ಬೆಂಗಳೂರು : ರಾಮನಗರ ಜಿಲ್ಲೆ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಮತ್ತು ಬಳ್ಳಾರಿಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ದಿನಾಂಕವನ್ನು ಮಂಗಳವಾರ ಪ್ರಕಟಿಸಿದರು.
ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಗ ನಿಗದಿಗೊಳಿಸಿದ್ದು ನವಂಬರ್ 13 ರಂದು ಮತದಾನ ನಡೆದು, ನ. 23 ರಂದು ಫಲಿತಾಂಶ ಪ್ರಕಟವಾಗಲಿದೆ.
ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕಡೆಯ ದಿನವಾಗಿದೆ. ಅಕ್ಟೋಬರ್ 20ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿ 22 ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ನೀತಿ ಸಂಹಿತೆ ಮಂಗಳವಾರದಿಂದಲೇ ಜಾರಿಯಾಗಿದ್ದು, ಆಡಳಿತಾರೂಢ ಕಾಂಗ್ರೆಸ್ ಮತ್ತು ಎನ್‍ಡಿಎ ನಡುವೆ ಭಾರೀ ಜಿದ್ದಾಜಿದ್ದಿ ಏರ್ಪಡುವ ಸಂಭವವಿದೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಸಂಸದರಾದ ಬಸವರಾಜ ಬೊಮ್ಮಾಯಿ ಮತ್ತು ಇ.ವಿ.ತುಕಾರಾಂ ಅವರುಗಳು ಲೋಕಸಭೆಗೆ ಆಯ್ಕೆಯಾದ ಹಿನ್ನಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ತೆರವಾದ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
*ನಾಮಪತ್ರ ಸಲ್ಲಿಕೆ ಪ್ರಾರಂಭ- 15 -10-2024
*ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ 25-10-2024
*ನಾಮಪತ್ರ ಪರಿಶೀಲನೆ – 28-10-2024
*ನಾಮಪತ್ರ ಹಿಂಪಡೆಯಲು ಕೊನೆ ದಿನ 30-10-2024
*ಮತದಾನದ ದಿನಾಂಕ – 13 -11-2024
*ಮತ ಎಣಿಕೆ 23-11-2024

