ಬೆಂಗಳೂರು: ಗಾಂಧಿ ಜಯಂತಿ ಕಾರ್ಯಕ್ರಮದ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯನವರ ಬೂಟುಗಳನ್ನು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಬಿಚ್ಚಿದ್ದರು. ಈ ವೇಳೆ ಆತ ಕೈಯಲ್ಲಿ ಹಿಡಿದಿದ್ದ ತ್ರಿವರ್ಣ ಸಿದ್ದರಾಮಯ್ಯನವರ ಶೂಗಳನ್ನು ತಾಗುತ್ತಿತ್ತು. ಇದರ ವಿಡಿಯೋ ವೈರಲ್ ಆಗಿದೆ.
ಮಹಾತ್ಮ ಗಾಂಧೀಜಿಯವರ 155ನೇ ಜನ್ಮದಿನಾಚರಣೆ ಅಂಗವಾಗಿ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೂಟುಗಳನ್ನು ಕಾಂಗ್ರೆಸ್ ಕಾರ್ಯಕರ್ತರೊಬ್ಬರು ತೆಗೆಸಿದ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಕಾಂಗ್ರೆಸ್ ಪಕ್ಷವು ದೇಶ ಮತ್ತು ರಾಷ್ಟ್ರಧ್ವಜಕ್ಕೆ ಅಗೌರವ ತೋರುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. “ಕಾಂಗ್ರೆಸ್ ಪಕ್ಷಕ್ಕೆ ದೇಶದ ಮೇಲೆ ಗೌರವವಿಲ್ಲ, ರಾಷ್ಟ್ರಧ್ವಜಕ್ಕೂ ಗೌರವವಿಲ್ಲ. ರಾಜಕೀಯ ಜೀವನದ ಮುಸ್ಸಂಜೆಯಲ್ಲಿರುವ ಸಿದ್ದರಾಮಯ್ಯನವರಿಗೆ ಕುರ್ಚಿ ಉಳಿಸಿಕೊಳ್ಳುವ ಚಿಂತೆ. ಹೀಗಾಗಿ ರಾಷ್ಟ್ರಧ್ವಜ ಹಿಡಿದರೂ ಮೈಮರೆತಿದ್ದಾರೆ” ಎಂದು ಬಿಜೆಪಿ ಕರ್ನಾಟಕ ಬರೆದುಕೊಂಡಿದೆ.
ತ್ರಿವರ್ಣ ಧ್ವಜಕ್ಕೆ ಅಗೌರವ ತೋರುತ್ತಿರುವ ವೈರಲ್ ವಿಡಿಯೋ ಕುರಿತು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವಾಗ್ದಾಳಿ ನಡೆಸಿದ್ದಾರೆ ಈ ಕೃತ್ಯದ ಬಗ್ಗೆ ಸಿದ್ದರಾಮಯ್ಯ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

