ಹಾವೇರಿ: ದೇವರ ದರ್ಶನಕ್ಕೆಂದು ತಿರುಪತಿಗೆ (Tirupati Temple) ಹೋಗುತ್ತಿದ್ದ ಕಾರು ಏಕಾಏಕಿ ನಸುಕಿನಜಾವ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು , 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆ ರಾಣೆಬೆನ್ನೂರು (Ranebennur )ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ.
ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ನಗರದ ಸಮಗಂಡಿ ಮತ್ತು ಬಾರ್ಕಿ ಎಂಬ ಎರಡು ಕುಟುಂಬಗಳು ಹೋರಟಿದ್ದರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಾಣೆಬೆನ್ನೂರಿನ ರಾಷ್ಟ್ರೀಯ ಹೆದ್ದಾರಿ-4ರ (NH-4) ಹಲಗೇರಿ ಬ್ರಿಡ್ಜ್ ಬಳಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ವಕೀಲೆ ಚೈತ್ರಾ ಗೌಡ ಸಾವು ಪ್ರಕರಣ: ಅನುಮಾನಾಸ್ಪದ ಸಾವು ಕೊಲೆಯಲ್ಲ, ಆತ್ಮಹತ್ಯೆ

ಮೃತರನ್ನ ಸುರೇಶ ಜಾಡಿ (54), ಐಶ್ವರ್ಯ ಬಾರ್ಕಿ (22), ಚೇತನಾ (7), ಪವಿತ್ರಾ ಸಮಗಂಡಿ (28) ಎಂದು ಗುರುತಿಸಲಾಗಿದೆ. ಮೃತರು ಹಾವೇರಿನಗರದ ನಿವಾಸಿಗಳಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರು, ಹಾಸನ, ಕೊಡಗು ಸೇರಿದಂತೆ ಹಲವೆಡೆ ಇಂದು ಮಳೆ ಸಾಧ್ಯತೆ
ಗಾಯಗೊಂಡವರನ್ನ ಚನ್ನವೀರಪ್ಪ ಜಾಡಿ, ಸಾವಿತ್ರಾ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊನ್ನಪ್ಪ ಬಾರ್ಕಿ, ಪ್ರಭುರಾಜ ಸಮಗಂಡಿ, ಗೀತಾ ಬಾರ್ಕಿ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನ ಸದ್ಯ ದಾವಣಗೆರೆ ಮತ್ತು ತಾಲ್ಲೂಕು ಆಸ್ಪತ್ರೆಗೆ (Hospital) ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಕ್ರಿಕೆಟ್ ಜಗಳ ತಾರಕಕ್ಕೇರಿ ಗಲಾಟೆ -ಓರ್ವ ಪೊಲೀಸ್ ಪೇದೆಗೆ ಗಾಯ
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ರಾಣೆಬೆನ್ನೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೆಬೆನ್ನೂರು ಸಂಚಾರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ಕೂಡಲೇ ಸ್ವದೇಶಕ್ಕೆ ಬಾ – ಪ್ರಜ್ವಲ್‌ಗೆ ಹೆಚ್‌ಡಿಡಿ ಸೂಚನೆ

