ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬಂಬ್ ಬೆದರಿಕೆಗಳು ಬಂದಿದ್ದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport) ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ (Aeroplane) ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ (Bomb Threat) ಬಂದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಬಾಂಬ್ ಬೆದರಿಕೆ ಕಳಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ದೂರು ದಾಖಲಿಸಿದ್ದಾರೆ. ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಇಂದು- ಜೈಲಾ.. ಬೇಲಾ?
ಟರ್ಮಿನಲ್ 1ಡಿ ಮ್ಯಾನೇಜರ್ ಗೀತಾ ರಾಣಿ ಅವರು ಮೇ 2 ರಂದು ದೂರು ದಾಖಲಿಸಿದ್ದು. ಏಪ್ರಿಲ್ 29 ರಂದು ಬೆಳಿಗ್ಗೆ ವಿಮಾನ ನಿಲ್ದಾಣದ ಮೇಲ್ ಐಡಿಗೆ, ವಿಮಾನದಲ್ಲಿ ಟೈಂ ಬಾಂಬ್ ಇಡಲಾಗಿದೆ. ಯಾವುದೇ ಸಮಯದಲ್ಲಿ ಸ್ಫೋಟಗೊಳ್ಳಬಹುದು. ಜೊತೆಗೆ, ಗುಂಪಿನಿAದ ಟರ್ಮಿನಲ್ 1 ರ ಒಳಗೆ ವಿವಿಧ ಸ್ಥಳಗಳಲ್ಲಿ ಸ್ಫೋಟಕ ವಸ್ತುಗಳನ್ನು ಇರಿಸಲಾಗಿದೆ ಅಂತ ಮೇಲ್ ಬಂದಿದೆ ಎಂದು ವಿಮಾನ ನಿಲ್ದಾಣ ಸಿಬ್ಬಂದಿ ತಿಳಿಸಿದರು. ಇದನ್ನೂ ಓದಿ: KOMUL ನೇಮಕಾತಿ ಹಗರಣದಲ್ಲಿ ಶಾಸಕ ನಂಜೇಗೌಡ ಸೇರಿ ಪ್ರಭಾವಿ ನಾಯಕರ ವಿರುದ್ಧ ತನಿಖೆಗೆ ಪತ್ರ
ವಿಮಾನ ನಿಲ್ದಾಣ ಸಿಬ್ಬಂದಿಯ ದೂರಿನ ಆಧಾರದ ಮೇಲೆ, ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ IPಅ ಸೆಕ್ಷನ್‌ಗಳು 501 (1) (ಬಿ), ಸೆಕ್ಷನ್ 507 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.ಇದನ್ನೂ ಓದಿ: ವಿದ್ಯುತ್ ಬಿಲ್ ಅಧಿಕವಾಗಿ ನೀಡಿದಕ್ಕೆ ಮತ್ತೊಂದು ಕೊಲೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಮಂಗಳೂರು ವಿಮಾನ ನಿಲ್ದಾಣಕ್ಕೂ ಅದೇ ದಿನ (ಏಪ್ರಿಲ್ 29) ಬಾಂಬ್ ಬೆದರಿಕೆ ಮೇಲ್ ಬಂದಿತ್ತು. ಅಲ್ಲದೆ ದೇಶದ ಇತರ ಕೆಲವು ಖಾಸಗಿ ವಿಮಾನ ನಿಲ್ದಾಣಗಳಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ದೆಹಲಿ ಮತ್ತು ಎನ್‌ಸಿಆರ್‌ನ ಶಾಲೆಗಳಿಗೆ ಮೇ 1 ರಂದು ಇದೇ ರೀತಿಯ ಬೆದರಿಕೆಗಳು ಬಂದಿದ್ದರೇ, ಅಹಮದಾಬಾದ್‌ನ ಶಾಲೆಗಳಿಗೆ ಸೋಮವಾರ (ಮೇ 6) ಬೆದರಿಕೆ ಸಂದೇಶ ಬಂದಿತ್ತು. ಇದನ್ನೂ ಓದಿ: ಮಹಿಳೆ ಕಿಡ್ನಾಪ್ ಕೇಸ್- ಎ2 ಆರೋಪಿ ಸತೀಶ್ ಬಾಬು 8 ದಿನ SIT ಕಸ್ಟಡಿಗೆ
¨