ತುಮಕೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಂದೇ ನಾಣ್ಯದ ಎರಡು ಮುಖವಿದ್ದಂತೆ, ಒಟ್ಟಾಗಿ ಸೇರಿ ಸಮನ್ವಯತೆಯಿಂದ ಕೆಲಸ ಮಾಡಿದಾಗ ಜಿಲ್ಲೆಯ ಅಭಿವೃದ್ಧಿ ಸಾಧ್ಯ, ಎಂದು ರೈಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ, ಸಂಸದ ಹಾಗೂ ವಿಶಾ ಸಮಿತಿ ಅಧ್ಯಕ್ಷ ರವಿ ಸೋಮಣ್ಣ ತಿಳಿಸಿದರು,,
ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ದಿಶಾ ಸಮಿತಿಯಲ್ಲಿ ಕೇಂದ್ರ ಪುರಸ್ಕಂತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ಜಿಲ್ಲೆಯ ಅಭಿವೃದ್ಧಿಗೆ ಎಲ್ಲಾ ಅಧಿಕಾರಿಗಳು ಶ್ರಮಿಸಬೇಕು, ಎಂದು ತಿಳಿಸಿದವರು ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಜೆಜೆ ಎಂ ಕಾಮಗಾರಿ ಯನ್ನು ಪ್ರಗತಿ ಪರಿಶೀಲಿಸುತ್ತಾ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಜಯಂ ಕಾಮಗಾರಿಯಲ್ಲಿ ಉತ್ತಮ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು, ಕಳಪೆ ಗುಣಮಟ್ಟದ ಕಾಮಗಾರಿಗಳು ಕಂಡು ಬಂದರೆ ತಕ್ಷಣ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು, ಜಿಲ್ಲೆಯಲ್ಲಿ ಕೇಂದ್ರದ ಜೆಜೆಎಂ ಯೋಜನೆಯ ಶಾಶ್ವತ ಕುಡಿಯುವ ನೀರಿನ ಯೋಜನೆಯಾಗಬೇಕು ಎಂದು ಕಟ್ಟುನಿಟ್ಟಿನ ಸೂಚನೆಯನ್ನು ತಿಳಿಸಿದರು,,
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭುಜಿ ಸಭೆಗೆ ಮಾಹಿತಿ ನೀಡುತ್ತಾ ನಮ್ಮ ಜಿಲ್ಲೆಯಲ್ಲಿ ಜಲ್ಜೀವನ್ ಮಿಷನ್ ಯೋಜನೆಯಡಿ ಮಾರ್ಚ್ ಅಂತ್ಯಕ್ಕೆ ನಾಲ್ಕು ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು ಇದುವರೆಗೂ 3699 ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆಯಾಗಿದ್ದು ಈ ಪೈಕಿ 356 ಕಾಮಗಾರಿಗಳಿಗೆ ಕಾರ್ಯದೇಶ ನೀಡಲಾಗಿದೆ, ಈವರೆಗೂ 1049 ಕಾಮಗಾರಿಗಳು ಪೂರ್ಣಗೊಂಡಿದ್ದು 1972 ಕಾಮಗಾರಿಗಳು ಪ್ರಗತಿಯಲ್ಲಿವೆ ಇದಕ್ಕಾಗಿ 585 ಕೋಟಿ ರೂಗಳ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು,,
ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿಬಿ ಜಯಚಂದ್ರ,ಅವರು ತುಮಕೂರು ದಾವಣಗೆರೆ ರೈಲ್ವೆ ಮಾರ್ಗದ ಪ್ರಗತಿ ಯಾವ ಹಂತದಲ್ಲಿದೆ ಎಂದು ಪ್ರಶ್ನಿಸಿದಾಗ ಈ ಯೋಜನೆಗೆ ಸಂಬಂಧಿಸಿ ದಂತೆ ಈಗಾಗಲೇ ಶೇ. 90ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, 59 ಎಕರೆ ಮಾತ್ರ ಭೂ ಸ್ವಾಧೀನವಾಗಬೇಕಾಗಿದೆ, ಮುಂದಿನ ಒಂದುವರೆ ವರ್ಷದೊಳಗೆ ಜಿಲ್ಲೆಯಲ್ಲಿ ಕೈಗೊಂಡಿರುವ ಎಲ್ಲಾ ರೈಲ್ವೆ ಯೋಜನೆಗಳು ಪೂರ್ಣಗೊಳ್ಳಲುವೆ ಎಂದು ಸಂಸದ ಸೋಮಣ್ಣ ಉತ್ತರಿಸಿದರು,,
ಗ್ರಾಮಾಂತರ ಶಾಸಕ ಸುರೇಶ್ ಗೌಡ ಮಾತನಾಡಿ, ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಅಡಿ 11 ಘಟಕಗಳಿದ್ದು ಈ ಯೋಜನೆಯಿಂದ ಜನರಿಗೆ ಯಾವುದೇ ಪ್ರಯೋಜನವಾಗಿಲ್ಲ, ಜನರಿಗೆ ಕುಡಿಯುವ ನೀರು ಸರಬರಾಜು ಮಾಡುವ ಇಚ್ಛಾಸಕ್ತಿ ಅಧಿಕಾರಿಗಳಿಗೆ ಇಲ್ಲವೆಂದು ಸಭೆಗೆ ದೂರು ನೀಡಿದಾಗ ಪ್ರತಿಕ್ರಿಸಿದ ವಿ ಸೋಮಣ್ಣ ಕೂಡಲೇ ದುರಸ್ತಿಯಲ್ಲಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯ ಘಟಕಗಳನ್ನು ಸುಸ್ಥಿತಿಗೆ ತರಬೇಕು, ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಇಂಜಿನಿಯರ್ ಗೆ ಸೂಚನೆ ನೀಡಿದರು,,
ಸಂಸದ ಸೋಮಣ್ಣ ಮುಂದುವರೆದು ಮಾತನಾಡುತ್ತಾ ಜಿಲ್ಲೆಯಲ್ಲಿ ಅರಣ್ಯ ಒತ್ತೋರಿಯಾಗಿರುವ ಪ್ರದೇಶವನ್ನು ಗುರುತಿಸಿ ಒತ್ತುವರಿ ತಿರುವಿಗೆ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕು, ಅರಣ್ಯ ಹೊತ್ತುವರೆಯಿಂದ ಸಾಮಾಜಿಕ ಅರಣ್ಯ ನಾಶವಾಗುತ್ತಿದೆ ಒತ್ತುವರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ವರ್ಷಗಳಿಂದ ರಸ್ತೆಗಳು ಹದಗೆಟ್ಟ ಸ್ಥಿತಿಯಲ್ಲಿವೆ, ರಸ್ತೆ ಸಂಪರ್ಕವಿಲ್ಲದಿರುವ ಗ್ರಾಮಗಳ ಮಾಹಿತಿ ಪಡೆದು ಸದರಿ ಗ್ರಾಮಗಳಿಗೆ ಸೂಕ್ತ ರಸ್ತೆ ಸಂಪರ್ಕ ಕಲ್ಪಿಸಲು ಕ್ರಿಯಾ ಯೋಜನೆ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು,,
ಮೀನುಗಾರಿಕೆ ಇಲಾಖೆ ಪ್ರಗತಿಪರಿಶೀಲನೆ ನಡೆಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಮೀನು ಸಾಕಾಣಿಕೆರೆಗಳ ಹರಾಜು ಹಕ್ಕನ್ನು ಆಯಾ ಗ್ರಾಮ ಪಂಚಾಯಿತಿಗಳಿಗೆ ನೀಡಬೇಕು, ಇದರಿಂದ ಪಂಚಾಯಿತಿಗೆ ಆದಾಯ ಬರಲಿದೆ ಎಂದು ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕರಾದ ಶಿವಶಂಕರ್ ಅವರಿಗೆ ಸೂಚನೆ ನೀಡಿದರು, ಬಹುತೇಕ ಗ್ರಾಮೀಣ ಪ್ರದೇಶದ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದು, ಸರ್ಕಾರಿ ಶಾಲೆಗಳ ಕಟ್ಟಡಗಳ ಸ್ಥಿತಿ ಉತ್ತಮವಾಗಿಲ್ಲದಿರುವುದನ್ನು ಕೊರಟಗೆರೆ ಮತ್ತು ಮಧುಗಿರಿ ತಾಲೂಕುಗಳಲ್ಲಿ ಪ್ರವಾಸ ಮಾಡಿದ ಸಂದರ್ಭದಲ್ಲಿ ನಾನು ಗಮನಿಸಿದ್ದೇನೆ, ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲಭೂತ ಸೌಲಭ್ಯಗಳು, ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಮಧುಗಿರಿ ಮತ್ತು ತುಮಕೂರು ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರಿಗೆ ಕಾರ್ಯನಿರ್ವಹಿಸಬೇಕೆಂದು ಸೂಚನೆ ತಿಳಿಸಿದರು,,
ಇನ್ನು ಉಳಿದಂತೆ ಸಭೆಯಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ಪ್ರಧಾನ ಮಂತ್ರಿ ಅವಾಸ್ ಯೋಜನೆ, ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ, ಬಾಡಿಗೆ ಕಟ್ಟದ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರ, ವಿಶ್ವಕರ್ಮ ಸಮುದಾಯಕ್ಕೆ ಒದಗಿಸಲಾಗುತ್ತಿರುವ ತರಬೇತಿ ಹಾಗೂ ಶಿಷ್ಯವೇತನ ಸೇರಿದಂತೆ, ವಿವಿಧ ಕೇಂದ್ರ ಪುರಸ್ಕಂಥ ಯೋಜನೆಗಳನ್ನು ಪ್ರತಿ ಇಲಾಖವಾರು ಪರಿಶೀಲಿಸಿದರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ವೈಯಚುಚ್ಚಯ್ಯ ಮಾತನಾಡಿ ಬಿದರೆ ಹಳ್ಳ ಕಾವಲಿನಲ್ಲಿ ಹೆಲಿಕ್ಯಾಪ್ಟರ್ ಕಟಕ ನಿರ್ಮಾಣಕ್ಕಾಗಿ ಜಮೀನು ಕಳೆದುಕೊಂಡವರು ಕೂಲಿ ಕೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವುದು ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು, ಬಡ ಕುಟುಂಬಗಳಿಗೆ ಆದ್ಯತೆ ನೀಡಿ ಉದ್ಯೋಗ ನೀಡಬೇಕು ಎಂದು ಸಭೆಗೆ ಮನವಿ ಮಾಡಿದರು,,
ಇದೇ ಸಂದರ್ಭದಲ್ಲಿ ಸಂಸದರಾದ ಗೋವಿಂದ ಕಾರಜೋಳ, ಡಾ” ಮಂಜುನಾಥ್, ಶಾಸಕರಾದ ಜ್ಯೋತಿ ಗಣೇಶ್, ಎಂ ಟಿ ಕೃಷ್ಣಪ್ಪ, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್, ಪಾಲಿಕೆ ಆಯುಕ್ತ ಬಿವಿ ಅಶ್ವಿಜ, ಉಪ ವಿಭಾಗಾಧಿಕಾರಿಗಳಾದ ಗೌರವ ಕುಮಾರ್ ಶೆಟ್ಟಿ, ಗೋಟೂರು ಶಿವಪ್ಪ, ಸಪ್ತ ಶ್ರೀ, ಹಾಗೂ ವಿವಿಧ ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಸೇರಿದಂತೆ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿದ್ದರು,,,
ವರದಿ ನರಸಿಂಹರಾಜು ತುಮಕೂರು

