By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬ್ರೇಕಿಂಗ್ : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ, ಕೋರ್ಟ್ ಮಹತ್ವದ ತೀರ್ಪು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬ್ರೇಕಿಂಗ್ : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ, ಕೋರ್ಟ್ ಮಹತ್ವದ ತೀರ್ಪು
ರಾಜ್ಯ-KarnatakaLatestTop Stories

ಬ್ರೇಕಿಂಗ್ : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ, ಕೋರ್ಟ್ ಮಹತ್ವದ ತೀರ್ಪು

Breaking: Court finds former MP Prajwal Revanna guilty in rape case

Published August 1, 2025
Share
3 Min Read
SHARE

ಬೆಂಗಳೂರು : ಕೆ.ಆರ್.ನಗರ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಕುರಿತಂತ ಎಚ್.ಡಿ.ರೇವಣ್ಣ ಅವರ ಪುತ್ರ ಹಾಗೂ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ಶಿಕ್ಷೆ ಪ್ರಮಾಣವನ್ನು ನಾಳೆ ಬೆಂಗಳೂರು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಪ್ರಕಟಿಸಲಿದ್ದು, ಆರೋಪಿ ಸ್ಥಾನದಲ್ಲಿರುವ ಪ್ರಜ್ವಲ್ ರೇವಣ್ಣಗೆ 10 ವರ್ಷ ಇಲ್ಲವೇ ಜೀವಾವಧಿ ಶಿಕ್ಷೆ ನೀಡುವ ಸಾಧ್ಯತೆಯಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಅಥವಾ ಸುಪ್ರೀಂಕೋರ್ಟನಲ್ಲಿ ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತ್ವರಿತವಾಗಿ ವಿಚಾರಣೆ ನಡೆಸಿ ತೀರ್ಪು ನೀಡಿದ ಅಪರೂಪದ ಪ್ರಕರಣ ಇದಾಗಿದೆ.

ಕಣ್ಣೀರಿಟ್ಟ ಪ್ರಜ್ವಲ್ ರೇವಣ್ಣ :
ಆದೇಶ ಹೊರಬೀಳುತ್ತಿದ್ದಂತೆ ಕಟಕಟೆಯಲ್ಲಿ ಕೈಕಟ್ಟಿ ನಿಂತಿದ್ದ ಪ್ರಜ್ವಲ್ ರೇವಣ್ಣ ಕಣ್ಣೀರು ಸುರಿಸಿದರು. ತಕ್ಷಣವೇ ಅವರನ್ನು ಪೊಲೀಸ್ ಬಿಗಿ ಭದ್ರತೆ ನಡುವೆ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಯಿತು.

ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅಭಿಪ್ರಾಯ :
ಅತ್ಯಾಚಾರಿ ಎಂದು ಸಾರಿ ಹೇಳಿದ ನ್ಯಾಯಾಲಯ ಇಂತಹ ಹೀನ ಕೃತ್ಯ ನಡೆಸಿರುವ ಆರೋಪಿಗೆ ಜಾಮೀನು ಮಂಜೂರು ಮಾಡಿದರೆ ನಾಗರಿಕ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ಅಭಿಪ್ರಾಯಪಟ್ಟಿತು.ತೀರ್ಪು ಪ್ರಕಟಿಸುವ ಮುನ್ನ ನ್ಯಾಯಾಧೀಶರು ಎರಡೂ ಕಡೆಯ ವಾದ, ವಿವಾದವನ್ನು ಪುನಃ ಆಲಿಸಿದರು.

ಪ್ರಕರಣದ ಹಿನ್ನಲೆ :
ಪ್ರಜ್ವಲ್ ರೇವಣ್ಣ ಅವರ ತೋಟದ ಮನೆಯಲ್ಲಿ 47 ವರ್ಷದ ಮನೆಕೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವಿತ್ತು. ಈ ಸಂಬಂಧ ಸಂತ್ರಸ್ತೆ ಏಪ್ರಿಲ್ 28, 2024 ರಂದು ಹಾಸನದ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನ್ಯಾಯಾಲಯವು 26 ಸಾಕ್ಷಿಗಳ ವಿಚಾರಣೆ ನಡೆಸಿತ್ತು. ಪ್ರಜ್ವಲ್ ರೇವಣ್ಣ ವಿರುದ್ಧ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಾಗಿತ್ತು.ಬಿಎನ್ಎಸ್| ಸೆಕ್ಷನ್ 376 (2) ಅಡಿ ಮಹಿಳೆಯ ಮೇಲೆ ಹಕ್ಕು ಚಲಾಯಿಸುವ ಸ್ಥಿತಿಯಲ್ಲಿದ್ದು ಅತ್ಯಾಚಾರ ಎಸಗಲಾಗಿದೆ. 376 (2) ಆಡಿ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ. 354 ಲೈಂಗಿಕತೆ ಬೇಡಿಕೆ ಇಡುವುದು. 354 ಮಹಿಳೆಯನ್ನು ವಿವಸ್ತ್ರಗೊಳಿಸುವುದು. 354 ಮಹಿಳೆಯ ಅಶ್ಲೀಲ ದೃಶ್ಯ ಚಿತ್ರೀಕರಿಸುವುದು. 506 ಜೀವ ಬೆದರಿಕೆ, 201 ಸಾಕ್ಷ್ಯನಾಶದ ಆಡಿ ದೋಷಾರೋಪ ಹೊರಿಸಲಾಗಿತ್ತು.

