By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿದ್ದರಾಮಯ್ಯನರ ಭಂಡತನವೆ ಅವರಿಗೆ ಕಂಟಕವಾಗಲಿದೆ : ವಿಜಯೇಂದ್ರ ವಾಗ್ದಾಳಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಸಿದ್ದರಾಮಯ್ಯನರ ಭಂಡತನವೆ ಅವರಿಗೆ ಕಂಟಕವಾಗಲಿದೆ : ವಿಜಯೇಂದ್ರ ವಾಗ್ದಾಳಿ

BlogLatestರಾಜಕೀಯ | Politics

ಸಿದ್ದರಾಮಯ್ಯನರ ಭಂಡತನವೆ ಅವರಿಗೆ ಕಂಟಕವಾಗಲಿದೆ : ವಿಜಯೇಂದ್ರ ವಾಗ್ದಾಳಿ

BY Vijayendra on CM Siddaramaiah

Published October 2, 2024
Share
2 Min Read
Vijayendra
SHARE

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡವಳಿಕೆ, ಭಂಡತನ, ತಪ್ಪು ನಿರ್ಧಾರಗಳು ಬರುವ ದಿನಗಳಲ್ಲಿ ಅವರಿಗೆ ಕಂಟಕ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮೈಸೂರಿನ ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರು ಒಂದಾದ ಮೇಲೊಂದು ತಪ್ಪು ಮಾಡುತ್ತಿದ್ದಾರೆ. ಮುಡಾ ವಿಚಾರವನ್ನು ಬಿಜೆಪಿ ಕೈಗೆತ್ತಿಕೊಂಡಾಗಲೇ ಅವರು ಎಚ್ಚತ್ತುಕೊಳ್ಳಬೇಕಿತ್ತು. ಮೊನ್ನೆ ತೆಗೆದುಕೊಂಡ ನಿರ್ಧಾರವನ್ನು ಬಿಜೆಪಿ ಹೋರಾಟ ತೆಗೆದುಕೊಳ್ಳುವ ಮುನ್ನವೇ ‘ತಪ್ಪಾಗಿದೆ; ನಿವೇಶನ ವಾಪಸ್ ಕೊಡುವೆ’ ಎಂಬ ನಿರ್ಣಯ ಮಾಡಿದ್ದರೆ ನಾವು ಇಷ್ಟೆಲ್ಲ ಹೋರಾಟ ಮಾಡಲು ಆಗುತ್ತಿರಲಿಲ್ಲ ಎಂದರು.

ರಾಜ್ಯಪಾಲರಿಂದ ಸ್ಯಾಂಕ್ಷನ್, ಹೈಕೋರ್ಟಿನಲ್ಲಿ ಛೀಮಾರಿ, ವಿಶೇಷ ಕೋರ್ಟಿನಲ್ಲಿ ತನಿಖೆಗೆ ಆದೇಶ- ಇವೆಲ್ಲವೂ ಕೂಡ ತಪ್ಪಿಸಬಹುದಿತ್ತು. ಬಹುಶಃ ಸಿದ್ದರಾಮಯ್ಯರಿಗೆ ಡಿ.ಕೆ.ಶಿವಕುಮಾರರೇ ಸಲಹೆ ಕೊಡುತ್ತಿರಬೇಕು. ಯಾಕೆಂದರೆ ಅವರು ಒಂದಾದ ಮೇಲೊಂದು ತಪ್ಪು ಮಾಡುತ್ತಿದ್ದಾರೆ ಎಂದು ತಿಳಿಸಿದರು. ಒಂದೆಡೆ ಲೋಕಾಯುಕ್ತವು ಎಫ್‍ಐಆರ್ ದಾಖಲಿಸಿದೆ. ಸಿಬಿಐ ತನಿಖೆಗೆ ಕೋರಿ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಿದರು.

ನಿವೇಶನಗಳನ್ನು ವಾಪಸ್ ಕೊಡುವುದಾಗಿ ಮುಖ್ಯಮಂತ್ರಿಗಳ ಶ್ರೀಮತಿಯವರು ಪತ್ರ ಬರೆದ 24 ಗಂಟೆ ಆಗುವ ಮೊದಲೇ ಮುಡಾದವರು ಖಾತೆ ರದ್ದು ಮಾಡಿದ್ದು, ಇದು ಕೂಡ ಸಿಬಿಐ ಪೂರಕ ಘಟನೆ. ಸಿದ್ದರಾಮಯ್ಯನವರು ಶಕ್ತಿಯುತ ರಾಜಕಾರಣಿ, ಮುಖ್ಯಮಂತ್ರಿಯಾದ ಕಾರಣ ಲೋಕಾಯುಕ್ತದಿಂದ ತನಿಖೆ ಸಾಧ್ಯವಿಲ್ಲ. ಸಿಬಿಐ ತನಿಖೆಯೇ ನಡೆಯಲಿ ಎಂದು ಸ್ನೇಹಮಯಿ ಕೃಷ್ಣ ಅವರು ಹೇಳಿದ್ದಾರೆ. ಬಿಜೆಪಿ ಸಹ ಸಿಬಿಐ ತನಿಖೆಗೆ ಒತ್ತಾಯಿಸುವ ಉದ್ದೇಶವೂ ಇದೇ ಆಗಿದೆ ಎಂದು ವಿಶ್ಲೇಷಣೆ ಮಾಡಿದರು.

ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ಕೂಡಲೇ ರಾಜೀನಾಮೆ ಕೊಡಬೇಕು. ಅದಕ್ಕೂ ಮೊದಲು ಸಿಬಿಐ ತನಿಖೆಗೆ ಕೊಡಬೇಕೆಂದು ನಾವು ಆಗ್ರಹಿಸುತ್ತ ಬಂದಿದ್ದೇವೆ ಎಂದ ಅವರು, ಮುಡಾ ಕಮಿಷನರ್ ನಿರ್ಧಾರ ಅಚ್ಚರಿ ತರುವಂತಿದೆ. ಮುಖ್ಯಮಂತ್ರಿಗಳ ಧರ್ಮಪತ್ನಿ ಪತ್ರ ಬರೆದಿದ್ದಾರೆ ಎಂಬ ಒಂದೇ ಕಾರಣಕ್ಕೆ ಯಾವ ಆಧಾರದಲ್ಲಿ ಮುಡಾ ಕಮಿಷನರ್ ಖಾತೆ ರದ್ದು ಮಾಡಿದ್ದಾರೆ ಎಂದು ಕೇಳಿದರು.

ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಸಚಿವರಿಂದ ನಗದು ಬಹುಮಾನ ವಿತರಣೆ

ಹೈಕೋರ್ಟ್ ತೀರ್ಪು, ಎಂಪಿ, ಎಂಎಲ್‍ಎ ಕೋರ್ಟಿನ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತೂ ಇಲ್ಲವೇ ಎಂದ ಅವರು, ಖಾತೆ ರದ್ದು ಮಾಡುವ ಮುಡಾ ಅಧಿಕಾರಿಗಳ ಆದೇಶವೂ ಕಾನೂನುಬಾಹಿರವೇ ಆಗಿದೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ಅಧಿಕಾರಿಗಳೂ ಈ ಹಗರಣದಲ್ಲಿ ಶಾಮೀಲಾಗಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ ಎಂದು ಹೇಳಿದರು.

ನಿವೇಶನಗಳನ್ನು ವಾಪಸ್ ಮಾಡಿದ್ದು, ಮುಡಾ ಕಮಿಷನರ್ ಅವರು ‘ಪ್ರಾಮಾಣಿಕವಾಗಿ’ ಖಾತೆ ರದ್ದು ಮಾಡಿದ್ದರಿಂದ ಮುಖ್ಯಮಂತ್ರಿಗಳು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ತಪ್ಪುಗಳು ನಿರಂತರವಾಗಿ ನಡೆದಿವೆ. ಅವುಗಳನ್ನು ಸರಿಪಡಿಸಲು ಸಾಧ್ಯವಿಲ್ಲ. ಮುಂದೆ ಅವರು ತನಿಖೆ ಎದುರಿಸಲೇಬೇಕಿದೆ ಎಂದು ಅಭಿಪ್ರಾಯಪಟ್ಟರು.

You Might Also Like

ಭಾರಿ ಮಳೆಗೆ ಆಂಧ್ರ ಮತ್ತು ತೆಲಂಗಾಣದಲ್ಲಿ 29 ಮಂದಿ ಸಾವು

ಬೆಂಗಳೂರಲ್ಲಿ 6 ವರ್ಷದ ಬಾಲಕಿಯ ರೇಪ್ ಅಂಡ್ ಮರ್ಡರ್, ಆರೋಪಿ ಅಂದರ್

ನಟ ಉಪೇಂದ್ರ ದಂಪತಿಯ ಫೋನ್ ಹ್ಯಾಕ್

ಥೈಲ್ಯಾಂಡ್‌ನಲ್ಲಿ ಕಾಮಗಾರಿ ವೇಳೆ ರೈಲಿನ ಮೇಲೆ ಕ್ರೇನ್ ಕುಸಿದು ಬಿದ್ದು 22 ಮಂದಿ ಸಾವು

ದೆಹಲಿಗೆ ಮುತ್ತಿಗೆ ಹಾಕಲು ಮುಂದಾದ ರೈತರ ಗುಂಪು, ಗಡಿ ಭಾಗದಲ್ಲಿ ಭಾರಿ ಭದ್ರತಾ ಸಿಬ್ಬಂದಿ ನಿಯೋಜನೆ

Share This Article
Facebook Copy Link Print
Previous Article Parameshwar ಬಾಪೂಜಿ ಪ್ರಬಂಧ ಸ್ಪರ್ಧೆ : ವಿಜೇತರಿಗೆ ಸಚಿವರಿಂದ ನಗದು ಬಹುಮಾನ ವಿತರಣೆ
Next Article Siddaramaiah ಬಾವುಟ ಹಿಡಿದು ಸಿಎಂ ಸಿದ್ದರಾಮಯ್ಯನವರ ಶೂ ಬಿಚ್ಚಿದ ಕಾರ್ಯಕರ್ತ, ವ್ಯಾಪಕ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up