By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಸಿಎಂ ಮತ್ತು ಶಾಸಕರು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ : ವಿಜಯೇಂದ್ರ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜಕೀಯ | Politics - ಸಿಎಂ ಮತ್ತು ಶಾಸಕರು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ : ವಿಜಯೇಂದ್ರ

ರಾಜಕೀಯ | PoliticsLatest

ಸಿಎಂ ಮತ್ತು ಶಾಸಕರು ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದ್ದಾರೆ : ವಿಜಯೇಂದ್ರ

CM and MLAs are adding fuel to the fire: Vijayendra

Published September 10, 2025
Share
3 Min Read
Vijayendra Vijayendra Vijayendra
SHARE

ಮದ್ದೂರು: ಮುಖ್ಯಮಂತ್ರಿಗಳ ಹೇಳಿಕೆ, ಭದ್ರಾವತಿ ಶಾಸಕರ ಹೇಳಿಕೆ- ಇವೆಲ್ಲವುಗಳ ಮೂಲಕ ರಾಜ್ಯ ಸರಕಾರದ ಕಡೆಯಿಂದ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪೊಲೀಸ್ ವೈಫಲ್ಯ ಮೊದಲಾದವು ಬಹಿರಂಗವಾಗಲಿ; ಇದಕ್ಕಾಗಿ ಮದ್ದೂರು ಘಟನೆ ಬಗ್ಗೆ ನ್ಯಾಯಾಂಗ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು. ವಿಪಕ್ಷ ನಾಯಕರು, ಪ್ರಮುಖರು ಎಲ್ಲರೂ ಚರ್ಚೆ ಮಾಡಿದ್ದೇವೆ. ಮೆರವಣಿಗೆಯಲ್ಲಿ ನಾವೂ ಪಾಲ್ಗೊಳ್ಳುತ್ತೇವೆ ಎಂದು ತಿಳಿಸಿದರು. ಹಿಂದೂ ಸಂಘಟನೆಗಳು, ಕಾರ್ಯಕರ್ತರಿಗೆ ಧೈರ್ಯ ತುಂಬುತ್ತೇವೆ ಎಂದು ಹೇಳಿದರು.

ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಬಿಜೆಪಿಯವರು ಕೋಮು ಸೌಹಾರ್ದ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿಗಳ ಹೇಳಿಕೆ ನೀಡಿದ್ದಾರೆ.

ಯಾವಾಗ ಮಸೀದಿ ಒಳಗೆ ತೆರಳಿ ಕಲ್ಲನ್ನು ಹಿಡಿದಿದ್ದರೋ ಆ ಷಡ್ಯಂತ್ರ ರೂಪಿಸಿದಾಗಲೇ ಇವರು ಎಚ್ಚೆತ್ತುಕೊಳ್ಳಬೇಕಿತ್ತು. ಈಗ ನಮ್ಮ ಮೇಲೆ, ಹಿಂದೂಗಳ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನು ಮುಖ್ಯಮಂತ್ರಿಗಳು ರಾಜಕಾರಣ ಎಂದಾದರೂ ಅಂದುಕೊಳ್ಳಲಿ; ಇನ್ನೇನಾದರೂ ಅಂದುಕೊಳ್ಳಲಿ. ನಮ್ಮ ಕರ್ತವ್ಯ ಮಾಡಲಿದ್ದೇವೆ. ಸರಕಾರಕ್ಕೆ ಸ್ವಲ್ಪವಾದರೂ ಮಾನ ಮರ್ಯಾದೆ ಇದ್ದರೆ, ಮಸೀದಿ ಒಳಗೆ ಕಲ್ಲು ಶೇಖರಿಸಿ ಬಿಸಾಡಿದ ಹಾಗೂ ಗೂಂಡಾವರ್ತನೆ ಪ್ರಾರಂಭಿಸಿದ ದೇಶದ್ರೋಹಿಗಳ ವಿರುದ್ಧ ಗೂಂಡಾ ಕಾಯ್ದೆ ಹಾಕಬೇಕು. ಅವರನ್ನು ಒದ್ದು ಒಳಗೆ ಹಾಕಲಿ; ಸುಮ್ಮನೆ ಅಮಾಯಕ ಹಿಂದೂ ಮಹಿಳೆಯರ ಮೇಲೆ ಎಫ್‍ಐಆರ್ ದಾಖಲಿಸಿ, ಹಿಂದೂ ಕಾರ್ಯಕರ್ತರಿಗೆ ತೊಂದರೆ ಕೊಡುವುದು ಸರಿಯಲ್ಲ ಎಂದು ನುಡಿದರು.

