ಬೆಂಗಳೂರು: ನರೇಗಾ ಯೋಜನೆ ಮರುಜಾರಿಗೆ ಒತ್ತಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಹೋರಾಟಕ್ಕೆ ಸಿಎಂ ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಜಿ ರಾಮ್‌ಜಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಹಾಗೂ ಕಾನೂನು ಹೋರಾಟ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದಕ್ಕೆ ಸಂಬಂಧಿಸಿದ ಮಹತ್ವದ ತೀರ್ಮಾನವನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
ನರೇಗಾ ಯೋಜನೆ ಮರು ಜಾರಿಗೆ ಒತ್ತಾಯಿಸುವ ಉದ್ದೇಶದಿಂದ ಜನವರಿ 22ರಿಂದ ರಾಜ್ಯ ವಿಧಾನಮಂಡಲದ ವಿಶೇಷ ಜಂಟಿ ಅಧಿವೇಶನ ಆರಂಭವಾಗಲಿದೆ. ಈ ಅಧಿವೇಶನದ ಮೊದಲ ದಿನವೇ, ಜನವರಿ 22ರಂದು ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಕೇಂದ್ರ ಸರ್ಕಾರ ನರೇಗಾ ಯೋಜನೆ ಅನುಷ್ಠಾನದಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿರುವ ಸಿಎಂ ಸಿದ್ದರಾಮಯ್ಯ, ಈ ವಿಚಾರದಲ್ಲಿ ರಾಜಕೀಯ ಹೋರಾಟದ ಜೊತೆಗೆ ಕೋರ್ಟ್‌ಲ್ಲೂ ಜಿ ರಾಮ್‌ಜಿ ವಿರುದ್ಧ ಹೋರಾಟ ಫಿಕ್ಸ್ ಆಗಿದೆ ಎಂದು ತಿಳಿದುಬಂದಿದೆ. ರಾಜ್ಯದ ಹಿತಾಸಕ್ತಿಗಾಗಿ ಕೇಂದ್ರದ ವಿರುದ್ಧ ಯಾವುದೇ ಹೋರಾಟಕ್ಕೂ ಹಿಂದೇಟು ಇಲ್ಲ ಎಂದು ಸಿಎಂ ಟಗರು ಗುಡುಗಿದ್ದಾರೆ.
ರಾಜ್ಯ ಸರ್ಕಾರದ ಈ ನಡೆ ಮುಂದಿನ ದಿನಗಳಲ್ಲಿ ಕೇಂದ್ರ–ರಾಜ್ಯ ಸಂಬಂಧದಲ್ಲಿ ಮತ್ತಷ್ಟು ರಾಜಕೀಯ ಕಾವು ಮೂಡಿಸುವ ಸಾಧ್ಯತೆ ಇದೆ.

