌಧ ಮುಂಭಾಗ ಖಾಲಿ ಚೊಂಬು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ B. Y. Vijayendra ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಹಲವು ಬಿಜೆಪಿ ನಾಯಕರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ನಾಯಕರು, ಈ ಬಾರಿಯ ರಾಜ್ಯ ಬಜೆಟ್ ಸಂಪೂರ್ಣವಾಗಿ “ಖಾಲಿ ಚೊಂಬು ಬಜೆಟ್” ಎಂದು ಆರೋಪಿಸಿದರು. “ಚೊಂಬು ಚೊಂಬು ಖಾಲಿ ಚೊಂಬು… ಕರ್ನಾಟಕದ ಬಜೆಟ್ ಖಾಲಿ ಚೊಂಬು” ಎಂದು ಘೋಷಣೆ ಕೂಗಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಶಾಸಕ Sunil Kumar ಹಾಗೂ ಎಂಎಲ್‌ಸಿ N. Ravikumar ವಿಜಯೇಂದ್ರ ಅವರಿಗೆ ಸಾಥ್ ನೀಡಿದರು. ವಿಧಾನಸೌಧ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರ ಕರ್ನಾಟಕಕ್ಕೆ ಮೂರು ನಾಮ ಎಳೆದಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದರು.
ಮುಖ್ಯಮಂತ್ರಿ Siddaramaiah ಮಂಡಿಸಿದ ಬಜೆಟ್ ಸಾಲದ ಬಜೆಟ್ ಆಗಿದ್ದು, ರೈತರಿಗೆ ನ್ಯಾಯ ಸಿಗಲಿಲ್ಲ ಎಂದು ಅವರು ಟೀಕಿಸಿದರು. ಎಸ್‌ಸಿ, ಎಸ್‌ಟಿ ಹಾಗೂ ಓಬಿಸಿ ಸಮುದಾಯಗಳಿಗೆ ಸರ್ಕಾರ ಪಂಗನಾಮ ಹಾಕಿದೆ ಎಂದು ಆರೋಪಿಸಿದ ಅವರು, ರಾಜ್ಯದ ಯುವಜನತೆಗೆ ಮೋಸ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಿದರು.

