ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ (Delhi) ಪಬ್ಲಿಕ್ ಶಾಲೆಗೆ (School) ಬಾಂಬ್ (Bomb) ಬೆದರಿಕೆ ಹಾಕಲಾಗಿದೆ.
ಈ ಸಂಬoಧ ದೆಹಲಿ ಪೊಲೀಸರು ಪ್ರತಿಕ್ರಿಯಿಸಿ, ದ್ವಾರಕಾದ ದೆಹಲಿ ಪಬ್ಲಿಕ್ ಸ್ಕೂಲ್‌ನಲ್ಲಿ ಬಾಂಬ್ ಇರುವ ಬಗ್ಗೆ ಮಾಹಿತಿ ಲಭಿಸಿದೆ. ದೆಹಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳಗಳು ಸ್ಥಳಕ್ಕೆ ದೌಡಾಯಿಸಿದ್ದು, ಶೋಧಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು
ಬಾಂಬ್ ಬೆದರಿಕೆ ಹಿನ್ನೆಲೆ ದೆಹಲಿ ಪೊಲೀಸ್ ಬಾಂಬ್ ನಿಷ್ಕ್ರಿಯ ದಳ ಮತ್ತು ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ಆಗಮಿಸಿದ್ದು, ಶಾಲಾ ಆವರಣದಲ್ಲಿ ಪರಿಶೀಲನೆ ನಡೆಸುತ್ತಿದೆ. ಬಾಂಬ್ ನಿಷ್ಕ್ರಿಯ ತಂಡ ಶಾಲೆಯ ಸಂಪೂರ್ಣ ತಪಾಸಣೆ ನಡೆಸುತ್ತಿದೆ. ಇದನ್ನೂ ಓದಿ: ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಮುಳುಗಿ ಸಾವು – ಐವರು ದುರ್ಮರಣ
ಮತ್ತೊಂದು ಶಾಲೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪೂರ್ವ ಮಯೂರ್ ವಿಹಾರ್ ನಲ್ಲಿರುವ ಮದರ್ ಮೇರಿ ಶಾಲೆಗೂ ಬೆದರಿಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಇಡೀ ಶಾಲೆಯನ್ನು ಪರಿಶೀಲನೆ ನಡೆಸಿದ್ದಾರೆ. ಆದರೆ ಈವರೆಗೂ ಯಾವುದೇ ಅನುಮಾನಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದನ್ನೂ ಓದಿ: ಚುನಾವಣೆಯಿಂದ 6 ವರ್ಷ ಮೋದಿ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
.

