By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಪುಟ ಅನುಮೋದನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಪುಟ ಅನುಮೋದನೆ

BlogLatestMain PostTop Storiesರಾಜ್ಯ-Karnataka

ರಾಮನಗರ ಜಿಲ್ಲೆ ಮರುನಾಮಕರಣಕ್ಕೆ ಸಂಪುಟ ಅನುಮೋದನೆ

Published July 26, 2024
Share
4 Min Read
Cabinet Meeting
SHARE

ಬೆಂಗಳೂರು, ಜು.2- ಪ್ರಸ್ತುತ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದು ಕಾನೂನು, ನ್ಯಾಯ ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ ಪ್ರಕಟಿಸಿದರು.

ರಾಜ್ಯ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರ್ಯಾಂಡ್ ಬೆಂಗಳೂರು ಮೂಲಕ ಸೇರ್ಪಡೆ (Inclusive Growth) ಅಭಿವೃದ್ಧಿಯ ಕಲ್ಪನೆಗಳನ್ನು ಸಾಕಾರಗೊಳಿಸುವ ಸದುದ್ದೇಶದಿಂದ ಈ ಹೊಸ ನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿಸಿದರು.

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಒಂದು ಬಾರಿಗೆ ವಯೋಮಿತಿಯ ನಿರ್ಬಂಧವನ್ನು ಸಡಿಲಿಸಿ ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡುವ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಪ್ರಸ್ತಾಪಿಸಿತ್ತು. ಪ್ರಸ್ತಾಪಕ್ಕೆ ದಿನಾಂಕ: 21.06.2024ರ ಸರ್ಕಾರಿ ಆದೇಶಕ್ಕೆ ಸಚಿವ ಸಂಪುಟ ಘಟನೋತ್ತರ ಅನುಮೋದನೆ ನೀಡಿದೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳು ಇದು ಅನ್ವಯವಾಗುತ್ತದೆ ಎಂದು ತಿಳಿಸಿದರು.

ಬೆಲೆ ಏರಿಕೆ ಮದ್ಯೆ ಸದ್ಯದಲ್ಲೇ ವಾಹನ ಮಾಲೀಕರಿಗೆ ಕಾದಿದೆ ‘ಹೊಗೆ’ ಶಾಕ್

ಲೋಕ ಶಿಕ್ಷಣ ಟ್ರಸ್ಟ್ ಧಾರವಾಡದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಲು 2.64 ಎಕರೆ ಜಮೀನನ್ನು ಹಂಚಿಕೆ ಮಾಡಲು ಕೈಗಾರಿಕಾ ಇಲಾಖೆ ಪ್ರಸ್ತಾಪಿಸಿತ್ತು. ಪ್ರಸ್ತಾಪಕ್ಕೆ ಸಚಿವ ಸಂಪುಟ ಅನುಮೋದಿಸಿದೆ. ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಸಿ.ಎ ನಿವೇಶನ ಸಂಖ್ಯೆ: 1 ರಲ್ಲಿ 2.64 ಎಕರೆ ಜಮೀನನ್ನು ಪ್ರಸ್ತುತವಿರುವ ಹಂಚಿಕೆ ದರದ ಮೇಲೆ ಶೇ.75 ರಷ್ಟು ರಿಯಾಯಿತಿ ದರದಲ್ಲಿ ಹಂಚಿಕೆ ಮಾಡಲು ಹಾಗೂ ವಿಸ್ತರಿಸುವ ರಿಯಾಯಿತಿ ಮೊತ್ತವನ್ನು ಸರ್ಕಾರದಿಂದ ಕೆಐಎಡಿಬಿಗೆ ಮರುಪಾವತಿ ಮಾಡಲು ಸಚಿವ ಸಂಪುಟ ಅನುಮೋದಿಸಿದೆ ಎಂದು ಸಚಿವರು ವಿವರಿಸಿದರು.

ಬೆಂಗಳೂರು ಆಧಾರಿತ ಅನಿಮೇಶನ್ ಇಂಡಸ್ಟ್ರಿ (Association of Bangalore Animation Industry) ಸಂಘಟನೆಯು ಅನಿಮೇಶನ್, VFX (Visual Effects) ಮತ್ತು ಗೇಮಿಂಗ್ (AVGC) ಉದ್ಯಮವನ್ನು ಅಭಿವೃದ್ಧಿಪಡಿಸಲು ಬದ್ಧವಾಗಿದೆ. ಇದು ಉದ್ಯಮ, ಶೈಕ್ಷಣಿಕ ಸಂಸ್ಥೆಗಳು, ಸರ್ಕಾರ ಮತ್ತು AVGC (Animation, Visual Effects, Gaming and Comics) ಸಮುದಾಯದ ಪರಿಸರ ವ್ಯವಸ್ಥೆಯ ಅಭಿವೃದ್ಧಿಗೆ ಉತ್ತೇಜಕವಾಗಿ ಕಾರ್ಯನಿರ್ವಹಿಸುವ ಉದ್ದೇಶ ಹೊಂದಿದೆ. ಒಟ್ಟು 16.00 ಕೋಟಿ ರೂ.ಗಳ ವೆಚ್ಚದಲ್ಲಿ ಈ ಉತ್ಕೃಷ್ಟತಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.

