ಪಾಟ್ನಾ: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ (Bihar) ಬೇಗುಸರಾಯ್‍ನಲ್ಲಿ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡ ಉಳಿದ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: KRS ಡ್ಯಾಂನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ
ಸಿಮಾರಿಯಾದಿಂದ ಝೆರೊಮೈಲ್ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ರತನ್ ಚೌಕ್ ಬಳಿ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಅಪಘಾತದ ಸ್ಥಳದ ವೀಡಿಯೋಗಳನ್ನು ಜನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾದ ಸಂತ್ರಸ್ತರ ರಕ್ತಸಿಕ್ತ ದೇಹಗಳು ವೀಡಿಯೋದಲ್ಲಿ ದಾಖಲಾಗಿವೆ.
ಸಂತ್ರಸ್ತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸಂತ್ರಸ್ತರ ಗುರುತು ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ. ಇದನ್ನೂ ಓದಿ: ಭಾರತದ ಜನರಿಗೆ ಸೇವೆ ಸಲ್ಲಿಸುವುದು ನನ್ನ ಏಕೈಕ ಗುರಿ: ಮೋದಿ

