ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಮೈಸೂರಿನಲ್ಲಿ ಆಕ್ರೋಶ ಭುಗಿಲೆದ್ದಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ಮಾಡಿ ರಾಜ್ಯಪಾಲರ ನಡೆ ಖಂಡಿಸಿ ಕಿಡಿ ಕಾರಿದರು. ಬಿಜೆಪಿ ಜೆಡಿಎಸ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಮೈಸೂರು ಬಂದ್ :
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಷಿಕ್ಯೂಶನ್‌ಗೆ ಅನುಮತಿ ಖಂಡಿಸಿ ನಾಳೆ ಮೈಸೂರು ಬಂದ್‌ಗೆ ಅಹಿಂದ ಸಂಘಟನೆ ಕರೆ ನೀಡಿದೆ. ಮೈಸೂರಿನ ಖಾಸಗಿ ಭವನದಲ್ಲಿ ನಡೆದ ಅಹಿಂದ, ಶೋಷಿತ ವರ್ಗ, ಸಿದ್ದರಾಮಯ್ಯ ಅಭಿಮಾನಿಗಳಿಂದ ಪೂರ್ವಭಾವಿ ಸಭೆಯಲ್ಲಿ ಈ ಮೈಸೂರು ಬಂದ್ ಗೆ ತೀರ್ಮಾನ ಕೈಗೊಳ್ಳಲಾಗಿದೆ. ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ಸುಬ್ರಹಣ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

