ಮಡಿಕೇರಿ: ಚುನಾವಣಾ ಪ್ರಚಾರ ನಿರತ ಕಾರ್ಯಕರ್ತರಿಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆಯಲಾಗಿದೆ ಎಂದು ಕುಶಾಲನಗರ ತಾಲೂಕಿನ ನೆಲ್ಲಿಹುದಿಕೇರಿಯಲ್ಲಿ ಬಿಜೆಪಿ ಕಾರ್ಯಕರ್ತರು ಗಂಭೀರ ಆರೋಪ ಮಾಡಿದ್ದಾರೆ.
ಅಪಘಾತದಲ್ಲಿ ರಾಮಪ್ಪ(60) ಮೃತಪಟ್ಟಿದ್ದು, ರತೀಶ(35), ಚಂದ್ರರಾಜ(55) ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಇಂದು ಮಡಿಕೇರಿ ಮತ್ತು ಸಿದ್ದಾಪುರ ರಸ್ತೆಯನ್ನು ಬಂದ್ ಮಾಡಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಬಂದ್ ಅದ ಹಿನ್ನೆಲೆಯಲ್ಲಿ ಸಿದ್ದಾಪುರ ಮಡಿಕೇರಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ಸಿನ ತುಘಲಕ್ ದರ್ಬಾರ್ : ಸಿಟಿ ರವಿ
ಕೊಡಗು ಮೈಸೂರು ಲೋಕಸಭಾ ಅಭ್ಯರ್ಥಿ ಯದುವೀರ್ ಮತ್ತು ಮಾಜಿ ಶಾಸಕರಾದ ಕೆ.ಜಿ ಬೋಪಯ್ಯ ಅಪ್ಪಚ್ಚು ರಂಜನ್ ವಿರಾಜಪುಟ ತಾಲೂಕಿನ ಸಿದ್ದಾಪುರ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸಿದ್ದಾಪುರ ಶವಾಗಾರ ರಸ್ತೆ ಮುಂದೆ ನೂರಾರು ಹಿಂದೂ ಕಾರ್ಯಕರ್ತರು ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗುತ್ತಿದ್ದಾರೆ. ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸುವಂತೆ ಪ್ರತಿಭಟನಾಕಾರು ಒತ್ತಾಯಿಸುತ್ತಿದ್ದಾರೆ. ಇದನ್ನೂ ಓದಿ: ರೌಡಿಗಳಿಗೆ, ಗೂಂಡಾಗಳಿಗೆ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ ಕಿಡಿ

