ಬೆಂಗಳೂರು: ಇಡೀ ದೇಶದಲ್ಲೇ ಸಂಚಲನ ಮೂಡಿಸಿದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ (Renukaswamy Murder Case) ಬಳಿಕ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ (KFCC) ಮುಜುಗರವಾಗಿದೆ. ನಟ ದರ್ಶನ್ (Darshan) ಕೃತ್ಯವನ್ನು ಖಂಡಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಭೇಟಿ ನೀಡಿ ಸ್ವಾಂತನ ಹೇಳಲಿದೆ.
ಸಾರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್ ಸೇರಿದಂತೆ 15ಕ್ಕೂ ಹೆಚ್ಚು ಸದಸ್ಯರು ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಲಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ – ಡಿ ಗ್ಯಾಂಗ್ನ ಮತ್ತಿಬ್ಬರು ಅರೆಸ್ಟ್
ಆರೋಪಿ ನಟ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವುದು ಹಾಗೂ ಅಸಹಕಾರ ನೀಡುವುದರ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಆರೋಪ ಸಾಬೀತಾದರೆ ಅಸಹಕಾರ ನೀಡುವ ವಿಚಾರಾಗಿ ನಿರ್ಧಾರ ಮಾಡಲಾಗುತ್ತದೆ ಎಂದು ಫಿಲ್ಮ್ ಚೇಂಬರ್ ಅಧ್ಯಕ್ಷ್ಯ ಎನ್.ಎಂ ಸುರೇಶ್ (NM Suresh) ಜೂ.13ರಂದು ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು. ಇದನ್ನೂ ಓದಿ: ಕೇಂದ್ರ ಸ್ಥಾನವನ್ನ ರಾಜ್ಯದ ಜನರಿಗೆ ಅರ್ಪಣೆ – ಹೆಚ್ಡಿಕೆ ಭಾವುಕ