By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಫೆ.8ರಿಂದ CCL 11ನೇ ಸೀಸನ್ ಆರಂಭ : ಇಲ್ಲಿದೆ ಫುಲ್ ಡೀಟೇಲ್ಸ್
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > Entertainment > ಸ್ಯಾಂಡಲ್​ವುಡ್-Sandalwood > ಫೆ.8ರಿಂದ CCL 11ನೇ ಸೀಸನ್ ಆರಂಭ : ಇಲ್ಲಿದೆ ಫುಲ್ ಡೀಟೇಲ್ಸ್
EntertainmentLatestTop Storiesಸ್ಯಾಂಡಲ್​ವುಡ್-Sandalwood

ಫೆ.8ರಿಂದ CCL 11ನೇ ಸೀಸನ್ ಆರಂಭ : ಇಲ್ಲಿದೆ ಫುಲ್ ಡೀಟೇಲ್ಸ್

CCL 11th season starts from Feb. 8: Here are the full details

Published January 30, 2025
Share
3 Min Read
CCL 11th season starts from Feb. 8: Here are the full details
SHARE

ಸ್ಯಾಂಡಲ್‌ವುಡ್ ಸ್ಟಾರ್ಸ್ ಶೂಟಿಂಗ್ ಗೆ ಬ್ರೇಕ್ ಹಾಕಿ ಕೈಯಲ್ಲಿ ಬ್ಯಾಟ್ ಹಿಡಿದು ಕ್ರಿಕೆಟ್ ಮೈದಾನಕ್ಕೆ ಇಳಿಯೋ ಸಮಯ ಮತ್ತೆ ಬಂದಿದೆ. ಸಿಸಿಎಲ್ 11ನೇ ಸೀಸನ್‌ಗೆ ದಿನಗಣನೆ ಶುರುವಾಗಿದ್ದು, ಇದೇ ಫೆಬ್ರವರಿ 8ರಿಂದ ಸಿಸಿಎಲ್ 11ನೇ ಸೀಸನ್ ರಂಗೇರುತ್ತಿದೆ. ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ.

ಕರ್ನಾಟಕ ಬುಲ್ಡೋಜರ್ಸ್ ತಂಡವನ್ನು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುನ್ನಡೆಸಲಿದ್ದು, ತಂಡದ ಮಾಲೀಕರಾಗಿ ಅಶೋಕ್ ಖೇಣಿ ಸಾಥ್ ಕೊಡುತ್ತಿದ್ದಾರೆ. ಕಳೆದ ಬಾರಿ ರನ್ನರ್ ಅಪ್ ಆಗಿ ಹೊರಗಹೊಮ್ಮಿದ್ದ ಕರ್ನಾಟಕ ಬುಲ್ಡೋಜರ್ಸ್ ತಂಡ ಈ ಬಾರಿ ಕಪ್ ಗೆಲ್ಲುವ ತವಕದಲ್ಲಿದ್ದಾರೆ. ಈ ಬಾರಿಯ ವಿಶೇಷ ಅಂದ್ರೆ ಕಳೆದ ಬಾರಿ ಮಿಸ್ ಆಗಿದ್ದ ಗೋಲ್ಡನ್ ಸ್ಟಾರ್ ಗಣೇಶ್ ತಂಡ ಸೇರ್ಪಡೆಯಾಗಿದ್ದಾರೆ.

ಸಿಸಿಎಲ್ ಸೀಸನ್ 11ಕ್ಕೆ ದಿನಗಣನೆ ಶುರುವಾಗಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲಿ ನಿನ್ನೆ ಸುದ್ದಿ ಗೋಷ್ಟಿ ಆಯೋಜಿಸಲಾಗಿತ್ತು. ಈ ವೇಳೆ ಕಿಚ್ಚ ಸುದೀಪ್, ಸಿಸಿಎಲ್ ಆಯೋಜಕರಾದ ವಿಷ್ಣು ಇಂದೋರಿ ಹಾಗೂ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ ಅಶೋಕ್ ಖೇಣಿ ಉಪಸ್ಥಿತರಿದ್ದರು.

ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕ ಸುದೀಪ್ ಮಾತನಾಡಿ, ಸಿಸಿಎಲ್ ನಡೆಸುವುದೇ ಬಹಳ ಕಷ್ಟ. ನಾಲ್ಕು ಟೀಂ ಒಟ್ಟಿಗೆ ಶುರುವಾದ ಜರ್ನಿ ಇದು. ಇದೇ‌ ಮೈದಾನದಲ್ಲಿ ಮುಂಬೈ ಮೇಲೆ ಮೊದಲ ಮ್ಯಾಚ್ ಆಡಿದ್ದೇವು. ಅದ್ಭುತ ವಾತಾವರಣ ಆ ದಿನ ಇತ್ತು. ನಾವೆಲ್ಲಾ ಚಿಕ್ಕ ಚಿಕ್ಕ ಗ್ರೌಂಡ್ ನಲ್ಲಿ ಆಟವಾಡುತ್ತಿದ್ದರು.

ಅವತ್ತಿಗೆ ಗ್ರೌಂಡ್ ಫುಲ್ ಆಗುತ್ತದೆ. ಇಷ್ಟು ಜನಗಳ ಮಧ್ಯೆ ಆಡುವುದು. ಭಯ ಎಂದರೇನು ಅನ್ನುವುದು ಅವತ್ತು ಗೊತ್ತಾಯ್ತು. ನಮಗೆ ಅದು ಕೊಟ್ಟ ಅದ್ಭುತ ಗಿಫ್ಟ್…ಚಿತ್ರರಂಗದ ಬೇರೆ ಬೇರೆ ಭಾಷೆಗಳ ಜೊತೆ ನಮಗೆ ಒಡನಾಟ ಇರಲಿಲ್ಲ. ಸೇತುವೆ ಇರಲಿಲ್ಲ. ಆದರೆ ಸಿಸಿಎಲ್ ನಿಂದ ಸಂಪರ್ಕವಾಯಿತು ಎಂದು ತಿಳಿಸಿದರು. ಅಶೋಕ್ ಖೇಣಿ ಮಾತನಾಡಿ, ಮ್ಯಾಕ್ಸ್ ಸಿನಿಮಾದ ಸಕ್ಸಸ್ ಗೆ ಶುಭಾಶಯ. ಕರ್ನಾಟಕ ಬುಲ್ಡೋಜರ್ಸ್ ನಾಲ್ಕು ಬಾರಿ ಕಪ್ ಗೆದ್ದಿದೆ. ಈ ಬಾರಿ ಕಪ್ ಗೆಲ್ಲುತ್ತೇವೆ ಎಂಬ ಭರವಸೆ ಇದೆ ಎಂದರು.

ಸಿಸಿಎಲ್ ಆಯೋಜಕರಾದ ವಿಷ್ಣು ಇಂದೂರಿ ಮಾತನಾಡಿ , ಸಿಸಿಎಲ್ ಶುರುವಾಗಿ 11 ವರ್ಷವಾಯ್ತು. ಇದು 11ನೇ ಸೀಸನ್. ಮೊದಲ ಟೂರ್ನಮೆಂಟ್ ಬೆಂಗಳೂರಲ್ಲಿ ಆಯೋಜಿಸಿದಾಗ ಅತಿ ಹೆಚ್ಚು ಜನ ನೋಡಿರುವುದು ದಾಖಲೆ. ಕರ್ನಾಟಕ ಬುಲ್ಡೋಸರ್ಸ್ ತಂಡ ನನ್ನ ಹೃದಯಕ್ಕೆ ಹತ್ತಿರಕ್ಕೆ ಇದೆ. ಸುದೀಪ್ ಸರ್ ನೀವು ಸ್ಟಾರ್ ಅನ್ನುವುದಕ್ಕಿಂತ ನಮ್ಮೆಲ್ಲರಿಗೆ ಸಹೋದರ ಇದ್ದಂತೆ. ನಿಮ್ಮ ಬೆಂಬಲಕ್ಕೆ ಧನ್ಯವಾದ ಸಣ್ಣ ಪದ. ನೈಸ್ ಮುಖ್ಯಸ್ಥರಾದ ಖೇಣಿ ಸರ್ ನೀವು ಸಿಸಿಎಲ್ ಬಲ ಎಂದರು.

