ಬೆಂಗಳೂರು : 14 ಸೈಟ್ ವಾಪಸ್ ನೀಡುವ ಬಗ್ಗೆ ನನ್ನ ಜೊತೆ ಚರ್ಚಿಸಿಲ್ಲ. ಪತಿಗೆ ಕಳಂಕ ಬರಬಾರದು ಎಂದು ಮನನೊಂದು ಸೈಟ್ ವಾಪಸ್ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮುಡಾ ಹಗರಣ ಸಂಬಂಧ 14 ಸೈಟ್ ವಾಪಸ್ ನೀಡುವುದಾಗಿ ತನ್ನ ಪತ್ನಿ ಪಾರ್ವತಿ ಅವರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೈಟ್ ವಾಪಸ್ ಬಗ್ಗೆ ನನ್ನ ಜೊತೆ ಚರ್ಚಿಸಿಲ್ಲ. ನನ್ನ ಹೆಂಡತಿ ಸ್ವತಂತ್ರ ನಿರ್ಧಾರ ತೆಗೆದುಕೊಂಡಿದ್ದಾರೆ. ನನ ಪತಿಗೆ ತೇಜೋವಧೆ ರಾಜಕೀಯ ದ್ವೇಷ ಮಾಡುತ್ತಿದ್ದಾರೆ. ಹೀಗಾಗಿ ಸೈಟ್ ಬೇಡ ಎಂದು ವಾಪಸ್ ಕೊಟ್ಟಿದ್ದಾರೆ . ಮನನೊಂದು ಸೈಟ್ ವಾಪಸ್ ನೀಡಿದ್ದಾರೆ ಎಂದರು.
ನನ್ನ ಪತ್ನಿ ಜಮೀನನ್ನ ಮುಡಾದವರು ಸ್ವಾಧೀನಪಡಿಸಿಕೊಂಡಿದ್ದರು ಅದಕ್ಕೆ ಬದಲಿ ನಿವೇಶನ ಕೊಡಿ ಎಂದು ಕೇಳಿದ್ದವು. ಆದರೆ ವಿಜಯನಗರದಲ್ಲಿ ನಿವೇಶನ ಕೊಡಿ ಎಂದು ಕೇಳಿರಲಿಲ್ಲ. ಆದರೆ ಮುಡಾ ಅಧಿಕಾರಿಗಳು ವಿಜಯನಗರದಲ್ಲೇ ಸೈಟ್ ಕೊಟ್ಟಿದ್ದರು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ತಮ್ಮ ರಾಜೀನಾಮೆಗೆ ಬಿಜೆಪಿ ನಾಯಕರ ಆಗ್ರಹ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮುಡಾ ಪ್ರಕರಣದಲ್ಲಿ ನನ್ನ ಪಾತ್ರ ಇಲ್ಲ. ನಾನು ತಪ್ಪೇ ಮಾಡಿಲ್ಲ. ಯಾಕೆ ರಾಜೀನಾಮೆ ಕೊಡಬೇಕು ತಪ್ಪು ಮಾಡಿದ್ದರೇ ಮಾತ್ರ ರಾಜೀನಾಮೆ ಕೊಡಬೇಕು ಎಂದರು.
ಪತ್ನಿ ಸೈಟ್ ವಾಪಸ್, ಸಿಎಂ ಟ್ವೀಟ್
ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ. ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ
ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ. ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡಿದ್ದಾರೆ
ಇದು ನನಗೂ ಆಶ್ಚರ್ಯ ಉಂಟಾಗಿದೆ. ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಲ್ಲ. ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆನನಗೆ ವಿಷಾದ ಇದೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ,

