By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಹೊಸಪೇಟೆಯಲ್ಲಿ ಕಾಂಗ್ರೆಸ್ “ಸಮರ್ಪಣೆ ಸಂಕಲ್ಪ’ ಸಮಾವೇಶ, 111111 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಹೊಸಪೇಟೆಯಲ್ಲಿ ಕಾಂಗ್ರೆಸ್ “ಸಮರ್ಪಣೆ ಸಂಕಲ್ಪ’ ಸಮಾವೇಶ, 111111 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

ರಾಜ್ಯ-KarnatakaLatest

ಹೊಸಪೇಟೆಯಲ್ಲಿ ಕಾಂಗ್ರೆಸ್ “ಸಮರ್ಪಣೆ ಸಂಕಲ್ಪ’ ಸಮಾವೇಶ, 111111 ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Congress “Samarpane Sankalpa” conference in Hospet, d

Published May 20, 2025
Share
2 Min Read
Siddaramaiah Siddaramaiah Siddaramaiah
SHARE

ಹೊಸಪೇಟೆ : ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭಕ್ಕೆ ಕಂದಾಯ ಇಲಾಖೆ ಆಯೋಜಿಸಿದ್ದ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ ಎಂದ ಸಿ.ಎಂ ಸಿದ್ದರಾಮಯ್ಯ ಅವರು ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.

ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದರು.

ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.

2014 ರಲ್ಲಿ 10000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ ಎಂದರು. ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು.

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದರು.

ಬಿಜೆಪಿ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ
ನಮಗೂ ಬಿಜೆಪಿ ಅವರಿಗೆ ಬಹಳ ವ್ಯತ್ಯಸ ಇದೆ. ಅವರು ಧರ್ಮ ಧರ್ಮ ಜಾತಿ ಜಾತಿಗಳ ಒಡೆಯುತ್ತಾರೆ. ಆದರೆ ನಾವು ಎಲ್ಲಾ ಜಾತಿ ಧರ್ಮಗಳನ್ನ ಒಂದು ಮಾಡುತ್ತೇವೆ. ಅಂಬೇಡ್ಕರ್ ಕೊಟ್ಟ ಸಂವಿಧಾನದ ರೀತಿಯಲ್ಲಿ ಸಮಾಜವನ್ನು ಬೆಳಸುತ್ತಿದ್ದೇವೆ. ಗಾಂಧೀಜಿ ಸರ್ವೋದಯ ಅಂದ್ರು ಅದನ್ನ ನಾವು ಪಾಲನೆ ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ರು.

ಕಳೆದ ಎರಡು ವರ್ಷದಲ್ಲಿ ಕೇಂದ್ರ ಸರ್ಕಾರ ಅನೇಕ ಅನ್ಯಾಯ ಮಾಡಿದೆ. ಕೆಂದ್ರ ಸರ್ಕಾರ ತೆರಿಗೆಯಲ್ಲಿ ಪಾಲು ಕೊಟ್ಟಿಲ್ಲ. ನಮಗೆ ಇನ್ನೂ 13 ಸಾವಿರ ಕೋಟಿ ಕೊಡಬೇಕಿದೆ. ನಾವು ಪ್ರತೀ ವರ್ಷ ನಾಲ್ಕೂವರೆ ಲಕ್ಷ ಕೋಟಿ ಕೇಂದ್ರ ಸರ್ಕಾರಕ್ಕೆ ತೆರಿಗೆ ಕೊಡುತ್ತೇವೆ. ಅದ್ರೆ ಅವರು ನಮಗೆ ಕೇವಲ 65 ಸಾವಿರ ಕೋಟಿ ಕೊಡುತ್ತಾರೆ. ಅಂದರೆ ನಾವು ನೂರು ರೂಪಾಯಿ‌ಕೊಟ್ಟರೆ ಅವರು ಕೇವಲ 15 ರೂಪಾಯಿ ಅಷ್ಟೇ ಕೊಡುತ್ತಾರೆ. ಪ್ರತೀ ವರ್ಷ ನಮ್ಮ ಪಾಲನ್ನ ನಮಗೆ ಸರಿಯಾಗಿ ಕೊಡುತ್ತಿಲ್ಲ, ನಮ್ಮ ಪಾಲನ್ನ ನಮಗೆ ಸರಿಯಾಗಿ ಕೊಡಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

You Might Also Like

3 ನೇ ಬಾರಿ ಪ್ರಧಾನಿಯಾಗಿ ಮೋದಿ ಜೂ.9 ರಂದು ಪ್ರಮಾಣ ವಚನ

71 ಗಣ್ಯ ವ್ಯಕ್ತಿಗಳಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ಬಿಎಸ್​​​ಎನ್​​ಎಲ್​ ಸ್ವದೇಶಿ 4G ನೆಟ್‌ವರ್ಕ್ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಆತಂಕ ಹುಟ್ಟಿಸಿದ ಡೆಂಗ್ಯೂ ಪ್ರಕರಣಗಳು- ವಿಫಲವಾಯ್ತಾ ಸರ್ಕಾರ?

TAGGED:CongressHosapete
Share This Article
Facebook Copy Link Print
Previous Article dgdgdgdg 1 dgdgdgdg 1 dgdgdgdg 1 ಮಳೆ ನೀರಿನಲ್ಲಿ ಕೊಚ್ಚಿ ಹೋದ ಬ್ರಾಂಡ್ ಬೆಂಗಳೂರು
Next Article DK Shivakumar DK Shivakumar : ಸಾಧನಾ ಸಂಕಲ್ಪ ಸಮಾವೇಶದಲ್ಲಿ 7ನೇ ಗ್ಯಾರಂಟಿ ಭರವಸೆ ನೀಡಿದ ಡಿಕೆಶಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up