ತಂಡಗಳು ಪಟ್ಟಿ
ಈ ಬಾರಿ ಒಟ್ಟು 7 ತಂಡಗಳು ಕ್ರಿಕೆಟ್ ಆಡಲಿದ್ದು, ಆ ಟೀಮ್‌ಗಳ ಬಗ್ಗೆ ಇಲ್ಲಿದೆ ಮಾಹಿತಿ
ಕರ್ನಾಟಕ ಬುಲ್ಡೋಜರ್ಸ್, ಚೆನ್ನೈ ರೈನೋಸ್, ಬೆಂಗಾಲ್ ಟೈಗರ್ಸ್, ಪಂಜಾಬ್ ಡಿ ಶೇರ್, ಮುಂಬೈ ಹೀರೋಸ್, ಭೋಜ್‌ಪುರಿ ದಬಾಂಗ್ಸ್, ತೆಲುಗು ವಾರಿಯರ್ಸ್ ಸೇರಿದಂತೆ 7 ತಂಡಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿವೆ.

ಸಿಸಿಎಲ್ ಸೀಸನ್ 11ಕ್ಕೆ Blobs ಟೈಟಲ್ ಸ್ಪಾನ್ಸರ್ ಮಾಡುತ್ತಿದ್ದು, ಏರ್ ಟೆಲ್ ಪೇಮೆಂಟ್ ಬ್ಯಾಂಕ್ ಕೋ ಸ್ಪಾನ್ಸರ್ ಮಾಡುತ್ತಿದ್ದಾರೆ. ಅಸೋಸಿಯೇಟ್ ಸ್ಪಾನ್ಸರ್ ಆಗಿ NICE ಲಿಮಿಟೆಡ್ , ಇಕ್ಯೂಪ್ಮೆಂಟ್ ಸ್ಪಾನ್ಸರ್ SG, ಅನಾಲೈಟಿಕ್ ಸ್ಪಾನ್ಸರ್ St8bat ಸಾಥ್ ಕೊಡುತ್ತಿದ್ದಾರೆ.

ಕರ್ನಾಟಕ ಬುಲ್ಡೋಜರ್ಸ್ ತಂಡ
ಕಿಚ್ಚ ಸುದೀಪ್
ಗೋಲ್ಡನ್ ಸ್ಟಾರ್ ಗಣೇಶ್
ಕಾರ್ತಿಕ್ ಜಯರಾಮ್
ಡಾರ್ಲಿಂಗ್ ಕೃಷ್ಣ
ಸುನಿಲ್ ರಾವ್
ರಾಜೀವ್ ಹನು
ಚಂದನ್ ಕುಮಾರ್
ಪ್ರತಾಪ್ ನಾರಾಯಣ್
ನಿರೂಪ್ ಭಂಡಾರಿ
ಅನೂಪ್ ಭಂಡಾರಿ
ಕರಣ್ ಆರ್ಯನ್
ಮಂಜುನಾಥ್ ಗೌಡ
ಸಾಗರ್ ಗೌಡ
ಅಲಕಾನಂದ
ತ್ರಿವಿಕ್ರಮ್

