By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ದೆಹಲಿಯಲ್ಲೂ ಕರ್ನಾಟಕದ ‘ಗೃಹಲಕ್ಷ್ಮಿ’ ಮಾದರಿಯ ʼಪ್ಯಾರಿ ದೀದಿ ಯೋಜನೆʼ ಘೋಷಿಸಿದ ಕಾಂಗ್ರೆಸ್
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ದೆಹಲಿಯಲ್ಲೂ ಕರ್ನಾಟಕದ ‘ಗೃಹಲಕ್ಷ್ಮಿ’ ಮಾದರಿಯ ʼಪ್ಯಾರಿ ದೀದಿ ಯೋಜನೆʼ ಘೋಷಿಸಿದ ಕಾಂಗ್ರೆಸ್

BlogLatestMain PostTop Storiesರಾಷ್ಟ್ರೀಯ-National

ದೆಹಲಿಯಲ್ಲೂ ಕರ್ನಾಟಕದ ‘ಗೃಹಲಕ್ಷ್ಮಿ’ ಮಾದರಿಯ ʼಪ್ಯಾರಿ ದೀದಿ ಯೋಜನೆʼ ಘೋಷಿಸಿದ ಕಾಂಗ್ರೆಸ್

Congress Launches 'Pyari Didi Yojana' Offering ₹2,500 Monthly to Delhi Women

Published January 6, 2025
Share
4 Min Read
Pyari Didi Yojana
SHARE

ನವದೆಹಲಿ: ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ದೆಹಲಿ ಕಾಂಗ್ರೆಸ್ ನ ಚುನಾವಣೆ ಪ್ರಣಾಳಿಕೆಯ ಭಾಗವಾಗಿ ಮೊದಲ ಗ್ಯಾರಂಟಿ ಭರವಸೆಯನ್ನು ಘೋಷಿಸಿದರು.

ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ʼಗೃಹಲಕ್ಷ್ಮಿʼ ಮಾದರಿಯಲ್ಲಿ “ಪ್ಯಾರಿ ದೀದಿ ಯೋಜನೆ” ಮೂಲಕ ದೆಹಲಿ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡುವ ಗ್ಯಾರಂಟಿ ಭರವಸೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪ್ರಕಟಿಸಿದರು.

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಅವರು ದೆಹಲಿ ಕಾಂಗ್ರೆಸ್ ನ ಚುನಾವಣೆ ಪ್ರಣಾಳಿಕೆಯ ಭಾಗವಾಗಿ ಮೊದಲ ಗ್ಯಾರಂಟಿ ಭರವಸೆಯನ್ನು ಘೋಷಿಸಿದರು. ಇದೇ ವೇಳೆ ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಫಲಾನುಭವಿಗಳ ಕುಟುಂಬಗಳಲ್ಲಿ ಆಗಿರುವ ಬದಲಾವಣೆ, ನೆರವಿನ ಕುರಿತ ವಿಡಿಯೋಗಳನ್ನು ಪ್ರಸಾರ ಮಾಡಲಾಯಿತು.

ಡಿಕೆಶಿ ಹೇಳಿದ್ದೇನು..?
ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ “ಪ್ಯಾರಿ ದೀದಿ ಯೋಜನೆ” ಜಾರಿ ಮಾಡಿ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ನೀಡಲಾಗುವುದು. ಉಳಿದ ಗ್ಯಾರಂಟಿ ಯೋಜನೆಯನ್ನು ಮುಂದಿನ ದಿನಗಳಲ್ಲಿ ನಮ್ಮ ನಾಯಕರು ತಿಳಿಸಲಿದ್ದಾರೆ” ಎಂದು ಹೇಳಿದರು.

“ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿ ಹಾಗೂ ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ನಾನಿಂದು ಇಲ್ಲಿ ಪ್ರಮುಖ ಯೋಜನೆಯ ಭರವಸೆ ನೀಡುತ್ತಿದ್ದೇನೆ. ನೂರು ವರ್ಷಗಳ ಹಿಂದೆ ಅಂದರೆ 1924ರ ಡಿ.26 ರಂದು ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾದರು. ಅದರ ಶತಮಾನೋತ್ಸವವನ್ನು ನಾವು ಇತ್ತೀಚೆಗಷ್ಟೇ ಆಚರಿಸಿದ್ದೇವೆ. ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಾಗದಲ್ಲಿ ಇರುವ ಬಾವಿಯಲ್ಲಿನ ನೀರು ತೆಗೆದುಕೊಂಡು ಸಿದ್ದರಾಮಯ್ಯ ಅವರು ಸೇರಿದಂತೆ ನಮ್ಮ ಪಕ್ಷದ ನಾಯಕರು ಅಲ್ಲಿನ ಜಾಗವನ್ನು ಸ್ವಚ್ಛ ಮಾಡಿ ಕರ್ನಾಟಕ ರಾಜ್ಯವನ್ನು ಭ್ರಷ್ಟ ಸರ್ಕಾರದಿಂದ ಮುಕ್ತಗೊಳಿಸುವ ಪಣತೊಟ್ಟೆವು. ಇದೇ ಸಂದರ್ಭದಲ್ಲಿ ನಮ್ಮ ಪಕ್ಷದ ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿಯನ್ನು ಘೋಷಣೆ ಮಾಡಲಾಯಿತು.

