ಬೆಂಗಳೂರು : ಬಿಪಿಎಲ್‌ಗೆ ಅನರ್ಹ ಇರುವವರನ್ನೂ ಎಪಿಎಲ್‌ಗೆ ಸೇರಿಲಾಗಿದೆ. ಅರ್ಹ ಬಿಪಿಎಲ್ ಫಲಾನುಭವಿಗಳ ಕಾರ್ಡ್‌ಗಳನ್ನು ರದ್ದುಗೊಳಿಸಲ್ಲ. ಒಂದು ವಾರದಲ್ಲಿ ಎಲ್ಲಾ ಸಮಸ್ಯೆಗಳನ್ನ ಬಗೆಹರಿಸಲಾಗುವುದು ಹಾಗೂ ಪರಿಷ್ಕರಣೆ ಮಾಡಿ ಯಥಾಸ್ಥಿತಿಗೆ ತರಲಾಗುವುದು ಎಂದು ಆಹಾರ ನಾಗರೀಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಒಟ್ಟು 1.02.509 ಕಾರ್ಡ್‌ಗಳನು ಪರಿಶೀಲನೆ ಮಾಡಿದ್ದೇವೆ. ಕರ್ನಾಟಕದಲ್ಲಿ ಶೇ 66% ರಷ್ಟು ಬಿಪಿಎಲ್ ಕಾರ್ಡ್‌ಗಳಿವೆ. ಕೇಂದ್ರ ಸರ್ಕಾರ ಮಾನದಂಡಗಳ ಅನ್ವಯ ಕಾರ್ಡ್ ಪರಿಷ್ಕರಣೆ ಮಾಡಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಒಟ್ಟು 1.24.97,088 ಕಾರ್ಡ್‌ಗಳಿವೆ.
ಒಂದು ವೇಳೆ ಬಿಪಿಎಲ್ ಅರ್ಹರಿದ್ದರೂ ಎಪಿಎಲ್‌ಗೆ ಸೇರಿಸಿದ್ದರೂ ಅವುಗಳನ್ನು ಪರಿಶೀಲನೆ ಮಾಡಿ ಮತ್ತೆ ಮರುಹಂಚಿಕೆ ಮಾಡಲಾಗುವುದು. ಅನರ್ಹರಿರಬಹುದು ಎಂಬ ಕಾರ್ಡ್‌ಗಳನ್ನು ತಾತ್ಕಾಲಿಕವಾಗಿ ಅಮಾನತ್ತಿಡಲಾಗಿದೆ. ಅವುಗಳನ್ನು ಮರು ಪರಿಷ್ಕರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.
ಬಿಪಿಎಲ್ ಕಾರ್ಡ್ದಾರರನ್ನು ಎಪಿಎಲ್‌ಗೆ ಸೇರ್ಪಡೆ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಇದರಲ್ಲಿ ಅಧಿಕಾರಿಗಳ ತಪ್ಪಿಲ್ಲ, ಎಲ್ಲ ಗೊಂದಲದ ಹೊಣೆ ನಾನೇ ಹೊರುವೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆ ನೀಡುವೆ. ಯಾವುದೇ ಅರ್ಹ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಿಲ್ಲ ಎಂದು ಭರವಸೆ ನೀಡಿದರು.
ಮಾನದಂಡಗಳ ಅನ್ವಯ ಪರಿಶೀಲನೆ ಮಾಡಿ ಪರಿಷ್ಕರಣೆ ಮಾಡಲಾಗಿದೆ. ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಪರಿಷ್ಕರಿಸಲಾಗಿದೆ. ಅನರ್ಹ ಎಂಬ ಕಾರ್ಡ್‌ಗಳನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿ ಇಡಲಾಗಿದೆ. ಬಿಪಿಎಲ್‌ಗೆ ಅನರ್ಹರು ಎಂದು ಕಂಡು ಬಂದಿರುವ ಕಾರ್ಡ್‌ಗಳನ್ನು ಎಪಿಎಲ್ ಗೆ ಸೇರಿಸಲಾಗಿದೆ. ಬಿಪಿಎಲ್‌ಗೆ ಅರ್ಹರಿದ್ದೂ ಕೂಡ ಎಪಿಎಲ್‌ಗೆ ಸೇರಿಸಿದ್ದರೇ ಅಂಥವರಿಗೆ ಮರು ಹಂಚಿಕೆ ಮಾಡುತ್ತೇವೆ.