2024-25ನೇ ಸಾಲಿನಲ್ಲಿ ಈಗ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡುವುದಾಗಿ ಮುಂಗಡ ಪತ್ರದ ಭಾಷಣದಲ್ಲಿ ಮುಖ್ಯಮಂತ್ರಿಯವರು ಘೋಷಿಸಿದ್ದರು. ಈ ಪೈಕಿ ತಲಾ 100 ವಿದ್ಯಾರ್ಥಿಗಳಿಗೆ ಒಂದು ಹಾಸ್ಟೆಲ್ನಂತೆ 15 ಹಾಸ್ಟೆಲ್ಗಳ ನಿರ್ಮಾಣವನ್ನು ಕೈಗೊಳ್ಳಲಾಗುವುದು. ಪ್ರತಿ ಹಾಸ್ಟೆಲ್ ವೆಚ್ಚ 7 ಕೋಟಿಗಳು. ಒಟ್ಟು ಯೋಜನಾ ವೆಚ್ಚ ರೂ.105.00 ಕೋಟಿ ರೂ.ಗಳ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಅನುಮೋದಿಸಿದೆ.

ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ಹುದ್ದೆಗೆ ಬಡ್ತಿ ಹೊಂದಲು ಪ್ರೌಢ ಶಾಲಾ ಶಿಕ್ಷಕರಿಗೆ ಸ್ನಾತಕೋತ್ತರ ಪದವಿಯಲ್ಲಿ ಶೇ.55 ರಷ್ಟು ಅಂಕಗಳನ್ನು ನಿಗದಿಪಡಿಸಿರುವುದನ್ನು ಪರಿಷ್ಕರಿಸಿ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ನಿಗದಿಪಡಿಸಲು ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಕೇಂದ್ರಿಕೃತ ದಾಖಲಾತಿ ಘಟಕ ಅಥವಾ ಕರ್ನಾಟಕ ಲೋಕಸೇವಾ ಆಯೋಗಗಳನ್ನು ಉಪನ್ಯಾಸಕರ ವೃಂದದ ಆಯ್ಕೆ ಪ್ರಾಧಿಕಾರವೆಂದು ನಿಗದಿಪಡಿಸಲು ಮತ್ತು ಉಪನ್ಯಾಸಕ ವೃಂದದ ನೇರ ನೇಮಕಾತಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಮಾತ್ರ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ನಿಗದಿಪಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಸ್ತಾವನೆಯನ್ನು ಸಚಿವ ಸಂಪುಟವು ಒಪ್ಪಿದೆ ಎಂದು ಸಚಿವರು ತಿಳಿಸಿದರು.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ, 2013ರನ್ವಯ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ನರ್ಣಯಿಸಿದೆ.

ಕೌಶಲ್ಯ ಮಿಷನ್ನ ಎಲ್ಲಾ ಅಲ್ಪಾವಧಿ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಒಂದೆಡೆ ತರುವ ಉದ್ದೇಶದಿಂದ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಸ್ಥಾಪಿಸಲು ಮತ್ತು ರಾಜ್ಯ ಸರ್ಕಾರದಿಂದ ಅನುಮೋದಿಸಲಾದ “ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ” ಮತ್ತು ಕೇಂದ್ರ ಸರ್ಕಾರದಿಂದ ಅನುಮೋದಿಸಲಾದ “ಪ್ರಧಾನಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ” ಮತ್ತು “ಸಂಕಲ್ಪ ಯೋಜನೆ”ಗಳನ್ನು ಕೌಶಲ್ಯಾಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಈ ವಿಶೇಷ ಅಭಿವೃದ್ಧಿ ವಾಹಕವು 5 ಕೋಟಿ ರೂ.ಅಧಿಕೃತ ಷೇರು ಬಂಡವಾಳ 1 ಕೋಟಿ ರೂ. Paid up capital. 100 ರೂ. ಮುಖಬೆಲೆಯ 5 ಲಕ್ಷ ರೂ. ಇಕ್ವೀಟಿ ಷೇರುಗಳನ್ನು ಹೊಂದಲು ಅವಕಾಶ ಕಲ್ಪಿಸಲಾಗಿದೆ.

