ಬೆಂಗಳೂರು : ನಾಳೆ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಕಬ್ಬು ಬೆಳೆಗಾರರ ಹೋರಾಟದ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.
ಸಕ್ಕರೆ ಕಾರ್ಖಾನೆಗಳ ಜೊತೆ ಸಭೆ ನಡೆಸಿ ಸಿಎಂ ಸಿದ್ದರಾಮಯ್ಯ ಕಬ್ಬು ಬೆಲೆ ನಿಗದಿಯ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಚರ್ಚೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರ ಜೊತೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತೆ.

