ನವದೆಹಲಿ : ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಗಡಿ ಗಸ್ತು ಪುನರಾರಂಭಿಸಲು ಭಾರತ ಮತ್ತು ಚೀನಾ ಒಪ್ಪಿಕೊಂಡಿವೆ. ಎಲ್ಎಸಿ ವಿಷಯಗಳ ಬಗ್ಗೆ ಭಾರತ-ಚೀನಾ ಒಪ್ಪಂದಕ್ಕೆ ಬಂದಿದ್ದು, ಗಸ್ತು ಪುನರಾರಂಭಿಸಲು ಒಪ್ಪಿಕೊಂಡಿವೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಾಹಿತಿ ನೀಡಿದ್ದಾರೆ.
6ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾಕ್ಕೆ ಭೇಟಿ ನೀಡುತ್ತಿರುವ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆಯಾಗಿದೆ. ಗಡಿಯಲ್ಲಿ ಉಭಯ ದೇಶಗಳ ಗಸ್ತು ತಿರುಗುವ ವಿಚಾರವಾಗಿ ಕಳೆದ ಹಲವಾರು ವಾರಗಳಿಂದ ಚರ್ಚೆ ನಡೆಯುತ್ತಿತ್ತು. ಇದರ ಪರಿಣಾಮವಾಗಿ, ಭಾರತ-ಚೀನಾ ಗಡಿ ಪ್ರದೇಶದಲ್ಲಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಗಸ್ತು ವ್ಯವಸ್ಥೆಯ ಒಪ್ಪಂದಕ್ಕೆ ಬರಲಾಗಿದೆ.
16ನೇ ಬ್ರಿಕ್ಸ್ ಶೃಂಗಸಭೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾಕ್ಕೆ ಭೇಟಿ ನೀಡುತ್ತಿರುವ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆಯಾಗಿದೆ.ಡೆಪ್ಸಾಂಗ್ ಪ್ಲೇನ್ಸ್ ಮತ್ತು ಡೆಮ್ಚೋಕ್ LAC ಉದ್ದಕ್ಕೂ ಇರುವ ಗಸ್ತು ತಿರುಗುವಿಕೆ ಪುನರಾರಂಭಗೊಳ್ಳುತ್ತದೆ. ಇತ್ತೀಚಿನ ದಿನಗಳಲ್ಲಿ ಭಾರತ ಮತ್ತು ಚೀನಾ ನಡುವೆ ರಾಜತಾಂತ್ರಿಕ ಮತ್ತು ಮಿಲಿಟರಿ ಚರ್ಚೆಗಳು ನಡೆಯುತ್ತಿವೆ. ಈ ಮೂಲಕ 2020 ರಲ್ಲಿ ಈ ಪ್ರದೇಶಗಳಲ್ಲಿ ಉದ್ಭವಿಸಿದ ಸಮಸ್ಯೆಗಳಿಗೆ ಪರಿಹಾರ ಸಿಕ್ಕಂತಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಹೇಳಿದ್ದಾರೆ.