ನಂತರ ಗೃಹಲಕ್ಷ್ಮಿ ಯೋಜನೆಯನ್ನು ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರು ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಅವರು ಇದು ಕೇವಲ ಭರವಸೆಯಾಗಬಾರದು. ಈ ಯೋಜನೆ ಜಾರಿ ಬಗ್ಗೆ ಜನರಲ್ಲಿ ನಂಬಿಕೆ ಹುಟ್ಟಬೇಕು ಎಂದು ಹೇಳಿದರು. ಹೀಗಾಗಿ ನಾನು ಹಾಗೂ ಸಿದ್ದರಾಮಯ್ಯ ಅವರು ಗ್ಯಾರಂಟಿ ಚೆಕ್ ಗೆ ಸಹಿ ಹಾಕಿದೆವು. ನಂತರ ಸರ್ಕಾರ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಅನುಮೋದನೆ ನೀಡಲಾಯಿತು.

ಮೊದಲ ಮೂರು ತಿಂಗಳಲ್ಲಿ ಎಲ್ಲಾ ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು. ಕರ್ನಾಟಕ ರಾಜ್ಯದಲ್ಲಿ ಮಹಿಳೆಯರು ಉಚಿತ ಸರ್ಕಾರಿ ಬಸ್ ಪ್ರಯಾಣ ಮಾಡುತ್ತಿದ್ದಾರೆ. ಬಡವರಿಗೆ 10 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ನಿರುದ್ಯೋಗ ಯುವಕರಿಗೆ ನಿರುದ್ಯೋಗ ಭತ್ಯೆ, ಪ್ರತಿ ಮನೆಗೆ 200 ಯೂನಿಟೆ ವರೆಗೂ ಉಚಿತ ವಿದ್ಯುತ್, ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ನೀಡಲಾಗುತ್ತಿದೆ” ಎಂದರು ಹೇಳಿದರು.

ಮಾಸಿಕ 4-5 ಸಾವಿರ ಉಳಿತಾಯ: ಈ ಯೋಜನೆಗಳಿಗಾಗಿ 56 ಸಾವಿರ ಕೋಟಿ ಹಣವನ್ನು ಬಜೆಟ್ ನಲ್ಲಿ ಮೀಸಲಿಡಲಾಗಿದೆ. 1.22 ಕೋಟಿ ಮಹಿಳೆಯರು ಪ್ರತಿ ತಿಂಗಳು 2 ಸಾವಿರ ಹಣ ಪಡೆಯುತ್ತಿದ್ದಾರೆ. ಈ ಯೋಜನೆಯಿಂದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಲ್ಲಿ ಆರ್ಥಿಕ ಬದಲಾವಣೆ ತರಲಾಗಿದೆ. ಪ್ರತಿ ತಿಂಗಳು 4-5 ಸಾವಿರ ಉಳಿತಾಯವಾಗುತ್ತಿದೆ. ಇದರಿಂದ ರಾಜ್ಯದ ಆರ್ಥಇಕತೆ ಪ್ರಗತಿ ಸಾಧಿಸುತ್ತಿದೆ. ಸಮಾಜದ ಪ್ರತಿ ವರ್ಗದ ಹಿತವನ್ನು ಕಾಯಬೇಕು ಎಂಬುದು ಮಹಾತ್ಮಾ ಗಾಂಧಿ ಅವರ ಸಂದೇಶವಾಗಿತ್ತು. ಹೀಗಾಗಿ ನಮ್ಮ ಸರ್ಕಾರ ಈ ಯೋಜನೆ ಜಾರಿ ಮಾಡಿದೆ” ಎಂದು ತಿಳಿಸಿದರು.

“ನಾವು ಇಲ್ಲಿ ತೋರಿಸಿರುವ ವಿಡಿಯೋಗಳು ನಾವು ಮಾಡಿರುವುದಲ್ಲ. ಮಾಧ್ಯಮಗಳು ವರದಿ ಮಾಡಿರುವ ವಿಡಿಯೋಗಳನ್ನು ನಿಮ್ಮ ಮುಂದೆ ಇಟ್ಟಿದ್ದೇವೆ. ಈ ಯೋಜನೆಯಲ್ಲಿ ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡಲು ಯಾವುದೇ ಮಧ್ಯವರ್ತಿಗಳಿಲ್ಲ. ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ರವಾನಿಸಲಾಗುತ್ತಿದೆ” ಎಂದರು.

