Virat Kohli : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ.4ರಂದು ನಡೆದ ಭೀಕರ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಸಾಮಾಜಿಕ ಹೋರಾಟಗಾರ ಎಚ್.ಎಂ.ವೆಂಕಟೇಶ್ ಎಂಬುವವರು ದೂರು ಸಲ್ಲಿಸಿದ್ದಾರೆ.
ಅತಿಯಾದ ಜನಸಂದಣಿಯಿಂದಾಗಿ 11 ಮಂದಿ ಯುವ ಅಭಿಮಾನಿಗಳು ದುರ್ಮರಣ ಹೊಂದಿದ್ದು, ಈ ಅವ್ಯವಸ್ಥೆಗೆ ವಿರಾಟ್ ಕೊಹ್ಲಿ ಕೂಡ ನೇರವಾಗಿ ಹೊಣೆಗಾರರು ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.
ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಯಂತೆ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಡಿಸಿಪಿ, ಎಸಿಪಿ, ಕಬ್ಬನ್ಪಾರ್ಕ್ ಪೊಲೀಸ್ ಇನ್ಸ್‌ಪೆಕ್ಟರ್ ಹಾಗೂ ಹಿರಿಯ ಅಧಿಕಾರಿಗಳನ್ನು ಅಮಾನತು ಮಾಡಿದೆ.ಅಲ್ಲದೆ, ಆರ್‌ಸಿಬಿ ಸೇರಿ ಡಿಎನ್ಎ ಹಾಗೂ ಕೆಎಸ್ಸಿಎ ಮುಖ್ಯಸ್ಥರ ವಿರುದ್ಧವೂ ಪ್ರಕರಣ ದಾಖಲಾಗಿದೆ.