ಈ ಸರ್ಕಾರಿ ಸಂಸ್ಥೆಗೆ 6 ಜನ ನಿರ್ದೇಶಕರನ್ನು ನೇಮಕ ಮಾಡಲು ಅವರಲ್ಲಿ 3 ಜನ ಪುರುಷ ಸರ್ಕಾರೇತರ 2 ಮಹಿಳಾ ಸರ್ಕಾರೇತರ ಹಾಗೂ ನಿರ್ದೇಶಕರು, ಐಟಿಬಿಟಿ ನಿರ್ದೇಶಕರಾಗಿರುತ್ತಾರೆಂದು ಸಚಿವರು ತಿಳಿಸಿದರು.

ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದ ಕೆಳಭಾಗದಲ್ಲಿನ 198 ಎಕರೆ ಜಾಗದಲ್ಲಿ ಉದ್ಯಾನವನ ಸೌಂದರ್ಯೀಕರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೈಗೊಳ್ಳಲು ಈಗಾಗಲೇ ನೀಡಿರುವ ಅನುಮೋದನೆಯಂತೆ ಟೆಂಡರ್ ಕರೆಯುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದಿಸಿದೆ.

ಕೃಷ್ಣರಾಜಸಾಗರ ಆಣೆಕಟ್ಟೆಯ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಗೆ ಉನ್ನತೀಕರಣಗೊಳಿಸುವ ಕಾಮಗಾರಿಗಳ ವಿಸ್ತೃತ ಯೋಜನಾ ವರದಿಯನ್ನು ಆರ್ಥಿಕ ಇಲಾಖೆ, ಯೋಜನಾ ಇಲಾಖೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯು ನೀಡಿರುವ ಅಭಿಪ್ರಾಯದನ್ವಯ ಪರಿಷ್ಕರಿಸಿ ಟೆಂಡರ್ ಮುಖಾಂತರ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಚೌಕಟ್ಟಿನಲ್ಲಿ ಅನುಷ್ಠಾನಗೊಳಿಸಲು; ಸಚಿವ ಸಂಪುಟ ನಿರ್ಣಯಿಸಿದೆ. ಒಟ್ಟು ಯೋಜನಾ ವೆಚ್ಚ 2663.74 ಕೋಟಿ ರೂ. 34.5 ವರ್ಷಗಳ ಒಟ್ಟು ರಿಯಾಯಿತಿ ಅವಧಿಯು 4.5 ವರ್ಷಗಳ ರಿಯಾಯಿತಿ ಅವಧಿಯು ಸೇರಿದೆ. ಮಾಸ್ಟರ್ ಪ್ಲಾನ್ನಲ್ಲಿ ಒಟ್ಟು 45 ಘಟಕಗಳನ್ನು ಪರಿಗಣಿಸಲಾಗಿದೆ ಎಂದು ಸಚಿವರು ವಿವರ ನೀಡಿದರು.

You Might Also Like

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಎದುರಿಸುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ನಾಲ್ಕನೇ ಬಾರಿಗೂ ಮೋದಿಯವರೇ ಪ್ರಧಾನಿಯಾಗುತ್ತಾರೆ : ಫಡ್ನವೀಸ್​

ಅಮರನಾಥ ಯಾತ್ರೆ ಮಾರ್ಗಗಳನ್ನು ʻನೋ ಫ್ಲೈ ಝೋನ್’ ಎಂದು ಘೋಷಣೆ

ಕೋಲಾರ : ದ್ವಿಚಕ್ರ ವಾನಗಳಿಗೆ ಬೊಲೆರೊ ಡಿಕ್ಕಿಯಾಗಿ ನಾಲ್ವರ ಸಾವು

Digitisation : ಸರಕಾರಿ ಆಸ್ಪತ್ರೆಯಲ್ಲಿ ಶವಪರೀಕ್ಷೆ ವರದಿ ಸೇರಿ ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣ

TAGGED:Cabinet MeetingCongress GovtRamanagara District
Share This Article
Facebook Copy Link Print
Previous Article Emission Test ಬೆಲೆ ಏರಿಕೆ ಮದ್ಯೆ ಸದ್ಯದಲ್ಲೇ ವಾಹನ ಮಾಲೀಕರಿಗೆ ಕಾದಿದೆ ‘ಹೊಗೆ’ ಶಾಕ್
Next Article Charaideo Maidam ಅಸ್ಸಾಂನ ಮೊಯಿದಮ್‌ಗಳು ಯುನೆಸ್ಕೋ ವಿಶ್ವ ಪಾರಂಪರಿಕ ಪಟ್ಟಿಗೆ ಸೇರ್ಪಡೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up