CCL-2025 ಹೊಸ ವೇಳಾಪಟ್ಟಿ
ಬೆಂಗಳೂರಿನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ರಿನ್ಹೋಸ್ ಮತ್ತು ಬೆಂಗಾಲ್ ಟೈಗರ್ಸ್ ಮುಖಾಮುಖಿಯಾಗಲಿದ್ದು, ಅದೇ ದಿನ ನಡೆಯುವ ಎರಡನೇ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಮತ್ತು ತೆಲುಗು ವಾರಿಯರ್ಸ್ ಸೆಣೆಸಲಿವೆ.
ನಾಲ್ಕು ತಂಡಗಳಾದ ಭೋಜ್‌ಪುರಿ ದಬಾಂಗ್ಸ್, ಬೆಂಗಾಲ್ ಟೈಗರ್ಸ್, ಮುಂಬೈ ಹೀರೋಸ್ ಮತ್ತು ಪಂಜಾಬ್ ಡಿ ಶೇರ್ ಫೆಬ್ರವರಿ 9 ರಂದು ದೆಹಲಿಯಲ್ಲಿ ಆಡಲಿವೆ. ಆನಂತರದ ಪಂದ್ಯಗಳು ಕ್ರಮವಾಗಿ ಹೈದರಾಬಾದ್, ಕಟಕ್, ಸೂರತ್‌ನಲ್ಲಿ ನಡೆಯಲಿವೆ. ಮಾರ್ಚ್ 1ರಂದು ಸೆಮಿಫೈನಲ್ ಪಂದ್ಯ ನಡೆಯಲಿದ್ದು ಮತ್ತು ಮಾರ್ಚ್ 2ರಂದು ಫೈನಲ್ ಪಂದ್ ನಡೆಯಲಿದೆ. ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಸ್ಥಳವನ್ನು ಇನ್ನೂ ಅಂತಿಮಗೊಳಿಸಿಲ್ಲ.

ಕರ್ನಾಟಕ ಬುಲ್ಡೋಜರ್ಸ್ ಪಂದ್ಯಗಳ ವಿವರ :
8 ಫೆಬ್ರವರಿ – ತೆಲುಗು ವಾರಿಯರ್ಸ್ – ಬೆಂಗಳೂರು
14 ಫೆಬ್ರವರಿ – ಚೆನ್ನೈ ರೈನೋಸ್ – ಹೈದರಾಬಾದ್
15 ಫೆಬ್ರವರಿ – ಮುಂಬೈ ಹೀರೋಸ್ – ಹೈದರಾಬಾದ್
22 ಫೆಬ್ರವರಿ – ಪಂಜಾಬ್ ಶೇರ್ – ಸೂರತ್

You Might Also Like

ಯುನೆಸ್ಕೊ ಸಾಂಸ್ಕೃತಿಕ ಪರಂಪರೆ ಪಟ್ಟಿಗೆ ‘ದೀಪಾವಳಿ’ ಸೇರ್ಪಡೆ

“ದಿ ಕೇರಳ ಸ್ಟೋರಿ” ಸಿನಿಮಾ ಪ್ರಸಾರಕ್ಕೆ ಕೇರಳ ಸಿಎಂ ವಿರೋಧ

ನಟನಿಗಾಗಿ ಹೆತ್ತ ಮಗುವನ್ನೇ ಖೈದಿ ಮಾಡಿದ ದರ್ಶನ್ ಅಭಿಮಾನಿ…!

ಹಾಸನದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು 8 ಜನ ಸಾವು

ಕೆಸಿ ಜನರಲ್ ಆಸ್ಪತ್ರೆ ಯಲ್ಲಿ ಮತ್ತೊಂದು ಅಮಾನವೀಯ ಘಟನೆ

TAGGED:CCLCCL 2025Kiccha Sudeep
Share This Article
Facebook Copy Link Print
Previous Article Gajarama “ಗಜರಾಮ” ಚಿತ್ರದ ಟ್ರೇಲರ್ ರಿಲೀಸ್
Next Article Maha Kumbh ಮಹಾಕುಂಭದಲ್ಲಿ ಮತ್ತೊಂದು ಅವಘಡ, ಟೆಂಟ್‌ನಲ್ಲಿ ಬೆಂಕಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up