ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ನಗರದ ಹಲವು ಖಾಸಗಿ ಆಸ್ಪತ್ರೆಗಳಿಗೆ (Hospital) ಇ-ಮೇಲ್ ಮೂಲಕ ಬಾಂಬ್ ಬೆದರಿಕೆ (Bomb Threat) ಬಂದಿತ್ತು. ಇದರ ಬೆನ್ನಲ್ಲೇ ಇದೀಗ, ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದ ಜೈನ್ ಹೆರಿಟೇಜ್ ಶಾಲೆಗೆ (Jain Hertiage School0 ಬಾಂಬ್ ಬೆದರಿಕೆ (Bomb Treat) ಇ-ಮೇಲ್ ಮೂಲಕ ಬಂದಿದೆ.
ದುಷ್ಕರ್ಮಿಗಳು ಮಧ್ಯರಾತ್ರಿ 12.20ರ ಸುಮಾರಿಗೆ ಬಾಂಬ್ ಮೇಲ್ ಕಳಿಸಿದ್ದು, ಬೆಳಗ್ಗೆ 7.30ಕ್ಕೆ ಶಾಲೆ ಸಿಬ್ಬಂದಿ ಇ-ಮೇಲ್ ಪರಿಶೀಲಿಸಿದಾಗ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಪತ್ತೆಯಾಗಿದೆ. ಕೂಡಲೆ ಶಾಲಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಶಾಲೆಯಲ್ಲಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದಶಾಶ್ವಮೇಧ ಘಾಟ್‌ನಲ್ಲಿ ಮೋದಿಯಿಂದ ಗಂಗಾರತಿ
ಪರಿಶೀಲನೆ ಬಳಿಕ ಬಂದಿರುವು ಹುಸಿ ಬಾಂಬ್ ಇ-ಮೇಲ್ ಎಂದು ದೃಢವಾಗಿದೆ. ಇತ್ತಿಚೆಗೆ ದೇಶದೆಲ್ಲೆಡೆ ಬಾಂಬ್ ಬೆದರಿಗಳು ಹೆಚ್ಚಾಗಿವೆ. ವಿಮಾನ ನಿಲ್ದಾಣ, ಆಸ್ಪತ್ರೆಗಳಿಗೆ ಮತ್ತು ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಬರುತ್ತಿವೆ. ಇನ್ನು ಸಿಲಿಕಾನ್ ಸಿಟಿಯ ಖಾಸಗಿ ಶಾಲೆಗಲಿಗೆ ಬಾಂಬ್ ಬೆದರಿಕೆ ಬರುತ್ತಿರುವು ದು ಇದೇ ಮೊದಲಲ್ಲ. ಇದನ್ನೂ ಓದಿ: ಹೆಣ್ಣುಮಗು ಜನಿಸಿದ್ದಕೆ ಪತ್ನಿ ಬಿಟ್ಟು ಪತಿ ಪರಾರಿ: ಅನೇಕ ಹೆಣ್ಮಕ್ಕಳಿಗೆ ಮೋಸ
ಈ ಬಾಂಬ್ ಬೆದರಿಕೆ ಪ್ರಕರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲಿಂದ ಮೇಲೆ ಈ ರೀತಿಯಾದ ಬಾಂಬ್ ಬೆದರಿಕೆ ಇ-ಮೇಲ್ ಗಳೂ ಬರುತ್ತಿದ್ದರೂ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಇದನ್ನೂ ಓದಿ: 11 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಹಾಡುಗಾರ ಜಿ.ವಿ ಪ್ರಕಾಶ್