ಟೀಕಿಸಿದವರಿಂದಲೇ ನಮ್ಮ ಯೋಜನೆ ನಕಲು: “ನಾವು ಈ ಯೋಜನೆ ಘೋಷಣೆ ಮಾಡಿದಾಗ, ದೇಶದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಕರ್ನಾಟಕ ಸರ್ಕಾರ ದಿವಾಳಿಯಾಗಲಿದೆ ಎಂದು ಮಧ್ಯಪ್ರದೇಶದಲ್ಲಿ ಹೇಳಿದರು. ನಂತರ ಮಹಾರಾಷ್ಟ್ರದಲ್ಲೂ ನಮ್ಮ ಯೋಜನೆ ವಿರುದ್ಧ ಅಪಪ್ರಚಾರ ಮಾಡಿದರು. ಅಂತಿಮವಾಗಿ ಎಲ್ಲಾ ರಾಜ್ಯಗಳ ಚುನಾವಣೆಯಲ್ಲೂ ಅವರೇ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವುದು ರಾಜಕೀಯ ಉದ್ದೇಶಕ್ಕಾಗಿ ಅಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಕಲ್ಯಾಣಕ್ಕಾಗಿ, ರಕ್ಷಣೆಗಾಗಿ ಈ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ” ಎಂದು ತಿಳಿಸಿದರು.

“ಮೋದಿ ಅವರ ಸರ್ಕಾರ ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿತ್ತು. ಆದರೆ ಬೆಲೆಗಳನ್ನು ಡಬಲ್ ಮಾಡಿತು. ಜನಧನ್ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಹೇಳಿದಂತೆ ಭರವಸೆ ಈಡೇರಿಸಲಿಲ್ಲ. ಬಿಜೆಪಿ ಸರ್ಕಾರಗಳು ಕೊಟ್ಟ ಮಾತನ್ನು ಎಂದಿಗೂ ಉಳಿಸಿಕೊಂಡಿಲ್ಲ. ಆದರೂ ನಮ್ಮ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡುತ್ತಿವೆ.

ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಆಹಾರ ಭದ್ರತಾ ಕಾಯ್ದೆ, ಶೈಕ್ಷಣಿಕ ಹಕ್ಕು, ಗ್ರಾಮೀಣ ಉದ್ಯೋಗ ಖಾತರಿ, ಮಾಹಿತಿ ಹಕ್ಕು ಸೇರಿದಂತೆ ಸಂವಿಧಾನಿಕ ತಿದ್ದುಪಡಿ ಮೂಲಕ ಗ್ಯಾರಂಟಿ ಯೋಜನೆ ನೀಡಲಾಗಿತ್ತು. ಕಾಂಗ್ರೆಸ್ ಪಕ್ಷ ಸುದೀರ್ಘ ಅವಧಿಗಳ ಕಾಲ ದೇಶವನ್ನು ಆಳಿದೆ. ಮತ್ತೆ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಒಳ್ಳೆಯ ದಿನಗಳು ಮತ್ತೆ ಬರಲಿವೆ. ದೆಹಲಿ ಹಾಗೂ ಇಲ್ಲಿನ ಜನರ ಬದುಕಿನಲ್ಲಿ ಬದಲಾವಣೆ ತರಲು ಜನರು ನಮಗೆ ಮತ್ತೊಂದು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ” ಎಂದು ತಿಳಿಸಿದರು.

You Might Also Like

ಟೊಮ್ಯಾಟೋ ಬೆಲೆ ದಿಢೀರ್ ಏರಿಕೆ, ಗ್ರಾಹಕರು ಕಂಗಾಲು , ರೈತರಲ್ಲಿ ಸಂತಸ

KSRTC ಬಸ್ ಕಿಟಕಿಯಲ್ಲಿ ಮಹಿಳೆಯ ತಲೆ ಲಾಕ್

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹೋಮ–ಹವನ

ಇಂದು ಟಿ20 ವಿಶ್ವಕಪ್‌ ‘ಫೈನಲ್‌ ವಾರ್‌’ : ಟೀಮ್ ಇಂದಿಗೆ ಗೆಲುವಿಗಾಗಿ ಹೋಮ-ಹವನ

ಬೆಂಗಳೂರಿನ ಸರ್ಜಾಪುರದಲ್ಲಿ ನಡೆದ ಡೆಡ್ಲಿ ಆಕ್ಸಿಡೆಂಟ್ ಕ್ಯಾಮೆರಾದಲ್ಲಿ ಸೆರೆ

TAGGED:CongressDelhi Assembly ElectionPyari Didi Yojana
Share This Article
Facebook Copy Link Print
Previous Article HMPV Virus ಗುಜರಾತ್ : ಅಹಮದಾಬಾದ್‌ನಲ್ಲಿ ದೇಶದ 3ನೇ HMPV ಪ್ರಕರಣ ಪತ್ತೆ
Next Article Nelamangala ಹಸುವನ್ನ ಕೊಂದು ತಿಂದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up