ನವದೆಹಲಿ: ಇತ್ತೀಚಿನ ದಿನಗಳಲ್ಲಿ ವಿಮಾನಗಳಿಗೆ ಬಾಂಬ್ ಬೆದರಿಕೆ(Bomb Threat) ಹೆಚ್ಚಾಗುತ್ತಿದೆ. ಇದೀಗ ದೆಹಲಿಯಿಂದ ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ(Air Canada) ವಿಮಾನಕ್ಕೆ (AC43) ಮಂಗಳವಾರ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ ಎಂದು ಮೂಲಗಳು ತಿಳಿಸಿವೆ.
ರಾತ್ರಿ 10.50ರ ಸುಮಾರಿಗೆ ಟೇಕ್ ಆಫ್ ಆಗಬೇಕಿದ್ದ ವಿಮಾನವನ್ನು ಐಸೋಲೇಷನ್ ಬೇಗೆ ಕಳುಹಿಸಲಾಗಿತ್ತು, ಸುರಕ್ಷತೆ ದೃಷ್ಟಿಯಿಂದ ವಿಮಾನ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ನಡೆಸಲಾಯಿತು. ಟೊರೊಂಟೊಗೆ ತೆರಳುತ್ತಿದ್ದ ಈ ವಿಮಾನದಲ್ಲಿ ಸುಮಾರು 306 ಪ್ರಯಾಣಿಕರಿದ್ದರು. ಇದನ್ನೂ ಓದಿ: ಇಂದಿರಾ ಗಾಂಧಿಯನ್ನು ಹತ್ಯೆಗೈದ ಅಂಗರಕ್ಷಕನ ಪುತ್ರನಿಗೆ ಜಯ
ಈ ಹಿಂದೆ ಪ್ಯಾರಿಸ್ನಿಂದ-ಮುಂಬೈಗೆ ತೆರಳುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಆ ವಿಮಾನದಲ್ಲಿ ಮುಂಬೈಗೆ ಬರುತ್ತಿದ್ದ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದು ಬರುತ್ತಿತ್ತು. ಬಳಿಕ ವಿಮಾನ ಬರುವ ಮೊದಲು ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ಭಾನುವಾರ ಬೆಳಗ್ಗೆ 10.19ಕ್ಕೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿತ್ತು. ಇದನ್ನೂ ಓದಿ: ಸುಧಾಕರ್ಗೆ ಗೆಲುವು, ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ
ಈ ಹಿಂದೆ ಬಂದ ಬೆದರಿಕೆಗಳು
ಪ್ಯಾರಿಸ್ನ ಚಾರ್ಲ್ಸ್ ಡಿ ಗೌಲ್ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಯುಕೆ 024 ವಿಮಾನವು ಏರ್ ಸಿಕ್ನೆಸ್ ಬ್ಯಾಗ್ನಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿತ್ತು. ಬೆದರಿಕೆ ಬಂದ ನಂತರ ಮುಂಬೈ ವಿಮಾನ ನಿಲ್ದಾಣದಲ್ಲಿ ರಾತ್ರಿ 10.08 ಕ್ಕೆ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ವಿಮಾನವು ಮುಂಬೈ ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ 10.19 ಕ್ಕೆ ಇಳಿಯಿತು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪ್ರಧಾನಿ ಅಭ್ಯರ್ಥಿಯನ್ನು ನಾವು ನಿರ್ಧರಿಸುತ್ತೇವೆ: ಉದ್ಧವ್ ಠಾಕ್ರೆ
ಚೆನ್ನೈ-ಮುಂಬೈ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ಲ್ಯಾಂಡಿಂಗ್ ನಿವಾರ ಚೆನ್ನೈನಿಂದ (Chennai) ಮುಂಬೈಗೆ ಹೊರಟಿದ್ದ ಇಂಡಿಗೋ 6ಇ 5314 ವಿಮಾನಕ್ಕೆ (IndiGo flight) ಬಾಂಬ್ ಬೆದರಿಕೆ ಬಂದ ಹಿನ್ನಲೆಯಲ್ಲಿ ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ – ಎಫ್ಐಆರ್ ದಾಖಲಿಸಿಕೊಂಡ ಸಿಬಿಐ
ಚೆನ್ನೈನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ 6ಇ 5314 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಮುಂಬೈನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದ್ದು, ಸಿಬ್ಬಂದಿ ಪ್ರೋಟೋಕಾಲ್ ಅನ್ನು ಅನುಸರಿಸಿದರು. ಭದ್ರತಾ ಏಜೆನ್ಸಿ ಮಾರ್ಗಸೂಚಿಗಳ ಪ್ರಕಾರ ವಿಮಾನವನ್ನು ಪ್ರತ್ಯೇಕ ಜಾಗಕ್ಕೆ ಕೊಂಡೊಯ್ಯಲಾಗಿದೆ ಎಂದು ವಿಮಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.