ಸೈದಾಪುರ: ಬಡ ಜನರ ಏಳಿಗೆಗೆ ಮತ್ತು ಅವರ ಅಭಿವೃದ್ಧಿಗಾಗಿ ಶ್ರಮಿಸುವ ಏಕೈಕ ಪಕ್ಷವೆಂದರೆ ಕಾಂಗ್ರೆಸ್, ರಾಜ್ಯದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆ ªಮೂಲಕ ಜನರ ಮೆಚ್ಚುಗೆಗೆ ಪಾತ್ರವಾಗಿದ ಎಂದು ಕಾಂಗ್ರೆಸ್ ಯುವ ಮುಖಂಡ ಚಂದ್ರಶೇಖರ ಕಾವಲಿ (Chandrashekra) ಅಭಿಪ್ರಾಯ ಪಟ್ಟಿದ್ದಾರೆ.

ಬಾಡಿಯಾಲ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ 25 ಗ್ಯಾರೆಂಟಿ ಪ್ರಣಾಳಿಕೆ ಪತ್ರ ಜನರಿಗೆ ನೀಡಿ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚನೆ ಮಾಡಿ ಮಾತನಾಡಿದರು. ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡು ರಾಜ್ಯದ ಬಡ ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದರು. ಇದನ್ನೂ ಓದಿ: ನೇಹಾಳ ಹತ್ಯೆಗೆ ವಾರದಿಂದ ಪೂರ್ವ ತಯಾರಿ ನಡೆಸಿದ್ದ ಫಯಾಜ್
ಸರ್ಕಾರ ನೀಡಿರುವ ಐದು ಗ್ಯಾರಂಟಿ ಯೋಜನೆಗಳ ಮೂಲಕ ಕೂಲಿ ಕಾರ್ಮಿಕರಿಗೆ, ಮಹಿಳೆಯರಿಗೆ ಮತ್ತು ಯುವಕರಿಗೆ ಶಕ್ತಿ ತುಂಬುವ ಮೂಲಕ ಸ್ವಾಭಿಮಾನದ ಜೀವನ ಸಾಗಿಸಲು ನೆರವಾಗಿದೆ. ಅದರಂತೆ ಪ್ರತಿ ಮನೆಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ಹಾಗೂ ಕುಟುಂಬದ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ನೀಡುತ್ತಿರು ವುದರಿಂದ ರಾಜ್ಯದ ಬಹುತೇಕ ಬಡ ಕುಟುಂಬಗಳು ಆರ್ಥಿಕವಾಗಿ ಸಬಲರಾಗುವಂತೆ ಮಾಡಿದೆ ಎಂದಿದ್ದಾರೆ. ಇದನ್ನೂ ಓದಿ: ಮುಂಬೈ ಪೊಲೀಸರಿಂದ ಮಿಲ್ಕಿ ಬ್ಯೂಟಿ ತಮನ್ನಾಗೆ ಸಮನ್ಸ್


