ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್(MK Stalin) ದೆಹಲಿ ಏರ್ಪೋರ್ಟ್ನಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು(N Chandrababu Naidu) ಅವರನ್ನು ಭೇಟಿಯಾದರು.
ಬುಧವಾರ ದೆಹಲಿಯಲ್ಲಿ ನಡೆದ ಎನ್ಡಿಎ ಸಭೆಯಲ್ಲಿ ಚಂದ್ರಬಾಬು ನಾಯ್ಡು ಭಾಗಿಯಾಗಿದ್ದರು. ಇತ್ತ ಇಂಡಿ ಮೈತ್ರಿಕೂಟದ ಸಭೆಯಲ್ಲಿ ಸ್ಟಾಲಿನ್ ಇಂಡಿ ಭಾಗಿಯಾಗಿದ್ದರು. ಇಬ್ಬರೂ ಕೂಡ ತಮ್ಮ ರಾಜ್ಯಕ್ಕೆ ಹಿಂದಿರುಗುವ ಸಮಯದಲ್ಲಿ ಏರ್ಪೋರ್ಟ್ನಲ್ಲಿ ಭೇಟಿಯಾದರು.
ಈ ಬಗ್ಗೆ ಸ್ಟಾಲಿನ್ ಅವರು ತಮ್ಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು, ‘‘ಕೇಂದ್ರ ಸರ್ಕಾರದಲ್ಲಿ ದಕ್ಷಿಣ ರಾಜ್ಯಗಳ ಹಕ್ಕುಗಳ ರಕ್ಷಣೆಗಾಗಿ ಪ್ರತಿಪಾದಿಸುವಲ್ಲಿ ನಿರ್ಣಾಯಕ ಪಾತ್ರವಹಿಸುತ್ತಾರೆ ಎನ್ನುವ ವಿಶ್ವಾಸವಿದೆ’’. ನಾನು ಅವರಿಗೆ ಶುಭಾಶಯ ತಿಳಿಸಿದ್ದೇನೆ, ತಮಿಳುನಾಡು ಹಾಗೂ ಆಂಧ್ರಪ್ರದೇಶದ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಾವು ಸಹಕರಿಸುತ್ತೇವೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದ್ದೇನೆ. ದಕ್ಷಿಣ ರಾಜ್ಯಗಳ ಪರವಾಗಿ ವಕಾಲತ್ತು ವಹಿಸುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಬಿಎಸ್ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ
ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ನಾಯಕರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು, ಶಿವಸೇನಾ ಮುಖ್ಯಸ್ಥ ಏಕನಾಥ್ ಶಿಂಧೆ, ಜೆಡಿಎಸ್ನ ಎಚ್ಡಿ ಕುಮಾರಸ್ವಾಮಿ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್, ಲೋಕಜನಶಕ್ತಿ ಪಕ್ಷದ ಚಿರಾಗ್ ಪಾಸ್ವಾನ್ ಮತ್ತಿರರು ಹಾಜರಿದ್ದರು.ಇದನ್ನೂ ಓದಿ: ಉರುಳಿತು ಗ್ಯಾರಂಟಿ ಸರ್ಕಾರದ ಮೊದಲ ವಿಕೆಟ್- ಇಂದೇ ನಾಗೇಂದ್ರ ರಾಜೀನಾಮೆ ಸಾಧ್ಯತೆ!