ಪೊಲೀಸರು ಮುಂಜಾಗ್ರತೆ ಕೈಗೊಳ್ಳದ ಪರಿಣಾಮವಾಗಿಯೇ ಈ ಬೆಳವಣಿಗೆಗಳು ನಡೆಯುತ್ತಿವೆ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳು, ಸಣ್ಣಪುಟ್ಟ ಘಟನೆ ಎಂದಿರುವ ಗೃಹ ಸಚಿವರು ತಮ್ಮ ಸ್ಥಾನಕ್ಕೆ ಕಿಂಚಿತ್ತಾದರೂ ಗೌರವ ಇದ್ದರೆ ಮದ್ದೂರಿಗೆ ಬರಲಿ ಎಂದು ಆಗ್ರಹಿಸಿದರು. ನಿಮ್ಮ ಆಡಳಿತ ಪಕ್ಷದ ಶಾಸಕರು ಪಾಪ ವಿದೇಶ ಪ್ರವಾಸದಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು. ಅವರಿಗೆ ಇಂಥ ಸಂದರ್ಭದಲ್ಲಿ ಅವರ ಮೋಜೇ ಹೆಚ್ಚಾಗಿದೆ ಹೊರತು ಕಾನೂನು- ಸುವ್ಯವಸ್ಥೆ ಕಾಪಾಡುವ ಕಡೆ ಶಾಸಕರು ಗಮನಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಹಿಂದೂ ಕಾರ್ಯಕರ್ತರು ಭಯ ಪಡುವ ಅವಶ್ಯಕತೆ ಇಲ್ಲ. ಬಿಜೆಪಿ ಮಾತ್ರವಲ್ಲ; ಜೆಡಿಎಸ್‍ನವರೂ ಇಲ್ಲಿ ಬಂದಿದ್ದಾರೆ. ಪಕ್ಷಾತೀತವಾಗಿ ನಾವೆಲ್ಲರೂ ಹಿಂದೂ ಸಂಘಟನೆ- ಕಾರ್ಯಕರ್ತರ ಪರವಾಗಿದ್ದೇವೆ. ರಾಜ್ಯ ಸರಕಾರವು ಹುಡುಗಾಟಿಕೆ ಮಾಡುವುದನ್ನು ಬಿಟ್ಟು ಅಯೋಗ್ಯರನ್ನು ಒದ್ದು ಒಳಗೆ ಹಾಕಲಿ; ಹಿಂದೂ ಸಂಘಟನೆ- ಕಾರ್ಯಕರ್ತರನ್ನು ಮುಟ್ಟದಿರಿ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅವರು ಮೊನ್ನೆ ನಡೆದ ಘಟನೆ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಅವರ ಮಾತಿನ ಆಧಾರದಲ್ಲಿ ಹೇಳುವುದಾದರೆ ಒಂದಂತೂ ಸ್ಪಷ್ಟ. ಇಲ್ಲಿ ಒಂದು ಕೋಮಿನ ಜನರು ಹಿಂದೂಗಳು ಆ ಬೀದಿಯಲ್ಲಿ ಮೆರವಣಿಗೆ ಮಾಡಬಾರದು; ಗಣಪತಿ ಮೆರವಣಿಗೆಯೂ ಸಾಗಬಾರದು ಎನ್ನುತ್ತಿರುವ ಮಾಹಿತಿ ಲಭಿಸಿದೆ. ಗೂಂಡಾವರ್ತನೆ ಬಗ್ಗೆಯೂ ಅವರೇ ಉಲ್ಲೇಖಿಸಿದ್ದಾರೆ ಎಂದು ತಿಳಿಸಿದರು.