ಕೆ.ಆರ್ ನಗರ ಸಂತ್ರಸ್ತೆ ಪ್ರಕರಣದಲ್ಲಿ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿತ್ತು. ಮಾಜಿ ಸಚಿವ ರೇವಣ್ಣ ಕುಟುಂಬಕ್ಕೆ ಸೇರಿದ ಫಾರ್ಮ್‌ ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಕೆಲಸದಾಕೆಯ ಮೇಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪದೇ ಪದೇ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿತ್ತು.2021ರ ಸುಮಾರಿಗೆ ಕೋವಿಡ್-ಲಾಕ್ ಡೌನ್ ಮಧ್ಯೆ ಇಂತಹ ಮೊದಲ ಘಟನೆ ನಡೆದಿತ್ತು ಎಂದು ವರದಿ ವೈರಲ್ ಆಗಿತ್ತು. 2024ರ ಏಪ್ರಿಲ್ ತಿಂಗಳಲ್ಲಿ ಲೋಕಸಭಾ ಚುನಾವಣೆ ಆರಂಭವಾಗುತ್ತಿದ್ದಂತೆ ಹಾಸನ ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋಗಳ ಪೆನ್‌ ಡ್ರೈವ್‌ಗಳು ವೈರಲ್ ಆಗಿದ್ದವು.ಹಲವಾರು ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವನ್ನು ಚಿತ್ರಿಸುವ 2,900 ಕ್ಕೂ ಹೆಚ್ಚು ವಿಡಿಯೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಪ್ರಜ್ವಲ್ ರೇವಣ್ಣ ಬಗ್ಗೆ ಮನೆಗೆಲಸದಾಕೆ ದೂರು ನೀಡಿರಲಿಲ್ಲ. ಕೆಲಸ ತೊರೆದ ಬಳಿಕ ಲೈಂಗಿಕ ದೌರ್ಜನ್ಯದ ದೃಶ್ಯಗಳು ಲೀಕ್ ಆದ ಮೇಲೆ ಕಳೆದ ವರ್ಷ ದೂರು ದಾಖಲಿಸಿದ್ದರು.ಅಂತಿಮವಾಗಿ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು.

ಹೊಳೆನರಸೀಪುರದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದ ತನಿಖೆ ಆರಂಭವಾಗಿತ್ತು. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ, ಕೆ.ಆರ್.ನಗರದ ಮನೆ ಕೆಲಸದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದರು.ಮೈಸೂರಿನ ಕೆಆ‌ರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಜ್ವಲ್ ರೇವಣ್ಣ ಮೇಲಿದೆ. ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು.

ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದು, ಈಗಾಗಲೇ ರೇವಣ್ಣ ಹಾಗೂ ಭವಾನಿ ರೇವಣ್ಣಗೆ ಜಾಮೀನು ಸಿಕ್ಕಿದೆ. ಅತ್ಯಾಚಾರ ಆರೋಪ ಸಂಬಂಧ ಪ್ರಜ್ವಲ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಒಂದು ಮತ್ತು ಸಿಐಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ ಐಆರ್‌ಗಳು ದಾಖಲಾಗಿದ್ದವು.

You Might Also Like

ಕುಡಿಯೋಕೆ ನೀರು ಕೊಡ್ತಿಲ್ಲ.. ವಿಷನಾದ್ರೂ ಕೊಡಿ ಎಂದು ಆಕ್ರೋಶ

ಮಾಜಿ ಸಿಎಂ ಡಿ.ವಿ.ಸದಾನಂದಗೌಡರ ಬ್ಯಾಂಕ್‌ ಖಾತೆಗಳು ಹ್ಯಾಕ್‌

ರೇಪ್ ಕೇಸ್ : ದೆಹಲಿ ಏರ್​ಪೋರ್ಟ್​​ನಲ್ಲಿ ಉದ್ಯಮಿ ಲಲಿತ್ ಮೋದಿ ಸಹೋದರ ಸಮೀರ್ ಬಂಧನ

ಕುಡಿದ ಅಮಲಿನಲ್ಲಿ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರ ಬಂಧನ

ಅಮಿತ್ ಶಾ ವಿರುದ್ಧದ ಫೇಕ್ ವಿಡಿಯೋ ಪ್ರಕರಣ, ತೆಲಂಗಾಣ ಕಾಂಗ್ರೆಸ್ ಘಟಕದ ಐಟಿ ಸೆಲ್‌ನ ಮೂವರ ಬಂಧನ

TAGGED:prajwal revanna
Share This Article
Facebook Copy Link Print
Previous Article Dhruva Sarja ನಟಿ ರಮ್ಯಾ ಮತ್ತು ಪ್ರಥಮ್ ಪರ ನಿಂತ ಧ್ರುವ ಸರ್ಜಾ
Next Article ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಹತ್ಯೆ ಪ್ರಕರಣ ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ರಾಜ್ಯ-Karnataka Latest
February 4, 2026
ಲಿಬಿಯಾದಲ್ಲಿ ಗಡಾಫಿ ಪುತ್ರ ಸೈಫ್ ಅಲ್–ಇಸ್ಲಾಂಗೆ ಗುಂಡಿಕ್ಕಿ ಹತ್ಯೆ, ಮತ್ತೆ ಭುಗಿಲೆದ್ದ ರಾಜಕೀಯ ಉದ್ವಿಗ್ನತೆ
ವಿದೇಶ-International
February 4, 2026
ಮತ್ತಷ್ಟು ದುಬಾರಿಯಾದ ಚಿನ್ನ-ಬೆಳ್ಳಿ, ಇಂದು ಮತ್ತೆ ಬೆಲೆ ಏರಿಕೆ
ರಾಷ್ಟ್ರೀಯ-National
February 4, 2026
ಆನ್‌ಲೈನ್‌ ಗೇಮಿಂಗ್‌ಗೆ ಬಲಿಯಾದ ಮೂವರು ಅಪ್ರಾಪ್ತ ಸಹೋದರಿಯರು
ರಾಷ್ಟ್ರೀಯ-National Latest
February 4, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up