ದುಷ್ಕರ್ಮಿಗಳ ಅಟ್ಟಹಾಸವು ಬೀದಿಗಿಳಿದ ಹಿಂದೂ ಮಹಿಳೆಯರ ಆಕ್ರೋಶದಿಂದ ಗೊತ್ತಾಗುತ್ತದೆ. ಗಾಂಜಾ, ಅಫೀಮು ಕಾಟವೂ ಯಥೇಚ್ಛವಾಗಿ ಇಲ್ಲೂ ನಡೆಯುತ್ತಿದೆ. ಹಿಂದೂ ಹೆಣ್ಮಕ್ಕಳು ಗೌರವಯುತವಾಗಿ ರಸ್ತೆಯಲ್ಲಿ ನಡೆದು ಹೋಗಲು ಅಸಾಧ್ಯ ಆಗುವಂಥ ವಾತಾವರಣ ಮದ್ದೂರಿನಲ್ಲಿ ನಿರ್ಮಾಣವಾಗಿದ್ದರೆ, ದೇಶದ್ರೋಹಿಗಳು ಯಾವ ರೀತಿ ಮೆರೆಯುತ್ತಿದ್ದಾರೆ ಎಂಬುದು ಇದರಲ್ಲೇ ಗೊತ್ತಾಗುತ್ತದೆ ಎಂದು ಹೇಳಿದರು.

ಮುಖ್ಯಮಂತ್ರಿಗಳು, ಸಚಿವರ ಹೇಳಿಕೆ ಗಮನಿಸಿದರೆ ಇವರು ಹಿಂದೂಗಳ ಮತ ಪಡೆಯದೇ ಅಧಿಕಾರಕ್ಕೆ ಬಂದಂತೆ ಕಾಣುತ್ತಿದೆ. ಮುಖ್ಯಮಂತ್ರಿಗಳಿಗೆ ಕೇಸರಿ ಕಂಡರೆ ಆಗುವುದಿಲ್ಲ; ಇವರ ನಡವಳಿಕೆಯೂ ಕುಮ್ಮಕ್ಕನ್ನು ನೀಡುತ್ತಿದೆ. ದೇಶದ್ರೋಹಿಗಳು, ಕೆಲವರಲ್ಲಿರುವ ಜಿಹಾದಿ ಮಾನಸಿಕ ಸ್ಥಿತಿ ಏನಿದೆಯೋ ಅವರಿಗೂ ಇದೇ ಕಾರಣಕ್ಕಾಗಿ ಧೈರ್ಯ ಬಂದಿದೆ ಎಂದು ಆರೋಪಿಸಿದರು. ಗಲಭೆಗೆ ರಾಜ್ಯ ಸರಕಾರವೇ ಸಂಪೂರ್ಣ ಹೊಣೆ ಹೊರಬೇಕು ಎಂದು ಆಗ್ರಹಿಸಿದರು.

ಬೀದಿಯಲ್ಲಿ ಓಡಾಡುವುದು ಕಷ್ಟ ಆಗಲಿದೆ
ಧರ್ಮಸ್ಥಳದ ವಿಚಾರದಲ್ಲಿ ಸರಕಾರದ ನಡವಳಿಕೆಯನ್ನು ಜನತೆ ಗಮನಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ತೆರಳುವ ಮಹಿಳೆಯರನ್ನು ತಡೆಯುವ ದುಸ್ಸಾಹಸಕ್ಕೆ ಸರಕಾರ ಕೈಹಾಕಿದೆ. ಅಧಿಕಾರ ಇದೆ ಎಂದು ಚೆಲ್ಲಾಟ, ಹಿಂದೂಗಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಇವರ ಪಾಪದ ಕೊಡ ತುಂಬಿದೆ ಎಂದು ಎಚ್ಚರಿಸಿದರು. ಇವತ್ತಲ್ಲ ನಾಳೆ ಇವರು ಬೀದಿಯಲ್ಲಿ ಓಡಾಡುವುದು ಕಷ್ಟ ಆಗಲಿದೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಹಿಂದೂಗಳೆಲ್ಲರೂ ಪ್ರಜ್ಞಾವಂತರಾಗಿದ್ದಾರೆ; ನಿಮ್ಮ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣವೇ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ; ಪ್ರಧಾನಿ ಮೋದಿಜೀ ಅವರು ಸಬ್ ಕಾ ಸಾಥ್ ನೀತಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ. ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವ ದೇಶದ್ರೋಹಿಗಳಿಗೆ ಬಿರಿಯಾನಿ ತಿನ್ನಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆಯಲ್ಲವೇ ಎಂದು ಕೇಳಿದರು. ಇದು ಅಕ್ಷಮ್ಯ ಅಪರಾಧ ಎಂದು ಟೀಕಿಸಿದರು.
ಅಯೋಗ್ಯ ಕಾಂಗ್ರೆಸ್ಸಿಗರ ಮಾತನ್ನು ಕಟ್ಟಿಕೊಂಡು ಮುಸಲ್ಮಾನರು ಬೀದಿಗಿಳಿದು ಕಲ್ಲೆಸೆಯುವ ಕೆಲಸ ಆಗುತ್ತಿದ್ದು, ಅವರ ಭವಿಷ್ಯವನ್ನೂ ಕಾಂಗ್ರೆಸ್ಸಿನವರು ಹಾಳು ಮಾಡುತ್ತಿದ್ದಾರೆ ಎಂದು ಮುಸಲ್ಮಾನ ಧರ್ಮಗುರುಗಳಿಗೆ ತಿಳಿಸುವುದಾಗಿ ಪ್ರಶ್ನೆಗೆ ಉತ್ತರ ಕೊಟ್ಟರು.

You Might Also Like

ಬಂಗಾಳಕೊಲ್ಲಿಯಲ್ಲಿ ರೆಮಲ್‌ ಚಂಡಮಾರುತ ಆರ್ಭಟ; ಸಾವಿನ ಸಂಖ್ಯೆ 37 ಕ್ಕೆ ಏರಿಕೆ

ಮತದಾರರಿಗೆ ಬೆದರಿಕೆ ಆರೋಪ: ಡಿಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಹಗರಣಗಳ ವಿರುದ್ಧ ಬಿಜೆಪಿ ಕಿಡಿ- ಜು 15ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನ

ಬಿಗ್ ಬಾಸ್​ಗೆ ಕಿಚ್ಚ ಸುದೀಪ್ ವಿದಾಯ, ಮತ್ತೊಮ್ಮೆ ಖಚಿತಪಡಿಸಿದ ನಟ

ಟ್ರಂಪ್ ನಾಲ್ಕು ಬಾರಿ ಕರೆಮಾಡಿದರೂ ಪ್ರತಿಕ್ರಿಯೆ ನೀಡದ ಮೋದಿ..!

TAGGED:#BY VijayendraMaddur RiotsSiddaramaiah
Share This Article
Facebook Copy Link Print
Previous Article Pak Pak Pak ಕಾರಿನ ಮೇಲೆ ಪಾಕಿಸ್ತಾನ ಧ್ವಜ : ಸುಮೊಟೊ ಕೇಸ್ ದಾಖಲಿಸಿದ ಗದಗ ಪೊಲೀಸರು
Next Article Janmabhoomi Teerth Janmabhoomi Teerth Janmabhoomi Teerth ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ನೂತನ ಟ್ರಸ್ಟಿಯಾಗಿ ಕೃಷ್ಣ ಮೋಹನ್ ನೇಮಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up